ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಲ್ಯಾಣ ರಥ ನೂತನ ಬಸ್ ಸಂಚಾರಕ್ಕೆ ಚಾಲನೆ ಶೀಘ್ರವೇ ಹೆಚ್ಚುವರಿ ಬಸ್: ಸಚಿವ ರಾಮಲಿಂಗಾರೆಡ್ಡಿ

Advertisement
https://youtu.be/sYm6C-aA83w?si=I-mTwq-rrGNP3roc

ರಾಯಚೂರು,ಆ.28. ಕಲ್ಯಾಣ ಕರ್ನಾಟಕ ಭಾಗಕ್ಕೆ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗಕ್ಕೆ ಅಗತ್ಯಕ್ಕೆ ಅನುಗುಣವಾಗಿ ಹಂತ ಹಂತವಾಗಿ ನೂತನ ಬಸ್‌ಗಳನ್ನು ಬಿಡುಗಡೆಗೊಳಿಸಲಾಗುವುದು ಮತ್ತು ಈ ಭಾಗದ ಸಾರಿಗೆ ಸಂಸ್ಥೆಗೆ ಶೀಘ್ರವೇ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.

ಜಿಲ್ಲೆಯ ಸಿಂಧನೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ, ಸಿಂಧನೂರಿನಿಂದ ಬೆಂಗಳೂರಿಗೆ ಸಂಚರಿಸಲಿರುವ ನೂತನ ಕಲ್ಯಾಣ ರಥ ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಬಸ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಬಸ್‌ಗೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ಸಾಲಿನಲ್ಲಿ ೭೦೦ ಹೊಸ ಬಸ್‌ಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುವುದು, ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಮತ್ತು ಪ್ರಥಮವಾಗಿ ಜಾರಿಯಾದ ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ಸಾರಿಗೆ ಪ್ರಯಾಣಿಕರ ಸಂಖ್ಯೆ ಅತ್ಯಂತ ಹೆಚ್ಚಾದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಬಸ್‌ಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಸಿಂಧನೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುವ ಉದ್ದೇಶದಿಂದ ಇಮದು ಕಲ್ಯಾಣ ರಥ ಮಲ್ಟಿ ಆಕ್ಸೆಲ್ ಹವಾನಿಯಂತ್ರಿತ ಸ್ಲೀಪರ್ ಬಸ್ ಅನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಪ್ರಯಾಣಿಕರು ಈ ಬಸ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. .

ಈ ಸಂದರ್ಭದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಶರನೇಗೌಡ ಬಯ್ಯಾಪೂರ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ, ಕಲಬುರಗಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಸಿ.ಇ ಸಂತೋಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ