ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗಸ್ತು ವೇಳೆ ಸಿಕ್ಕ ವಾಹನಗಳನ್ನು ಹಿಂಪಡೆಯಲು ಮಾಲಿಕರಿಗೆ ಸೂಚನೆ: ಹಿಂಪಡೆಯದಿದ್ದಲ್ಲಿ ವಾಹನಗಳ ಹರಾಜು

Advertisement
ರಾಯಚೂರು,ಏ.01,(ಕ.ವಾ):- ನಗರದ ಸದರ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಮತ್ತು ಹಗಲು ಗಸ್ತು ವೇಳೆಯಲ್ಲಿ ಸಿಬ್ಬಂದಿಯರು ಗಸ್ತು ಮಾಡುವ ಕಾಲಕ್ಕೆ ಮಾಲೀಕರಿಲ್ಲದೇ ರಸ್ತೆಯ ಮೇಲೆ ಬಿಟ್ಟು ಹೋಗಿದ್ದ ಒಟ್ಟು 38 ದ್ವಿಚಕ್ರ ಹಾಗೂ ಇತರೆ ವಾಹನಗಳನ್ನು ಮಾಲಿಕರು ಹಿಂಪಡೆದುಕೊಳ್ಳಬಹುದು ಇಲ್ಲವಾದಲ್ಲಿ ವಾಹನಗಳನ್ನು ಹರಾಜು ಪ್ರಕ್ರಿಯೆ ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಸದರ ಬಜಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಿಮಿನಲ್ ಮಿಸಿಲೇನ್ಸ್ ನಂ 26/2019, ಕಲಂ 75 ಕೆ.ಪಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಠಾಣಾ ಪಿ ಎಫ್ ನಂ 60/2019 2019ರ ಅ.22 ಮತ್ತು ಪಿಎಫ್ ನಂ 11/2013 2013ರ ಫೆ.23 ರಂದು ಮಾನ್ಯ ನ್ಯಾಯಾಲಯಕ್ಕೆ ನಿವೇದಿಸಿಕೊಂಡಿದ್ದು ಇರುತ್ತದೆ. ಈ ಕೆಳಕಂಡ ಜಪ್ತಿ ಮಾಡಿಕೊಂಡು ಮೋಟಾರ್ ಸೈಕಲ್/ಕಾರು ವಿಲೇವಾರಿಗಾಗಿ ಸಿಬ್ಬಂದಿಯವರನ್ನು ಬೇರೆ ಬೇರೆ ಊರುಗಳಿಗೆ ನೇಮಿಸಿ ಕಳುಹಿಸಿಕೊಟ್ಟಿದ್ದು ವಾಹನನಗಳ ಮಾಲೀಕರನ್ನು ಭೇಟಿ ಮಾಡಿ ಮತ್ತು ಅಂಚೆ ಮುಖಾಂತರವಾಗಿ ವಾಹನಗಳನ್ನು ತೆಗೆದುಕೊಂಡು ಹೋಗುವಂತೆ ಪತ್ರ ವ್ಯವಹಾರ ಮಾಡಿದ್ದರು ಸಹ ಅವರು ವಾಹನಗಳನ್ನು ತೆಗೆದುಕೊಂಡು ಹೋಗಿರುವುದಿಲ್ಲ. ಈ ವಾಹನಗಳನ್ನು ಸಾರ್ವಜನಿಕ ಹರಾಜು ಮೂಲಕ ಸ್ವತ್ತು ವಿಲೇವಾರಿ ಮಾಡಲು ಮಾನ್ಯ ನ್ಯಾಯಾಲಯದ ಆದೇಶ ಸಂಖ್ಯೆ ಕ್ರಿ.ಮಿ ನಂ 1111/2021 ರ ದಿ: 24/03/2023 ರ ಪ್ರಕಾರ ಮಾಲೀಕರಿಗೆ ತಮ್ಮ ಸ್ವತ್ತುಗಳನ್ನು ತೆಗೆದುಕೊಂಡು ಹೋಗಬಹುದೆಂದು ಇಲ್ಲವಾದಲ್ಲಿ ವಾಹನಗಳನ್ನು ಸಾರ್ವಜನಿಕ ಹರಾಜಿನ ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸದರ ಬಜಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಸದರ ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ