ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಏ.13ರಿಂದ 20 ವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ: ಶಶಿಕಾಂತ ಶಿವಪುರೆ

Advertisement
ರಾಯಚೂರು,ಏ.11 ಮಾ.29ರಂದು ಭಾರತ ಚುನಾವಣಾ ಆಯೋಗದಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ವೇಳಾಪಟ್ಟಿಯನ್ನು ನಿಗಧಿಪಡಿಸಿ ಪ್ರಕಟಣೆ ಹೊರಡಿಸಲಾಗಿದ್ದು, ಮಾ.29ರಿಂದ ಚುನಾವಣಾ ಮಾದರಿ ನೀತಿ ಸಂಹಿತೆಯ ಅನುನಗೊಂಡಿದೆ. ಚುನಾವಣೆಯ ಮುಂದಿನ ಹಂತವಾಗಿ ಏ.13ರಿಂದ ಏ.20ರವರೆಗೆ ಪ್ರತಿದಿನ ಬೆಳಿಗ್ಗೆ 11:00 ರಿಂದ ಮದ್ಯಾಹ್ನ 03:00 ಗಂಟೆಯವರೆಗೆ( ರಜಾ ದಿನಗಳನ್ನು ಹೊರತುಪಡಿಸಿ) ನಾಮ ಪತ್ರ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಅವರು ಹೇಳಿದರು.

ಅವರು ಏ.11ರ(ಮಂಗಳವಾರ) ನಗರದ ತಹಸೀಲ್ ಕಾರ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿ, ಏ.13ರಿಂದ ಏ.20ರವರೆಗೆ ಪ್ರತಿದಿನ ಬೆಳಿಗ್ಗೆ 11:00 ರಿಂದ ಮದ್ಯಾಹ್ನ 03:00 ಗಂಟೆಗಳವರೆಗೆ(ರಜೆ ದಿನಗಳನ್ನು ಹೊರತುಪಡಿಸಿ) ನಾಮಪತ್ರ ಸಲ್ಲಿಸಲು ಅವಕಾಶ ಇರುತ್ತದೆ ಎಂದರು.



ಇದೇ ವೇಳೆ ಪೂರ್ವ ತಯಾರಿ ಕುರಿತು ರಾಯಚೂರು ತಾಲ್ಲೂಕಿನ 53 -ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಮತ್ತು 54 – ರಾಯಚೂರು (ನಗರ) ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ರಾಜಕೀಯ ಪಕ್ಷದವರಿಗೆ ನಾಮ ಪತ್ರಸಲ್ಲಿಕೆಯ ಕುರಿತು ಮತ್ತು ಚುನಾವಣೆ ವೆಚ್ಚಗಳ ನಿರ್ವಹಣೆ, ಚುನಾವಣೆ ಪ್ರಚಾರ, ಇತ್ಯಾದಿ ಪ್ರಮುಖ ವಿಷಯಗಳ ಕುರಿತು ಚರ್ಚಿಸಿ ಎಲ್ಲಾ ರಾಜಕೀಯ ಪಕ್ಷದವರಿಗೆ ವಿದ್ಯುನ್ಮಾನ ಮತಯಂತ್ರಗಳ ಅಣಕು ಮತದಾನ ಪ್ರಕ್ರಿಯೆಯನ್ನು ಜರುಗಿಸಲಾಯಿತು.

53 ರಾಯಚೂರು ಗ್ರಾಮೀಣ - ಮತಕ್ಷೇತ್ರದ ನಾಮಪತ್ರಗಳ ಸ್ವೀಕೃತಿ ಪ್ರಕ್ರಿಯೆಯನ್ನು ತಹಸೀಲ್ ಕಛೇರಿ ರಾಯಚೂರು ನಲ್ಲಿ ಮತ್ತು 54 -ರಾಯಚೂರು ವಿಧಾನ ಸಭಾ ಮತಕ್ಷೇತ್ರದ ನಾಮಪತ್ರಗಳ ಸ್ವೀಕೃತಿ ಪ್ರಕ್ರಿಯೆಯನ್ನು ಸಹಾಯಕ ಆಯುಕ್ತರು ಕಾರ್ಯಾಲಯ ರಾಯಚೂರುನಲ್ಲಿ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ್, ತಹಶೀಲ್ದಾರ ಚನ್ನಮಲ್ಲಪ್ಪ ಗಂಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್