ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಂ.ಎಸ್.ಎ.ಇ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Advertisement
ರಾಯಚೂರು,ಜೂ.೨೧,ಭಾರತ ಸರ್ಕಾರದ ಎಂ.ಎಸ್.ಎA.ಇ. ಯೋಜನೆಯಡಿ ೨೦೨೪-೨೫ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ವಿದ್ಯಾವಂತ ಯುವಕ, ಯುವತಿಯರಿಗೆ, ಕಸಬುದಾರರಿಗೆ ಅತೀ ಸಣ್ಣ ಕೈಗಾರಿಕಾ ಘಟಕಗಳನ್ನು ಹಾಗೂ ಸೇವಾ ಚಟುವಟಿಕೆಗಳನ್ನು ಪ್ರಾರಂಭ ಮಾಡುವ ಸಲುವಾಗಿ ಈ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್‌ಸೈಟ್ ವಿಳಾಸ: www.kvic.gov.in / pmegp online application registration. 

 

ಕೈಗಾರಿಕೆಗಳನ್ನು ಪ್ರಾರಂಭ ಮಾಡುವಂತಹ ಭಾವಿ ಉದ್ದಿಮೆದಾರರಿಗೆ ಹಾಗೂ ಸಾಮಾನ್ಯ ವರ್ಗದವರಿಗೆ ನಗರ ಪ್ರದೇಶದಲ್ಲಿ ಶೇ:೧೫% ರಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ:೨೫% ರಂತೆ ಸಹಾಯಧನದ ಸೌಲಭ್ಯವಿರುತ್ತದೆ. ಪರಿಶಿಷ್ಟ ಜಾತಿ. ಪರಿಶಿಷ್ಟ ಪಂಗಡ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರರು, ಮಾಜಿ ಸೈನಿಕರು, ಅಂಗವಿಕಲರು ಹಾಗೂ ಮಹಿಳಾ ಉದ್ದಿಮೆದಾರರಿಗೆ ನಗರ ಪ್ರದೇಶದವರಿಗೆ ಶೇ:೨೫% ರಂತೆ ಹಾಗೂ ಗ್ರಾಮೀಣ ಪ್ರದೇಶದವರಿಗೆ ಶೇ:೩೫% ರಂತೆ ಸಹಾಯಧನವನ್ನು ಕಲ್ಪಿಸಲಾಗುತ್ತದೆ. ಈ ಯೋಜನೆಯಡಿ ಸಂಯುಕ್ತವಾಗಿ ಯಂತ್ರೋಪಕರಣಗಳ ಖರೀದಿಗಾಗಿ ಹಾಗೂ ದುಡಿಮೆ ಬಂಡವಾಳದ ಸಲುವಾಗಿ ಸಾಲ ಸೌಲಭ್ಯವನ್ನು ಬ್ಯಾಂಕ್ ಮುಖಾಂತರ ಕಲ್ಪಿಸಲಾಗುತ್ತದೆ. ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಆನ್‌ಲೈನ್ ಮುಖಾಂತರ ಸರ್ವಿಸ್ ಏರಿಯಾ ಪ್ರಕಾರ ಆಯಾ ಬ್ಯಾಂಕುಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಶಿಫಾರಸ್ಸು ಮಾಡಲಾಗುತ್ತದೆ. ಬ್ಯಾಂಕಿನಿಂದ ಸಾಲ ಮಂಜೂರಾತಿ ಪತ್ರ ನೀಡಿದ ಬಳಿಕೆ ಅಭ್ಯರ್ಥಿಗಳಿಗೆ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

https://youtu.be/Ya-ypFqVNkM?si=xMvCY9KdaXhFyRbq

ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕನಿಷ್ಠ ೧೮ ವರ್ಷ ಮೇಲ್ಪಟ್ಟವರು, ಕನಿಷ್ಠ ೮ನೇ ತರಗತಿ ಪಾಸಾಗಿರಬೇಕು. ಯಾವುದೇ ಆದಾಯ ಮಿತಿ ಇರುವುದಿಲ್ಲ. ಜಾತಿ ಪ್ರಮಾಣ ಪತ್ರ, ಗ್ರಾಮೀಣ ಪ್ರಮಾಣ ಪತ್ರ. ಯೋಜನಾ ವರದಿ. ಉದ್ಯಮಶೀಲತಾಭಿವೃದ್ಧಿ ತರಬೇತಿ ಪ್ರಮಾಣ ಪತ್ರ (ತರಬೇತಿ ಪಡೆದಿದ್ದಲ್ಲಿ). ಆಧಾರ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಛಾಯ ಪ್ರತಿ, ಪಾಸ್ಪೋರ್ಟ್ ಸೈಜ್ ಫೋಟೋ, ಗ್ರಾಮೀಣ ಪ್ರದೇಶ ಅಭ್ಯರ್ಥಿಗಳು ಇದ್ದಲ್ಲಿ ವಾಸಸ್ಥಳ ಪ್ರಮಾಣ ಪತ್ರ, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ಸಿಬಿಲ್ ರಿಪೋರ್ಟ್ ಬೇಕಾಗಿರುತ್ತವೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಹೈದ್ರಾಬಾದ ರಸ್ತೆ ರಾಯಚೂರು ಇವರನ್ನು ಕಛೇರಿ ಸಮಯದಲ್ಲಿ ದೂರವಾಣ ಮೂಲಕ ೭೮೯೨೭೪೪೬೭೭, ೮೮೬೧೨೪೧೦೯೩ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ