ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಜಾಗೃತಿ ಅಭಿಯಾನ

Advertisement
ರಾಯಚೂರು,ಏ.17.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವಿಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನದ ಕಾರ್ಯಕ್ರಮ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏ.17ರ(ಸೋಮವಾರ) ಎಸ್.ಕೆ.ಎಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪಂಚಾಯತ್ ಸಹ ಕಾರ್ಯದರ್ಶಿ ಅಣ್ಣಾರಾವ್ ಅವರು ಮಾತನಾಡಿ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಗೂ ಸಮಾನವಾದ ಮೌಲ್ಯ ಹಾಗೂ ಮಹತ್ವದ ಮತದಾನದ ಹಕ್ಕನ್ನು ನೀಡಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ಬಾಬಾ ಸಾಹೇಬರು ನಮಗೆ ನೀಡಿದ್ದಾರೆ ಎಂದು ಹೇಳಿದರು.

ಪ್ರತಿಯೊಬ್ಬ 18 ವರ್ಷ ತುಂಬಿದ ಮತದಾರ ತಮ್ಮ ಹೆಸರನ್ನು ಪಟ್ಟಿಯಲ್ಲಿ ನೋಂದಾಯಿಸಲು ಏ. 30 ರವರೆಗೆ ಚುನಾವಣಾ ಅಯೋಗ ಅವಕಾಶವನ್ನು ನೀಡಿದೆ. 18 ವರ್ಷ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮತ ಕೇಂದ್ರದ ಬಿ ಎಲ್ ಒ ರವರ ಮೂಲಕ ಅಥವಾ ಒಟರ್ ಹೇಲ್ಪ ಲೈನ್ ಆ್ಯಪ್ ಮೂಲಕ ಸೇರ್ಪಡೆ ಮಾಡಬೇಕೆಂದರು.

ಚುನಾವಣಾ ಅಕ್ರಮಗಳು ನಡೆಯುವುದು ಕಂಡು ಬಂದಲ್ಲಿ ಸಿಟಿಜನ್ ವಿಜಿಲ್ ಆ್ಯಪ್ ಮೂಲಕ ಪೆÇೀಟೊ, ವಿಡಿಯೋ ಅಥವಾ ಆಡಿಯೊಗಳನ್ನು ಮಾಡಿ ಕಳಿಸಿದರೆ ಮಾಹಿತಿದಾರರ ಹೆಸರನ್ನು ಗೌಪ್ಯವಾಗಿರಿಸಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಚುನಾವಣಾ ಮತದಾನಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಟೋಲ್ ಫ್ರೀ ಸಂಖ್ಯೆ 1950 ಗೆ ಕರೆಮಾಡಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮತದಾರ ಸಾಕ್ಷರತಾ ಕಬ್ಲ್‍ನ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾದ ದಂಡಪ್ಪ ಬಿರಾದಾರ್ ಕಾಲೇಜಿನ ಸಿಬ್ಬಂದಿ ದೇವದಾಸ್, ಶರಣಪ್ಪ ನಂದಿಹಾಳ್, ಸಪ್ನಾಪಲ್, ರಾಜೇಶ್ವರಿ ಕವಿತಾ, ಸೌಮ್ಯ, ಸೌಭಾಗ್ಯ, ಅಶ್ವಿನಿ ಉಪನ್ಯಾಸಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ