ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಡಿ 19 ರಂದು ಮಸ್ಕಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳ

Advertisement
ವರದಿ : ಎಚ್.ಕೆ.ಬಡಿಗೇರ್
ಬಡವರ ಬಾರುಕೋಲು ಸುದ್ದಿ
ಮಸ್ಕಿ :
ಪಟ್ಟಣದ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ದಿನಾಂಕ 19/12/2024 ಗುರುವಾರ ದಂದು ಬೆಳಿಗ್ಗೆ 10 ಗಂಟೆಯಿಂದ 3 ಗಂಟೆಗೆ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಕಿ,ಆಂತರಿಕ ಗುಣಮಟ್ಟ ಭರವಸಾ ಕೋಶ (IQAC CELL) ಮತ್ತು ಉದ್ಯೋಗ ಭರವಸಾ ಕೋಶ (PLACEMENT CELL) ಹಾಗೂ ಕರಾವಳಿ ಟೀಚರ್ಸ್ ಹೆಲ್ಪ್ ಲೈನ್ ಇವರುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.ಆದಕಾರಣ SSLC,PUC,NTC,D.Ed, B.Ed,B,PED,BA,B.COM,MA, M.COM,M.SC,BSW,MSW, MA,MBA,BBA,BCA,ITI, DIPLOMA,PHARMACY,BE, M,TECH ಮುಂತಾದ ಪದವಿಗಳನ್ನು ಪಡೆದಿರುವಂತಹ ಉದ್ಯೋಗಾಕಾಂಕ್ಷಿಗಳು ಆಗಿರುವ ಯುವಕ ಯುವತಿಯರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹಾಗೂ ಈ ಮೇಳದಲ್ಲಿ ನೇರ ಸಂದರ್ಶನದ ಮೂಲಕ ಪ್ರತಿಷ್ಠಿತ ಶಾಲಾ,ಕಾಲೇಜುಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಹಾಗೂ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ನೇರ ನೇಮಕವಾಗುವ ಸುವರ್ಣಾವಕಾಶ ಇದಾಗಿದೆ.

ಅದಕ್ಕೋಸ್ಕರ ನಮ್ಮ ಕಾಲೇಜಿನ ಹಳೆಯ ಹಾಗೂ ಈಗಿರುವ ವಿದ್ಯಾರ್ಥಿಗಳಷ್ಟೇ ಅಲ್ಲದೆ ಅರ್ಹ ಯಾವುದೇ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾಗಿರುವ ಡಾಕ್ಟರ್ ಮಹಾಂತಗೌಡ ಪಾಟೀಲ್ ಪತ್ರಿಕಾ ಪ್ರಕಟಣೆಯ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕರೆಕೊಟ್ಟಿದ್ದಾರೆ.

ಈ ಮೇಳಕ್ಕೆ ಆಗಮಿಸುವ ಆಕಾಂಕ್ಷಿಗಳು 10 ಪ್ರತಿಗಳಲ್ಲಿ ತಮ್ಮ ಸ್ವವಿವರವುಳ್ಳ ಪ್ರಮಾಣಪತ್ರ,ವಿದ್ಯಾರ್ಹತೆಯ ಪ್ರಮಾಣಪತ್ರಗಳು,ಆಧಾರ್ ಕಾರ್ಡ್,ಪ್ಯಾನ್ ಕಾರ್ಡ್,ಗಳ ಝರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.
ಇನ್ನೂ ಈ ಉದ್ಯೋಗ ಮೇಳದ ಉಸ್ತುವಾರಿಯನ್ನು ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕರು ಹಾಗೂ ಉದ್ಯೋಗ ಭರವಸಾ ಕೋಶದ ಸಂಚಾಲಕರು ಆಗಿರುವ ಯಾಳಗಿ ಶ್ರೀನಿವಾಸ,ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರು ಹಾಗೂ ಸಹಾಯಕ ಪ್ರಾಧ್ಯಾಪಕರಾಗಿರುವ ರೋಹಿಣಿಮೂರ್ತಿ ಯವರು ವಹಿಸಲಿದ್ದಾರೆ. ಇದರ ಜೊತೆಗೆ ನಮ್ಮ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು,ಪ್ರಾಧ್ಯಾಪಕರು,ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ವಿವಿದ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ಆದ್ದರಿಂದ ಇದರ ಸದುಪಯೋಗವನ್ನು ಸರ್ವ ಪದವಿದರ ನಿರುದ್ಯೋಗಿಗಳು ಪಡೆದುಕೊಳ್ಳಬೇಕೆಂದು ಕರೆಕೊಟ್ಟಿದ್ದಾರೆ.

https://youtu.be/YSa-FKT85mY?si=TiypCIZzIpuqfxok
11ನೇ ವರ್ಷದ ಶ್ರೀ ಗಣೇಶಗಾಯಿತ್ರಿ ಮಾತೆಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವಕ್ಕೆ ಶ್ರೀ ಸದಾನಂದ ಶ್ರೀಗಳಿಂದ ಆಹ್ವಾನ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್