ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜೆಸ್ಕಾಂಗೆ 4 ಲಕ್ಷಕ್ಕೂ ಅಧಿಕ ಬಿಲ್ ಬಾಕಿ, ಜಾಲಿಹಾಳ ಪಂಚಾಯಿತಿ ಕಚೇರಿ ಕರೆಂಟ್ ಕಟ್ !

Advertisement
ಸಿಂಧನೂರು, ಡಿಸೆಂಬರ್ 11
ತಾಲೂಕಿನ ಜಾಲಿಹಾಳ ಗ್ರಾಮ ಪಂಚಾಯಿತಿ ಕಚೇರಿಯ 4 ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಿಲ್ ಬಾಕಿ ಪಾವತಿಸದ ಕಾರಣ, ಜೆಸ್ಕಾಂನಿAದ ಸಂಪರ್ಕ ಕಡಿತಗೊಳಿಸಲಾಗಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ.
ಈ ಕುರಿತು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಜಯಶ್ರೀ ಅವರು ವಿಚಾರಿಸಿದಾಗ, “ಜೆಸ್ಕಾಂಗೆ 4 ಲಕ್ಷ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಪಾವತಿಸಬೇಕಿರುವುದು ನಿಜ. ದಿನಾಂಕ: 12-12-2025ರಂದು ಸಂಸ್ಥೆಗೆ ಚೆಕ್ ನೀಡಲಾಗಿದೆ. ಯಾವುದೇ ರೀತಿ ವಿದ್ಯುತ್ ಸಂಪರ್ಕ ಕಡಿತ ಮಾಡಿಲ್ಲ” ಎಂದು ಹೇಳುತ್ತಾರೆ.
ಜೆಸ್ಕಾಂನ ಜೆಇ ಶರಣಬಸವ ಅವರನ್ನು ಸಂಪರ್ಕಿಸಿದಾಗ, “ಜಾಲಿಹಾಳ ಗ್ರಾಮ ಪಂಚಾಯಿತಿ ಕಚೇರಿಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿಲ್ಲ. ವಿದ್ಯುತ್ ಬಿಲ್ ಬಾಕಿ ಇರುವುದು ಮಾತ್ರ ನಿಜ. ಎಷ್ಟು ಎನ್ನುವುದು ಸ್ಪಷ್ಟವಾಗಿ ಗೊತ್ತಿಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಸಿಂಧನೂರು ತಾಲೂಕು ಕಚೇರಿ ಸಂಪರ್ಕಿಸಿ” ಎಂದು ಉಡಾಫೆಯಿಂದ ಪ್ರತಿಕ್ರಿಯಿಸುತ್ತಾರೆ. ಸಂಬAಧಿಸಿದ ಅಧಿಕಾರಿಗಳು ನೀವೇ ಆಗಿದ್ದು, ಅಲ್ಲಿನ ಲೈನ್‌ಮನ್ ಅವರಿಗೆ ವಿದ್ಯುತ್ ಕಡಿತಗೊಳಿಸಲು ಹೇಳಿದ್ದು ನೀವೇ ಎಂದು ಮಾಧ್ಯಮದವರು ಪ್ರಶ್ನಿಸಿದಾಗ. ನಾನು ಯಾವುದೇ ರೀತಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಹೇಳಿಲ್ಲ. ಅಂದಾಜು 3 ಲಕ್ಷ ರೂಪಾಯಿಗೂ ಅಧಿಕ ಬಾಕಿ ಬಿಲ್ ಇರುತ್ತದೆ ಎಂದು ಸುಳ್ಳು ಮಾಹಿತಿಯನ್ನು ನೀಡಿರುತ್ತಾರೆ. ಈ ಕುರಿತು ಲೈನ್‌ಮನ್ ಅವರನ್ನು ವಿಚಾರಿಸಲಾಗಿ, ನಮ್ಮ ಅಧಿಕಾರಿಗಳಾದ ಜೆಇ ಶರಣಬಸವ ಅವರು ಪಂಚಾಯಿತಿಯಿAದ ಚೆಕ್ ನೀಡುವವರೆಗೂ, ಕಚೇರಿಗೆ ವಿದ್ಯುತ್ ಸಂಪರ್ಕ ನೀಡಬೇಡಿ ಎಂದು ಸೂಚಿಸಿದ್ದು, ಹಾಗಾಗಿ ಪಂಚಾಯಿತಿ ಕಚೇರಿಯ ಡ್ಯೂವೆಲ್ ತೆಗೆದಿದುವುದಾಗಿ ತಿಳಿಸಿರುತ್ತಾರೆ.
ಅಧಿಕಾರಿಗಳ ನಡುವೆ ಮುಸುಕಿನ ಗುದ್ದಾಟ
ಗ್ರಾ.ಪಂ. ಪಿಡಿಒ ಹಾಗೂ ಜೆಸ್ಕಾಂ ಜೆಇ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಪಂಚಾಯಿತಿ ಕಚೇರಿಯ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಇದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಸ್ಥಗಿತಗೊಂಡಿವೆ. ಯಾರೇ ಸಾರ್ವಜನಿಕರು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಬಂದರೆ ವಿದ್ಯುತ್ ಇಲ್ಲ ಎಂದು ಸಿಬ್ಬಂದಿ ಹೇಳಿ ಕಳುಹಿಸುತ್ತಿದ್ದಾರೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ಗೊತ್ತಾಗಿದ್ದುದು ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಗ್ರಾ.ಪಂ.ಪಿಡಿಒ ಅವರು ಅಧ್ಯಕ್ಷರಿಂದ ಚೆಕ್‌ಗೆ ಸಹಿ ಮಾಡಿಸಿಕೊಂಡು ಜೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ನೀಡಿದರೆ, ಈ ನಡುವೆ ಜೆಸ್ಕಾಂ ಜೆಇ ಅವರು ಸಹ ಪಂಚಾಯಿತಿ ಕಚೇರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಿರುತ್ತಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ