ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಆರ್.ಟಿ.ಪಿ.ಎಸ್, ವೈಟಿಪಿಎಸ್ ನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Advertisement
ರಾಯಚೂರು,ಏ.26(ಕ.ವಾ):- ಪ್ರತಿ ವರ್ಷ ಹೇಗೆ ಯುಗಾದಿ ಹಬ್ಬ ಬರುತ್ತದೆ ಹಾಗೇ ಚುನಾವಣೆಗಳು ಬರುತ್ತವೆ, ಪತ್ರಿ ದಿನ ದಿನಪತ್ರಿಕೆಗಳಲ್ಲಿ ಚುನಾವಣೆ ಬಗ್ಗೆ ವಿಮರ್ಶೆಗಳನ್ನ ಬಗ್ಗೆ ಗಮನ ಕೊಡಿ, ನಮ್ಮ ಮನಸ್ಸಿನಲ್ಲಿ ಇರುವಂತ ತಪ್ಪು ಚಿಂತನೆಗಳನ್ನು ಬಿಟ್ಟು ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಅವರು ಹೇಳಿದರು.

ಅವರು ಏ.25(ಮಂಗಳವಾರ) ತಾಲೂಕಿನ ಶಕ್ತಿನಗರ ಹಾಗೂ ಯರಮರಸ್‍ನ ಆರ್.ಟಿ.ಪಿ.ಎಸ್ ಹಾಗೂ ವೈಟಿಪಿಎಸ್‍ನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.



2014ರ ಮತ ಏಣಿಕೆ ನೋಡಿದರೆ ಅತೀ ಕಡಿಮೆ ಮತದಾನ ಆದಂತ ಜಿಲ್ಲೆ ರಾಯಚೂರು, ಯಾವ ಪ್ರದೇಶದಲ್ಲಿ ಕಡಿಮೆ ಮತದಾನ ಆಗುತ್ತದೆ ಎಂದು ನೋಡಿದರೆ ಶಕ್ತಿನಗರ, ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬರು ಉತ್ಸಾಹ ದಿಂದ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದರು.

ಪ್ರತಿಯೊಬ್ಬ ಪ್ರಜೆಯೂ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಮತದಾನ ಮಾಡಿ, ಮತದಾನದಲ್ಲಿ ಪಾಲಗೊಳ್ಳಬೇಕೆಂದು ಹೇಳಿದರು.



ಮತದಾನದಂದು ಅಂಗವಿಕಲರಿಗೆ, ವಿಕಲಚೇತನರಿಗೆ ಮತಗಟ್ಟಿಗೆ ಬರುವಂತ ವ್ಯವಸ್ಥೆಯಲ್ಲಿ ಜಿಲ್ಲಾಧಿಕಾರಿಗಳ ಕಲ್ಪಸುತ್ತಾರೆ, ನಿಮ್ಮ ಮನೆಯ ಅಕ್ಕ ಪಕ್ಕದಲ್ಲಿ ಇರುವಂತ ಅವರಿಗೆ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಿ, ಮೇ 10 ರಂದು ಮತದಾನದ ಅರ್ಹ ಪಟ್ಟಿಯಲ್ಲಿ ಇರುವಂತ ಅವರನ್ನು ಕರೆತಂದು ಚುನಾವಣೆ ಎಂಬ ಮತದಾನ ಹಬ್ಬದಲ್ಲಿ ಭಾಗವಹಿಸಿ ಎಂದು ಹೇಳಿದರು.

ಈ ಹಿಂದೆ ರಾಯಚೂರಿನಲ್ಲಿ ಮತದಾನ ಶೇಕಡವಾರ 80 ತನ್ನು ಈ ವರ್ಷ 90 ರಷ್ಟು ಮತ ಬರುವ ಭರವಸೆ ಇದೆ ಎಂದು ಹೇಳಿದರು.

ಇದೇ ವೇಳೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿ, ಶಕ್ತಿನಗರ ಆರ್‍ಟಿಪಿಎಸ್ ಹಾಗೂ ವೈಟಿಪಿಎಸ್‍ನಲ್ಲಿ ಇರುವಂತ ಪ್ರದೇಶ, ಈ ಒಂದು ಮತದಾನ ಜಾಗೃತಿ ಕಾರ್ಯಕ್ರಮವನ್ನು ಸದುಉಪಯೋಗ ಪಡೆದುಕೊಳ್ಳುತ್ತೀರಿ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ತಾ.ಪಂ ಇಒ ರಾಮರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್