ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗೃಹಲಕ್ಷ್ಮಿ ಮೂಲಕ ಮಹಿಳೆಯರಿಗೆ ಕುಟುಂಬ ನಿರ್ವಹಣೆ ಮಾಡುವ ಶಕ್ತಿ ನೀಡಿದ ರಾಜ್ಯ ಸರ್ಕಾರ: ಶಾಸಕ ಬಸನಗೌಡ ದದ್ದಲ್

Advertisement
ರಾಯಚೂರು,ಆ.೩೦ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಎರಡು ಸಾವಿರ ರೂ.ಗಳನ್ನು ಜಮಾ ಮಾಡುವ ಮೂಲಕ ಮಹಿಳೆಯರಿಗೆ ಕಷ್ಟದ ಸಂದರ್ಭದಲ್ಲಿ ಕುಟುಂಬ ನಿರ್ವಹಣೆ ಮಾಡುವ ಶಕ್ತಿಯನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.

ತಾಲೂಕಿನ ದೇವಸುಗೂರು ಗ್ರಾಮದ ಶಕ್ತಿನಗರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ತಾಲೂಕು ಪಂಚಾಯತ್, ದೇವಸುಗೂರು ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.



ರಾಜ್ಯ ಸರ್ಕಾರದ ಭರವಸೆಯಂತೆ ಐದು ಜನಪರ ಯೋಜನೆಗಳನ್ನು ಜಾರಿಗೆ ತರಲಾಗೊದ್ದು, ಈಗಾಗಲೇ ಮೂರು ಯೋಜನೆಯಗಳ ಸೌಲಭ್ಯಗಳನ್ನು ಯಶಸ್ವಿಯಾಗಿ ಜನರಿಗೆ ನೀಡಿರುವ ಸರ್ಕಾರ ಇದೀಗ ಸರ್ಕಾರದ ಮತ್ತೊಂದು ಮಹತ್ತರ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಎರಡು ಸಾವಿರ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತಿದ್ದು, ಮಹಿಳೆಯರು ಸರದಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ರಾಜ್ಯ ಸರ್ಕಾರ ಈಗಾಗಲೇ ಹಲವು ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಕ್ತಿ ಯೋಜನೆಯಡಿ ಪ್ರತಿಯೊಬ್ಬ ಮಹಿಳೆಯರು ಉಚಿತವಾಗಿ ಸರ್ಕಾರಿ ಸಾರಿಗೆ ಬಸ್ ಪ್ರಯಾಣವನ್ನು ಮಾಡುವ ಸೌಲಭ್ಯವನ್ನು ನೀಡಿದೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ ಪ್ರತಿ ಮನಗೆ ೨೦೦ಯೂನಿಟ್ ಉಚಿತ ವಿದ್ಯುತ್ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿಯಲ್ಲೂ ಕೂಡ ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದರು.

ಇದೀಗ ಸರ್ಕಾರದಿಂದ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ೨೦೦೦ರೂ.ಗಳನ್ನು ಅವರು ಖಾತೆಗೆ ವರ್ಗಾವಣೆ ಮಾಡಲಾಗುವುದು ಮತ್ತು ಯೋಜನೆಯ ಚಾಲನೆಯನ್ನು ಇಂದು ರಾಜ್ಯದ ಎಲ್ಲಾ ಕಡೆಗಳಲ್ಲಿ ಏಕಕಾಲಕ್ಕೆ ನೀಡಲಾಗುತ್ತಿದ್ದು, ಜಿಲ್ಲೆಯ ೨ ನಗರಸಭೆ, ೫ ಪಟ್ಟಣ ಪಂಚಾಯತ್, ೫ ಪುರಸಭೆ ಹಾಗೂ ೧೭೯ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ೨೬೦ ವಾರ್ಡ್ಗಳ ೨೦ ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು ೩೬೫೧೪೫ ಫಲಾನುಭವಿಗಳು ಗೃಹಲಕ್ಷಿö್ಮ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದ್ದು, ಅದರಲ್ಲಿ ಒಟ್ಟು ೩,೬೪,೦೫೯ ಮಹಿಳೆಯರಿಗೆ ಈ ಯೋಜನೆಯಡಿ ಮಂಜೂರಾತಿ ಆದೇಶವನ್ನು ನೀಡಲಾಗಿದ್ದು, ಈ ಸೌಲಭ್ಯದಡಿ ಎಲ್ಲಾ ಮಹಿಳೆಯರ ಖಾತೆಗೆ ೨ಸಾವಿರ ರೂಪಾಯಿ ಜಮೆಯಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುತ್ತದೆ. ಇದರಿಂದ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣಕ್ಕೆ ಈ ಹಣವನ್ನು ಬಳಸಬಹುದು. ಇಂತಹ ಹಲವು ಸಾರ್ವಜನಿಕರ ಪರವಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಸಹಾಯಕ ಆಯುಕ್ತೆ ಮಹಿಬೂಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ ಕುಮಾರ, ಎಪಿಎಂಸಿ ಉಪಾಧ್ಯಕ್ಷ ಬಸೀರುದ್ದೀನ್ ಸೇರಿದಂತೆ ಇನ್ನಿತೃಉ ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್