ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಿ: ಸಿ.ಇ.ಒ ಶಶಿಧರ ಕುರೇರ

Advertisement
ರಾಯಚೂರು,ಏ.28(ಕ.ವಾ):- ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಬೇಕು ವಿಶೇಷಚೇತನರಿಗಾಗಿ ಮತಗಟ್ಟಗಳಲ್ಲಿ ರ್ಯಾಂಪ್‍ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಶಿಧರ ಕುರೇರ ಅವರು ಹೇಳಿದರು.



ಅವರು ಏ.28ರ(ಶುಕ್ರವಾರ) ನಗರದ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ, ವಿಧಾನಸಭೆ ಚುನಾವಣೆ-2023ರ ಅಂಗವಾಗಿ ವಿಶೇಷಚೇತನರಿಗಾಗಿ ಮತದಾರರ ಜಾಗೃತಿ ಕಾರ್ಯಕ್ರಮ ಹಾಗೂ ವಿಶೇಷಚೇತನರ ಈಜು ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದಲ್ಲಿ ಮೊದಲಬಾರಿಗೆ ವಿಶೇಷಚೇತನರಿಗಾಗಿ ಈಜುವ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅತ್ಯಂತ ಸಂತಸದ ವಿಚಾರವಾಗಿದೆ. ದೇಶದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು, ಅಧಿಕಾರವನ್ನು ನೀಡಲಾಗಿದ್ದು, ವಿಶೇಷವಾಗಿ ವಿಶೇಷಚೇತನರು ಈ ಹಕ್ಕನ್ನು ಚಲಾಯಿಸಲು ಮುಂದಾಗಬೇಕು ಎಂದರು.



 

ಮತದಾರರ ಪ್ರತಿಜ್ಞಾ ವಿಧಿ ಭೋಧನೆ: ಇದೇ ವೇಳೆ ವಿಶೇಷಚೇತನರಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಭೋಧಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಅಣ್ಣಾರಾವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ