ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೌಶಲ್ಯಾಭಿವೃದ್ಧಿ, ವೃತ್ತಿ ಮಾರ್ಗದರ್ಶನದ ಕುರಿತು ತರಬೇತಿ ಕಾರ್ಯಗಾರ

Advertisement
ರಾಯಚೂರು,ಏ.24(ಕ.ವಾ):- ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿ ಮಾರ್ಗದರ್ಶನದ ಕುರಿತು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಎನ್.ಎಸ್.ಎಸ್ ಅಧಿಕಾರಿಗಳು, ಉಪನ್ಯಾಸಕರು ಈ ತರಬೇತಿ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಅವರು ಹೇಳಿದರು.

ಅವರು ಏ.24ರಂದು ನಗರದ ಖಾಸಗಿ ಹೊಟೆಲ್‍ವೊಂದರಲ್ಲಿ ಎಸ್.ಎ.ಪಿ, ಕೌಶಲ್ಯ ಕರ್ನಾಟಕ, ಎನ್.ಎಸ್.ಎಸ್, ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ(ಯುಎನ್.ಡಿ.ಪಿ) ಹಾಗೂ ಹೆಡ್,ಹೆಲ್ಡ್,ಹೈ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿ ಮಾರ್ಗದರ್ಶನಕುರಿತು ತರಬೇತಿ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.



ಇದಕ್ಕೂ ಮೊದಲು ಹೆಡ್‍ಹೆಲ್ಡ್‍ಹೈ ವ್ಯವಸ್ಥಾಪಕ ರಾಘವೇಂದ್ರ ಅವರು ಮಾತನಾಡಿ, ಕೋಡ್ ಉನ್ನತಿ ಯೋಜನೆಯು ಪ್ರಥಮ ಹಂತದಲ್ಲಿ ಬೆಂಗಳೂರು ಗ್ರಾಮಾಂತರ, ರಾಮನಗರ, ದಕ್ಷಿಣ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಜಾರಿಗೆ ಬಂದಿದ್ದು, 2020ರಿಂದ 23ರವರೆಗೆ ಒಟ್ಟು ಮೂರು ವರ್ಷಗಳ ವರೆಗೆ ಈ ಯೋಜನೆ ನಡೆದು ಬಂದು ಇದೀಗ ಮುಕ್ತಾಯದ ಹಂತದಲ್ಲಿದೆ ಎಂದರು.

ಯೋಜನೆಯಡಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಎನ್.ಎಸ್.ಎಸ್ ಅಧಿಕಾರಿಗಳಿಗೆ ಉದ್ಯಮಶೀಲತೆ ಮತ್ತು ವೃತ್ತಿ ಮಾರ್ಗದರ್ಶನದ ಕುರಿತು ತರಬೇತಿ ನೀಡಲಾಗುತ್ತಿದೆ ಎಂದರು.

https://youtu.be/BKCJdUVIaZ8

ಈ ಸಂದರ್ಭದಲ್ಲಿ ರಾಯಚೂರು ವಿವಿಯ ರಿಜಿಸ್ಟ್ರಾರ್ ಹಾಗೂ ಎನ್.ಎಸ್,ಎಸ್ ಘಟಕದ ಸಂಯೋಜಕ ಡಾ.ಡಿಎಸ್ ಬಿರಾದಾರ, ಸಿಡಾಕ್‍ನ ಜಂಟಿ ನಿರ್ದೇಶಕ ಜಿ.ಎಸ್ ಹುಡೇದ್, ಯುಎನ್‍ಡಿಪಿ ಜಿಲ್ಲಾ ಸಹಾಯಕ ಶಶಿ ಕಾಂಬ್ಲೇಕರ್, ಸಮುದಾಯ ಸಂಯೋಜಕರಾದ ನರಸರೆಡ್ಡಿ, ಗಿರಿಜಾರಾಮ್, ವಿವಿಧ ಸರಕಾರಿ ಕಾಲೇಜುಗಳ ಪ್ರಾಂಶುಪಾಲರಾದ ಸವಿತಾ ನಾಯಕ, ಸುಮಂಗಲ, ಪಿ.ದೊರಸಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ