ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉದ್ಬಾಳ (ಯು) ಗ್ರಾಮ ಪಂಚಾಯತ್ ಕಚೇರಿಗೆ ಇ.ಒ ಅಮರೇಶ ಯಾದವ್ ಭೇಟಿ

Advertisement


ಬಡವರ ಬಾರುಕೋಲು ಸುದ್ದಿ
ಮಸ್ಕಿ
: ಸಮೀಪದ ಉದ್ಬಾಳ (ಯು) ಗ್ರಾಮ ಪಂಚಾಯತಿಯ ಕಚೇರಿಗೆ ತಾಲೂಕು ಪಂಚಾಯತಿಯ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ್ ಅವರು ಶುಕ್ರವಾರ ಭೇಟಿ ನೀಡಿ ಗ್ರಾಂ.ಪಂಚಾಯತಿ ವತಿಯಿಂದ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಡೆದಿರುವ ಕಾಮಗಾರಿಗಳ ಕಡತಗಳು,ಕುಡಿಯುವ ನೀರಿನ ನಿರ್ವಾಹಣೆಯ ಬಗ್ಗೆ,ಶುದ್ದ ಕುಡಿಯುವ ನೀರಿನ ಘಟಕಗಳು ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತೀವೆ ಎನ್ನುವ ಕುರಿತು ಮಾಹಿತಿ ಪಡೆದುಕೊಂಡರು ಹಾಗೂ ಕರ ವಸೂಲಾತಿಯ ಕುರಿತು ಪರಿಶೀಲಿಸಿ ಪ್ರಗತಿ ಸಾಧಿಸಲು ಸೂಚಿಸಿದರು.

ಸನ್ಮಾನ ಮಾಡಿದ ಗ್ರಾಂ. ಪಂ.ಅಧ್ಯಕ್ಷರು:-


ಗ್ರಾಮ ಪಂಚಾಯತಿಯ ಕಚೇರಿಗೆ ಭೇಟಿ ನೀಡಿದ ಇ.ಒ ಅಮರೇಶ ಯಾದವ್ ಅವರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ನೀಲಕಂಠಪ್ಪ ನಾಯಕ ರವರು ಗ್ರಾಮ ಪಂಚಾಯತಿಯ ಸಿಬ್ಬಂದಿಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿ ಸತ್ಕರಿಸಿದರು.

ನಂತರ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಕಾಮಗಾರಿಗಳ ಸ್ಥಳಗಳನ್ನು ವೀಕ್ಷಣೆ ಮಾಡಿ ಪರಿಶೀಲನೆ ನಡೆಸಲು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿನ ವಾಸ್ತವ ಸ್ಥಿತಿಯನ್ನು ಮತ್ತು ಪಂಚಾಯತಿ ವತಿಯಿಂದ ಆಗಬೇಕಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.ಹಾಗೂ ಶಾಲೆಯಲ್ಲಿರುವ ಅಡುಗೆ ಕೋಣೆಯ ಕಾಮಗಾರಿಯ ಸ್ಥಳಕ್ಕೆ ಮತ್ತು ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೀಕ್ಷಿಸಿ ಗ್ರಾಮದ ಅಭಿವೃದ್ಧಿ ಕೆಲಸಗಳನ್ನು ಮಾಡಿ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆ ಕೆಲಸ ನೀಡಬೇಕು ಎಂದು ಸಲಹೆ ನೀಡಿದರು.


ಇದೇ ಸಂದರ್ಭದಲ್ಲಿ
ಗ್ರಾಮ ಪಂಚಾಯತ್ ಅಧ್ಯಕ್ಷ ನೀಲಕಂಠಪ್ಪ ನಾಯಕ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಾಜ ಗುಡದೂರು,ಗ್ರೇಡ್ 2 ಕಾರ್ಯದರ್ಶಿ ತಿಮ್ಮಣ್ಣ ದಿದ್ದಿಗಿ,ದೊಡ್ಡಯ್ಯಸ್ವಾಮಿ, ಅಮರೇಶಗೌಡ,BFT ಭೀರಪ್ಪ ಕ್ಯಾತ್ನಟ್ಟಿ,ಅಯ್ಯಪ್ಪ,ರಂಗ ರಾವ್ ಕುಲಕರ್ಣಿ ಕ್ಯಾತ್ನಟ್ಟಿ ಹಾಗೂ ಇನ್ನಿತರರು ಇದ್ದರು.

ವರದಿ : ಎಚ್.ಕೆ.ಬಡಿಗೇರ್

ಸರ್ಕಾರಿ ವೈದ್ಯರ ವಿರುದ್ಧ ಉಗ್ರ ಪ್ರತಿಭಟ

https://youtu.be/f5kS7ocuCC0?si=qU7atDiOj8c5MSF3
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ