
ಏ.23ರ(ಭಾನುವಾರ) ನಗರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಐಕ ನಿರ್ದೇಶಕಿ ಮಂಗಳಾ ನಾಯಕ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.









