ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಇಸ್ರೇಲ್ ಸಂಘರ್ಷದ ಹಿನ್ನೆಲೆ: ವಿಜಯರತ್ನ ಸಾಧಕರು ಸುರಕ್ಷಿತ

Advertisement
BB NEWS KANNADA

ಇಸ್ರೇಲ್ ಸಂಘರ್ಷ ವಿಜಯರತ್ನ ಸಾಧಕರು ಸುರಕ್ಷಿತ

ಮಾಹಿತಿ ಹಂಚಿಕೊಂಡ ಡಾ. ಶಿವರಾಜ್ ಪಾಟೀಲ್

ಮಾರ್ಚ್ 01. ದುಬೈ: ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ Dubai International Airportನಲ್ಲಿ ವಿಮಾನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಸಂದರ್ಭದಲ್ಲೂ, ಕರ್ನಾಟಕದ ವಿಜಯರತ್ನ ಇಂಟರ್ನ್ಯಾಷನಲ್ ಅವಾರ್ಡ್ ಸಮಾರಂಭಕ್ಕೆ ತೆರಳಿದ್ದ ಎಲ್ಲ ಸಾಧಕರು ಸುರಕ್ಷಿತವಾಗಿದ್ದಾರೆ ಎಂಬ ಮಹತ್ವದ ಮಾಹಿತಿಯನ್ನು ವಿಜಯ ರತ್ನ ಪ್ರಶಸ್ತಿ ಪುರಸ್ಕೃತರಾದ ಹಾಗೂ ಸಿಂಧನೂರಿನ ಸಹನಾ ಮಕ್ಕಳ ಆಸ್ಪತ್ರೆಯ ವೈದ್ಯರಾದ Dr. Shivaraj Patil ಅವರು ಸ್ವತಃ ಹಂಚಿಕೊಂಡಿದ್ದಾರೆ.

Dubaiನಲ್ಲಿ ವಿಜಯವಾಣಿ ವತಿಯಿಂದ ಆಯೋಜಿಸಲಾದ ‘ವಿಜಯ ರತ್ನ ಇಂಟರ್ನ್ಯಾಷನಲ್ ಅವಾರ್ಡ್–2026’ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 27 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಸಮಾರಂಭಕ್ಕೆ ತೆರಳಿದ್ದ 27 ಸಾಧಕರು, ಅವರ ಕುಟುಂಬಸ್ಥರು ಹಾಗೂ ವಿಜಯವಾಣಿ ಸಿಬ್ಬಂದಿ ಸೇರಿ ಒಟ್ಟು 64 ಜನರು ದುಬೈನಲ್ಲಿ ತಂಗಿದ್ದಾರೆ.

“ನಾವು ಎಲ್ಲರೂ ಸುರಕ್ಷಿತವಾಗಿದ್ದೇವೆ”

ಈ ಕುರಿತು ಪ್ರತಿಕ್ರಿಯಿಸಿದ ಡಾ. ಶಿವರಾಜ್ ಪಾಟೀಲ್ ಅವರು,

“ಫ್ಲೈಟ್ಸ್ ಕ್ಯಾನ್ಸಲ್ ಆಗಿದ್ದು ಹಾಗೂ ಏರ್ಪೋರ್ಟ್ ಕ್ಲೋಸ್ ಆಗಿರುವುದನ್ನು ಬಿಟ್ಟರೆ ಇಲ್ಲಿ ಯಾವುದೇ ಸಮಸ್ಯೆ ಇಲ್ಲ. ಪೂರ್ತಿ ರಾತ್ರಿ ಸೆಕ್ಯೂರಿಟಿ ಅಲರ್ಟ್ ಇತ್ತು. ಆದರೆ ನಾವು ಎಲ್ಲರೂ ಚೆನ್ನಾಗಿದ್ದೇವೆ ಮತ್ತು ಸುರಕ್ಷಿತವಾಗಿದ್ದೇವೆ. ನಮ್ಮ ಜೊತೆ ಡಾ. ಆನಂದ್ ಸಂಕೇಶ್ವರರು ಇದ್ದಾರೆ,” ಎಂದು ತಿಳಿಸಿದ್ದಾರೆ.

ಡಾ. ಆನಂದ್ ಸಂಕೇಶ್ವರರ ಮೇಲ್ವಿಚಾರಣೆ

ವಿ ಆರ್ ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ Dr. Anand Sankeshwar ಅವರು ಖುದ್ದಾಗಿ ಎಲ್ಲಾ ವ್ಯವಸ್ಥೆಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಪ್ರತಿಷ್ಠಿತ ಹೋಟೆಲ್‌ನಲ್ಲಿ ಊಟ, ಉಪಹಾರ ಹಾಗೂ ವಾಸ್ತವ್ಯದ ಸಕಲ ವ್ಯವಸ್ಥೆ ಮಾಡಲಾಗಿದೆ.

ಕುಟುಂಬಸ್ಥರಿಗೆ ನಿಟ್ಟುಸಿರು

ಸಾಧಕರ ಸುರಕ್ಷತೆ ಬಗ್ಗೆ ಡಾ. ಶಿವರಾಜ್ ಪಾಟೀಲ್ ಅವರು ನೀಡಿದ ಮಾಹಿತಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ನಿಟ್ಟುಸಿರು ತಂದಿದೆ. ವಿಜಯರತ್ನ ಇಂಟರ್ನ್ಯಾಷನಲ್ ಅವಾರ್ಡ್ ಸಮಾರಂಭಕ್ಕೆ ತೆರಳಿದ್ದ ಎಲ್ಲಾ ಕನ್ನಡಿಗರು ಕ್ಷೇಮವಾಗಿರುವುದು ಸಮಾಧಾನಕರ ಸಂಗತಿಯಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ