ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

Advertisement
ಬೆಂಗಳೂರು ಏಪ್ರಿಲ್ 16. ತಮ್ಮ ಅತ್ಯುತ್ತಮ ನಟನೆ, ಆಕರ್ಷಕ ವ್ಯಕ್ತಿತ್ವದ ಮೂಲಕ ಕನ್ನಡಿಗರ ಮನೆಮಗನಾಗಿ, ಕನ್ನಡಿಗರನ್ನು ರಂಜಿಸಿದ್ದ ಖ್ಯಾತ ನಟ ದ್ವಾರಕೀಶ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಇಡೀ ಚಿತ್ರರಂಗವೇ ಸ್ತಬ್ಧವಾಗಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.1942ರ ಆಗಸ್ಟ್ 19, ರಂದು ಶಾಮರಾವ್ ಮತ್ತು ಜಯಮ್ಮ ದಂಪತಿ ಪುತ್ರನಾಗಿ ಮೈಸೂರಿನ ಹುಣಸೂರಿನಲ್ಲಿ ಜನಿಸಿದ ಅವರು 1963 ರಲ್ಲಿ ಕನ್ನಡ ಚಿತ್ರರಂಗಕ್ಕೆ ಬಂದಿದ್ದರು.

1966 ರಲ್ಲಿ ಡಾ.ರಾಜ್‍ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಚಿತ್ರವನ್ನು ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಅಧ್ಯಾಯ ಬರೆದಿದ್ದರು. ಚಿತ್ರರಂಗದಲ್ಲಿ ಅವರು ಹಲವಾರು ಏಳುಬೀಳುಗಳನ್ನು ಕಂಡು ದಾಖಲೆಗಳನ್ನೇ ನಿರ್ಮಿಸಿದ್ದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಆಪ್ತಮಿತ್ರ, ಗುರು-ಶಿಷ್ಯರು, ಕಳ್ಳ ಕುಳ್ಳ, ಆಪ್ತಮಿತ್ರ,ಕುಳ್ಳ ಏಜೆಂಟ್, ಬ್ರಹ್ಮಗಂಡು ಹತ್ತು ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ ಜೊತೆಗೆ ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ರವಿಚಂದ್ರನ್ ನಟರು ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ದ್ವಾರಕೀಶ್ ಅವರ ನಿಧನಕ್ಕೆ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ