ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು

Advertisement
ಮಾ 31.ಕರ್ನಾಟಕ ಅದ್ಯಂತ ದಿನಾಂಕ ಇಂದಿನಿಂದ 15-04-2023 ತನಕ SSLC ಅಂತಿಮ ಪರೀಕ್ಷೆಗಳು ನಡೆಯುತ್ತವೆ. ಪರೀಕ್ಷೆಯ ದಿನದಂದು, ಪರೀಕ್ಷೆಯ ಸಮಯದಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನ ಜಾರಿಗೊಳಿಸಲಾಗಿದೆ.

ಇಂದಿನಿಂದ SSLC ಪರೀಕ್ಷೆ ಪ್ರಾರಂಭವಾಗಲಿದ್ದು ಪರೀಕ್ಷೆಯ ಮೊದಲ ದಿನ ಮಾರ್ಚ್ 31 ಶುಕ್ರುವಾರದಂದು ಮೊದಲ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ, ಇಂಗ್ಲಿಷ್ ವಿಷಯದ ಪರೀಕ್ಷೆಯು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರೆಗೆ 100 ಅಂಕಕ್ಕೆ ನಡೆಯಲಿವೆ.

ಈ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಿ ವಿದ್ಯಾರ್ಥಿಗಳೇ

1) ಪರೀಕ್ಷಾ ಕೊಠಡಿಗೆ 15 ನಿಮಿಷ ಮೊದಲೇ ಪ್ರವೇಶಿಸಲು ಅವಕಾಶ

2) ಕಲ್ಪಿಸಿರುವುದರಿಂದ ಅರ್ಧ ಗಂಟೆ ಮೊದಲೇ ಕೇಂದ್ರದಲ್ಲಿರಿ

3) ಪ್ರವೇಶ ಪತ್ರವನ್ನು ಕೊಂಡೊಯ್ಯುವುದನ್ನು ಮರೆಯದಿರಿ

4) ಪ್ರವೇಶಪತ್ರದ ಜೊತೆ ಮಾನ್ಯವಾದ ಐಡಿ ಕಾರ್ಡ್ ತೆಗೆದುಕೊಂಡು ಹೋಗಿ

5) ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ನಿಷೇಧ ಇರುವುದರಿಂದ ಮೊಬೈಲ್ ಸ್ಮಾರ್ಟ್ ವಾಚ್‌ಗಳನ್ನು ಮನೆಯಲ್ಲೇ ಬಿಟ್ಟುಹೋಗುವುದು ಉತ್ತಮ

6) ಪರೀಕ್ಷೆಗೆ ಅವಶ್ಯವಿರುವ ಪೆನ್ ಹಾಗೂ ಲೇಖನ ಸಾಮಗ್ರಿಗಳನ್ನು ಪೌಚ್‌ನಲ್ಲಿ ತೆಗೆದುಕೊಂಡು ಹೋಗಿ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂದರ್ಭದಲ್ಲಿ ಉಚಿತ ಬಸ್‌ ಪ್ರಯಾಣ ಸೌಲಭ್ಯವನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಕಲ್ಪಿಸಿದೆ. ಜತೆಗೆ ಬಸ್‌ ಸಂಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗಾಗಿ ಕೋರಿಕೆ ನಿಲುಗಡೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿವೆ.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಗಳು, ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಬಸ್‌ ಸೌಲಭ್ಯವನ್ನು ಪಡೆಯಬಹುದಾಗಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಮತ್ತು ಹಿಂದಿರುವಾಗ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ.

ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಅತ್ಯುತ್ತಮ ರೀತಿಯಲ್ಲಿ ಬರೆಯುವ ಆತ್ಮವಿಶ್ವಾಸ ಶಕ್ತಿ ಆರೋಗ್ಯ ನಿಮ್ಮೆಲ್ಲರಿಗೂ ಆ ದೇವರು ದಯಪಾಲಿಸಲಿ ಮತ್ತು ಉತ್ತಮ ಅಂಕಗಳನ್ನು ಪಡೆದು ಕಲಿತ ಶಾಲೆಗೆ ಕಲಿಸಿದ ಶಿಕ್ಷಕರಿಗೆ ಜನ್ಮ ನೀಡಿದ ತಂದೆ ತಾಯಿಗಳಿಗೆ ಕೀರ್ತಿ ತನ್ನಿ

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ.

 

( ಇದು ಬಡವರ ಬಾರಕೋಲು ಪತ್ರಿಕೆಯ ಕಳಕಳಿ )

Advertisement
Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್