ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೋಮನೂರು ಗ್ರಾಮದ ತಾಯಿ–ಮಗಳು ಕಾಣೆ ಪತ್ತೆಗೆ ಮುದಗಲ್ ಪೊಲೀಸರ ಮನವಿ

Advertisement
ರಾಯಚೂರು, ಜನವರಿ 28
ಲಿಂಗಸುಗೂರು ತಾಲೂಕಿನ ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಮನೂರು ಗ್ರಾಮದಲ್ಲಿ ತಾಯಿ ಹಾಗೂ ಎರಡು ವರ್ಷದ ಮಗಳು ಕಾಣೆಯಾಗಿರುವ ಘಟನೆ ವರದಿಯಾಗಿದೆ.

ಕೋಮನೂರು ಗ್ರಾಮದ ಹೊಳಿಯಮ್ಮ (35), ಗಂಡ ಯಮನೂರಪ್ಪ ಪೂಜಾರಿ ಹಾಗೂ ಅವರ 2 ವರ್ಷದ ಮಗಳು ಗಂಗಮ್ಮ (ತಂದೆ: ಯಮನೂರಪ್ಪ ಪೂಜಾರಿ) ಕಾಣೆಯಾಗಿದ್ದಾರೆ. ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 150/2025 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ಯಮನೂರಪ್ಪ ತಂದೆ ಲಕ್ಕಪ್ಪ ಪೂಜಾರಿ ಅವರ ಮಾಹಿತಿ ಪ್ರಕಾರ, ದಿನಾಂಕ 05-10-2025ರಂದು ಬೆಳಿಗ್ಗೆ 6 ಗಂಟೆಗೆ ಅವರು ಮುದಗಲ್ ಸಂತೆಗೆ ಕುರಿ ಸಂತೆಗಾಗಿ ತೆರಳಿದ್ದರು. ಸಂತೆ ಮುಗಿಸಿ ಮಧ್ಯಾಹ್ನ ಸುಮಾರು 12 ಗಂಟೆಗೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಹೆಂಡತಿ ಹಾಗೂ ಮಗಳು ಕಾಣೆಯಾಗಿದ್ದರು. ಮನೆಯಲ್ಲಿದ್ದ ಮಗನನ್ನು ವಿಚಾರಿಸಿದಾಗ, “ಅವ್ವ ಕೋಡಿಹಾಳ ಆಸ್ಪತ್ರೆಗೆ ಹೋಗುತ್ತೇನೆ ಎಂದು ಹೇಳಿ ಹೋದಳು” ಎಂದು ತಿಳಿಸಿದ್ದಾನೆ.

ಆ ಬಳಿಕ ಸಂಬಂಧಿಕರು ಹಾಗೂ ಕುಟುಂಬಸ್ಥರು ರೋಡಲಬಂಡ, ಕಮಲದಿನ್ನಿ, ತೊಂಡಿಹಾಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕವಾಗಿ ಹುಡುಕಾಟ ನಡೆಸಿದರೂ, ತಾಯಿ ಹಾಗೂ ಮಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಯಮನೂರಪ್ಪ ಅವರು 12-10-2025ರಂದು ಮುದಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾದ ಮಹಿಳೆ ಹಾಗೂ ಎರಡು ವರ್ಷದ ಮಗುವಿನ ಕುರಿತು ಯಾರಿಗಾದರೂ ಮಾಹಿತಿ ದೊರೆತಲ್ಲಿ ತಕ್ಷಣ ಮುದಗಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸಂಪರ್ಕ ಸಂಖ್ಯೆ:
📞 ಮುದಗಲ್ ಪೊಲೀಸ್ ಠಾಣೆ: 08537-280536
📱 ಪಿಎಸ್‌ಐ: 9480803857
📱 ಮಸ್ಕಿ ವೃತ್ತ ಸಿಪಿಐ: 9480803834
📱 ಲಿಂಗಸುಗೂರು ಡಿಎಸ್‌ಪಿ: 9480803821

ಈ ಕುರಿತು ಮುದಗಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್