ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜನರಿಗೆ ಸರ್ಕಾರದ ಯೋಜನೆಗಳನ್ನು ಮುಟ್ಟಿಸುವಲ್ಲಿ ಮಾಧ್ಯಮಗಳ ಪಾತ್ರ ಅಪಾರ: ಡಿ.ಸಿ ಎಲ್.ಚಂದ್ರಶೇಖರ ನಾಯಕ

Advertisement
ರಾಯಚೂರು.ಅ.೧೩(ಕ.ವಾ):- ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃರಿ ಮೂಡಿಸುವ ಏಕೈಕ ಮಾರ್ಗವೆಂದರೇ ಅದು ಸುದ್ದಿ ಮಾಧ್ಯಮವಾಗಿದೆ. ಆದ್ದರಿಂದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮುಟ್ಟಿಸುವಲ್ಲಿ ಮಾಧ್ಯಮಗಳ ಪಾತ್ರ ಅಪಾರವಾದದ್ದು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.

ಅವರು ಅ.೧೩ರ(ಶುಕ್ರವಾರ) ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಜ್ಞಾನ ಕೇಂದ್ರದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಾರ್ತಾ ಲಾಪ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.



ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಇಲಾಖೆ, ವಾರ್ತಾ ಶಾಖೆ ಬೆಂಗಳೂರು ಅವರಿಂದ ಮಾಧ್ಯಮದವರಿಗೆ ವಾರ್ತಾಲಾಪ ಎಂಬ ವಿಶೇಷವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಮಾಧ್ಯಮದವರಿಗೆ ಸರ್ಕಾರದ ವಿವಿಧ ಯೋಜನೆಗಳು, ಅವುಗಳ ಉದ್ದೇಶವನ್ನು ತಿಳಿಸುತ್ತಿದ್ದು, ಇದರಿಂದ ಜನರಿಗೆ ಪರಿಣಾಮಕಾರಿಯಾಗಿ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಿದಂತಾಗುತ್ತದೆ ಎಂದು ಹೇಳಿದರು.

ಸರ್ಕಾರದಿಂದ ಕೈಗೊಳ್ಳಲಾದ ಯೋಜನೆಗಳು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬAಧಪಟ್ಟAತೆ ಮತ್ತು ಯೋಜನೆಗಳಲ್ಲಿರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವ ಮತ್ತು ಸರ್ಕಾರದ ಯೋಜನೆಗಳ ಲಾಭಗಳನ್ನು ಜನರಿಗೆ ಮುಟ್ಟಿಸುವಲ್ಲಿ ಮಾಧ್ಯಮಗಳು ಹೆಚ್ಚಿನ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಭಾರತ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು ಕಾರ್ಯಗಾರದಲ್ಲಿ ಸಂಪೂರ್ಣ ಮಾಹಿತಿಗಳನ್ನು ಮಾಧ್ಯಮದವರಿಗೆ ತಿಳಿಸಬೇಕು ಮತ್ತು ಯೋಜನೆಗಳ ಉದ್ದೇಶದ ಕುರಿತು ಹೆಚ್ಚಿನ ಕಾಳಜಿಯಿಂದ ಮಾಹಿತಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದೇ ವೇಳೆ ಭಾರತ ಸರ್ಕಾರದ ವಾರ್ತಾ ಶಾಖೆಯ ಉಪನಿರ್ದೇಶಕ ಎಸ್.ಪ್ರಕಾಶ ಮಾತನಾಡಿ, ಸರ್ಕಾರದ ಯೋಜನೆಗಳ ಕುರಿತು ಆಯಾ ಇಲಾಖೆಯ ಅಧಿಕಾರಿಗಳಿಂದ ಪಡೆದ ಮಾಹಿತಿಯನ್ನು ತಿಳಿದುಕೊಂಡ ಪತ್ರಕರ್ತರು ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ವಾರ್ತಾಲಾಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪಿಐಬಿ ಮತ್ತು ಆರ್‌ಎನ್‌ಐ ಕುರಿತು ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿ ಹೇಮಲತಾ, ಭಾರತ ಸರ್ಕಾರದ ವಾರ್ತಾ ಶಾಖೆಯ ಸಹಾಯಕ ನಿರ್ದೇಶಕಿ ಅನಖಾ, ರಾಯಚೂರು ರಿಪೋರ‍್ಸ್ ಗೀಲ್ಡ್ ಅಧ್ಯಕ್ಷ ಚನ್ನಬಸವಣ್ಣ, ಸಂಪಾದಕ ಸಂಘದ ಅಧ್ಯಕ್ಷ ಪಿ.ಚನ್ನವಸವ ಬಾಗಲವಾಡ, ವಾರ್ತಾ ಶಾಖೆಯ ಬಳ್ಳಾರಿ ಕ್ಷೇತ್ರ ಪ್ರಚಾರಾಧಿಕಾರಿ ರಾಮಕೃಷ್ಣ, ವಿಜಯಪುರ ಕ್ಷೇತ್ರ ಪ್ರಚಾರಾಧಿಕಾರಿ ಸಿ.ಕೆ ಸುರೇಶ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ.ವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ, ಯೋಜನಾ ವಿಭಾಗದ ಕಾರ್ಯಪಾಲ ಅಭಿಯಂತರರಾದ ಮೇನಕಾ ಪಟೇಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಉಪ್ಪು ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್