ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗ್ರಾಮದಲ್ಲಿ ಮೂಲಭೂತ ಸಮಸ್ಯೆಗಳನ್ನು ಒದಗಿಸುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ಸಿಇಒ ಶಶಿಧರ ಕುರೇರ

Advertisement
ರಾಯಚೂರು,ಜು.೨೪ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಬಗೆಹರಿಸಲು ಗ್ರಾಮ ಪಂಚಾಯತಿ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಸರ್ಕಾರದ ಪ್ರತಿನಿದಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.

ಅವರು ಜು.೨೪ರ(ಸೋಮವಾರ) ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಗರಕಲದಿನ್ನಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್, ಲಿಂಗಸುಗೂರು ತಾಲೂಕು ಪಂಚಾಯತ್, ನರಕಲ್‌ದಿನ್ನಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಭಾರತ ನಿರ್ಮಾಣ ಸೇವಾ ಕೇಂದ್ರ ಹಾಗೂ ನೂತನ ಗ್ರಾಮ ಪಂಚಾಯತ್ ಕಾರ್ಯಾಲಯದ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ಪ್ರತಿಯೊಬ್ಬ ನಾಗರೀಕರಿಗೂಆಡಳಿತ ಸೇವೆಗಳು ದೊರೆಯುವಂತಾಗಲು ಹಾಗೂ ಸಾರ್ವಜನಿಕ ಹಕ್ಕುಗಳನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯತಿಗಳು ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಜನರಿಗೆ ಉತ್ತಮ ರೀತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ನೀಡಲಾದ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಟಾನಗೊಳಿಸುವಲ್ಲಿ ಗ್ರಾ.ಪಂ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್, ವಿಧಾನ ಪರಿಷತ್ ಸದಸ್ಯ ಶರಣೇಗೌಡ ಬಯ್ಯಾಪೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ