ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತಾಲೂಕಿನ ವಿವಿಧ ಗ್ರಾ.ಪಂಗಳಿಗೆ ಜಿ.ಪಂ. ಸಿಇಒ ಭೇಟಿ – ಕಾಮಗಾರಿ ಪರಿಶೀಲನೆ

Advertisement
ರಾಯಚೂರು ಜು ೧೪.ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ, ಆರ್.ಎಚ್.ಕ್ಯಾಂಪ್, ರೌಡಕುಂದ ಮತ್ತು ಸೋಮಲಾಪೂರು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಭೇಟಿ ನೀಡಿ ನರೇಗಾ, ಜಲಜೀವನ ಮಿಷನ್ ಮತ್ತು ಪಿ.ಆರ್.ಡಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಮೊದಲಿಗೆ ಜವಳಗೇರಾ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವ ನಾಲಾ ಹೊಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕೂಲಿಕಾರರೊಂದಿಗೆ ಕೆಲಸ ನಿರ್ವಹಿಸುವ ಬಗ್ಗೆ ಮತ್ತು ಕೂಲಿ ಮೊತ್ತ ಪಾವತಿಸುವ ಬಗ್ಗೆ ಚರ್ಚೆ ನಡೆಸಿ, ಸಕಾಲಕ್ಕೆ ಕೆಲಸ ನೀಡುತ್ತಾರೆಯೇ ಎನ್ನುವದನ್ನು ಕೂಲಿಕಾರರೊಂದಿಗೆ ಸಮಲೋಚಿಸಿ ಮಾಹಿತಿ ಪಡೆದುಕೊಂಡರು.

ಜಲಾಧಾರೆ ಪೈಪ್ ಲೈನ್ ಕಾಮಗಾರಿ ಮತ್ತು ಎಂವಿಎಸ್ ಹಾಗೂ ಕುಡಿಯುವ ನೀರಿನ ಒವರ್ ಟ್ಯಾಂಕ್‌ನ್ನು ಪರಿಶೀಲಿಸಿ ಟ್ಯಾಂಕ್ ಕಾಲಕಾಲಕ್ಕೆ ಸ್ವಚ್ಛಗೊಳಿಸಬೇಕು ಮತ್ತು ಗ್ರಾಮಸ್ಥರಿಗೆ ಸರಬರಾಜು ಮಾಡುತ್ತಿರುವ ನೀರಿನಲ್ಲಿ ಯಾವುದೇ ಲೋಪದೋಷಗಳು ಬಾರದಂತೆ ನಿಗಾವಹಿಸಬೇಕು ಎಂದರು.

ಬಾಲಯ್ಯ ಕ್ಯಾಂಪ್‌ನಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನಳದ ಸಂಪರ್ಕ ಕಲ್ಪಿಸಿರುವದನ್ನು ಸ್ವತಃ ಪರಿಶೀಲಿಸಿ, ನೀರು ಬರುತ್ತಿವೆಯೇ ಇಲ್ಲ ಎನ್ನವುದನ್ನು ಗ್ರಾಮಸ್ಥರನ್ನು ಕೇಳಿ ಮಾಹಿತಿ ಪಡೆದುಕೊಂಡರು. ನರೇಗಾದಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಬಿಸಿಯೂಟ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ, ಬಾಕಿಯಿರುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಬಂಧಿಸಿದವರೆಗೆ ಸೂಚಿಸಿದರು.



ಆರ್.ಎಚ್.ಕ್ಯಾಂಪ್ ನಲ್ಲಿ ಜಲಜೀವನ ಮಿಷನ್ ಯೋಜನೆಯಡಿ ನಳದ ಸಂಪರ್ಕ ಕಲ್ಪಿಸಿರುವದನ್ನು ಪರಿಶೀಲಿಸಿದರು. ರೌಡಕುಂದಾ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಅಧಿಕಾರಿಗಳು ಮತ್ತು ಸಿಬ್ಬಂದಿಯವರೊಂದಿಗೆ ಕಡತಗಳ ನಿರ್ವಹಣೆ ಮತ್ತು ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆಯಡಿಯಲ್ಲಿ ಹೆಚ್ಚು ಹೆಚ್ಚು ಫಲಾನುಭವಿಗಳ ಹೆಸರು ನೊಂದಾಯಿಸಬೇಕು. ಅಮೃತ ಸರೋವರ ಯೋಜನೆಯಡಿ ನಿರ್ಮಾಣ ಮಾಡಿರುವ ಕೆರೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ನಂತರ ಬಿಸಿಯೂಟ ಕೋಣೆಯಲ್ಲಿರುವ ದಾಸ್ತನು ಕೊಠಡಿಯಲ್ಲಿ ಧವಸ ಧಾನ್ಯಗಳನ್ನು ಪರಿಶೀಲಿಸಿದರು. ಅಂಗನವಾಡಿ ಕೇಂದ್ರ ಪರಿಶೀಲಿಸಿದರು. ಶಾಲಾ ಕಂಪೌಂಡ ವೀಕ್ಷಣೆ ಮಾಡಿದರು. ಶಾಲಾಯಲ್ಲಿರುವ ಕಛೇರಿಗೆ ತೆರಳಿ ಹಾಜರಾತಿಯನ್ನು ಪರಿವೀಕ್ಷಣೆ ಮಾಡಿದರು. ನಂತರ ಸೋಮಲಾಪೂರು ಗ್ರಾಮ ಪಂಚಾಯತಿಯಲ್ಲಿ ನಡೆಯುತ್ತಿರುವ ಗೋಕಟ್ಟೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಕೂಲಿಕಾರರೊಂದಿಗೆ ಸ್ಥಳದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಪಡೆದರು.

ಸಾಸಲಿಮರ ಕ್ಯಾಂಪ್‌ನಲ್ಲಿ ಜಲಜೀವನ ಮೀಷನ್ ಯೋಜನೆಯಡಿ ಮನೆ ಮನೆಗೆ ಗಂಗೆ ಸಂಪರ್ಕವನ್ನು ಗುಣಮಟ್ಟವನ್ನು ಪರಿಶೀಲಿಸಿ, ನಳದೊಳಗೆ ನೀರು ಬರುವುದನ್ನು ಖಾತ್ರಿಪಡಿಸಿಕೊಂಡರು. ನಂತರ ಕ್ಯಾಂಪ್‌ನಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು. ನಂತರ ಪ್ರತಿಯೊಂದು ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ ಸಹಾಯಕ ನಿರ್ದೇಶಕರು (ಗ್ರಾ.ಉ) ಮನೋಹರ, ಪಿ.ಆರ್.ಇ.ಡಿ ಕಾರ್ಯನಿರ್ವಾಹಕ ಅಭಿಯಂತರರು ಶಿವಪ್ಪ ಮತ್ತು ಗ್ರಾ.ಮೀ.ಕು ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು ಹಾಗೂ ಗ್ರಾ.ಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ