ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆ ಕರಿಯಪ್ಪಗೆ ಒಲಿದ ಬಿಜೆಪಿ ಟಿಕೆಟ್ ಒಗ್ಗಟ್ಟಾಗಿ ಚುನಾವಣೆ ಎದುರಿಸುವವರ ಆಕಾಂಕ್ಷಿಗಳು....?

Advertisement
ಏಪ್ರಿಲ್ 11. ಸಿಂಧನೂರು ಇನ್ನೇನು ಕೆಲವೇ ದಿನಗಳು ಮಾತ್ರ ಚುನಾವಣೆ ಬಾಕಿ ಇದ್ದು ಏಪ್ರಿಲ್ 13ರಂದು ನಾಮಪತ್ರ ಸಲ್ಲಿಸಲು ಪ್ರಾರಂಭವಾಗಲಿದೆ ಮತ್ತು ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಬರುವ ತಿಂಗಳು ಅಂದರೆ ಮೇ ಹತ್ತಕ್ಕೆ ಚುನಾವಣೆ ನಡೆಯಲಿದ್ದು ಈ ಹಿನ್ನಲೆ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ ಅದರಲ್ಲಿ ವಿಶೇಷವಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಅತಿ ಹೆಚ್ಚು ಆಕಾಂಕ್ಷಿಗಳಿದ್ದು ಕೆಲವು ದಿನಗಳ ಹಿಂದೆ ಕಾಂಗ್ರೆಸ್ಸಿನ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದ ಕೆ.ಕರಿಯಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ

 

ನಮ್ಮ ಬಡವರ ಬಾರಕೋಲು ಡಿಜಿಟಲ್ ಸುದ್ದಿಯು ಕೆಲವು ದಿನಗಳ ಹಿಂದೆ ಕೆ ಕರಿಯಪ್ಪ ಅವರಿಗೆ ಟಿಕೆಟ್ ನೀಡಬಹುದು ಎಂದು ಸುದ್ದಿಯನ್ನು ಮಾಡಿತ್ತು ಅದೇ ರೀತಿ ಈ ದಿನ ಕೆ ಕರಿಯಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ

ಆದರೆ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಆರರಿಂದ ಎಂಟು ಆಕಾಂಕ್ಷಿಗಳಿದ್ದು ಕಾಡ ಅಧ್ಯಕ್ಷ ಕೊಲ್ಲ ಶೇಷಗಿರಿ ರಾವ್ ಕೆಫೆಕ ಅಧ್ಯಕ್ಷ ಕೆ ವಿರುಪಾಕ್ಷಪ್ಪ ಉದ್ಯಮಿಗಳಾದ ರಾಜೇಶ್ ಹಿರೇಮಠ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವನಗೌಡ ಗೋರೆಬಾಳ ವಿರುಪಾಪುರ ಅಮರೆಗೌಡ ಕೆ ಮರಿಯಪ್ಪ ಮತ್ತು ಇತರ ಹೆಸರು ಕೇಳಿ ಬರುತ್ತಿತ್ತು ಆದರೆ ಇದೀಗ ತಾನೇ ಕೆ ಕರಿಯಪ್ಪ ಅವರಿಗೆ ಬಿಜೆಪಿ ಘೋಷಣೆ ಮಾಡಿದೆ



ಕೆ ಕರಿಯಪ್ಪ ಅವರ ಸಂಬಂಧಿ ಹಾಗೂ ಕೆಫೆಕ ಅಧ್ಯಕ್ಷರಾದ ಕೆ ವಿರುಪಾಕ್ಷಪ್ಪ ಅವರು ಸೇರಿದಂತೆ ಆಕಾಂಕ್ಷಿಗಳೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಕೆ ಕರಿಯಪ್ಪ ಅವರು ಗೆಲ್ಲುವುದರಲ್ಲಿ ಎರಡನೆಯ ಮಾತಿಲ್ಲ ಎಂದು ಕೆಲವು ಕಾರ್ಯಕರ್ತರು ಮಾತನಾಡುತ್ತಿದ್ದಾರೆ ಆದರೆ ಸಾಕಷ್ಟು ಆಕಾಂಕ್ಷಿಗಳು ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿದ್ದು ಅವರೆಲ್ಲರೂ ಕೂಡ ನನಗೆ ಟಿಕೆಟ್ ನೀಡಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆಲವು ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಾಗಾದರೆ ಆಕಾಂಕ್ಷಿಗಳೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಮಾಡುತ್ತಾರ....? ಕೆ ಕರಿಯಪ್ಪ ಅವರು ಆಕಾಂಕ್ಷಿಗಳಲ್ಲರನ್ನೂ ಒಗ್ಗೂಡಿಸಿಕೊಂಡು ಕ್ಷೇತ್ರದಾದ್ಯಂತ ಪ್ರಚಾರ ಮಾಡಿ ಕೈಗೆ ಕೈ ಕೊಟ್ಟ ಕರಿಯಪ್ಪ ಕಮಲ ಅರಳಿಸುತ್ತಾರ ಗೆಲುವಿನ ನಗೆ ಬೀರಲಿದ್ದಾರಾ ಎಂದು ಕಾದುನೋಡಬೇಕಾಗಿದೆ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್