ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತುರುವಿಹಾಳ ಸಿಡಿಪಿಒ ಅಪೂರ್ಣ ಅರ್ಜಿಗಳನ್ನು ಪೂರ್ತಿಗೊಳಿಸಲು ಹೊಸ ಅವಧಿ

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ : ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಿಂಧನೂರು ತಾಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ತುರುವಿಹಾಳ ಘಟಕ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 23-9-2024 ರಿಂದ 22.10.2024 ರವರೆಗೆ ಕಾಲಾವಕಾಶ ನೀಡಲಾಗಿತ್ತು.
01
ಪ್ರಸ್ತುತ,ಅರ್ಜಿ ಸಲ್ಲಿಸುವ ಅವಧಿ ಮುಗಿದಿದ್ದು,ಅರ್ಜಿಗಳನ್ನು ಸಲ್ಲಿಸುವಲ್ಲಿ ಅರ್ಜಿದಾರರಿಗೆ ಹಲವು ತಾಂತ್ರಿಕ ಸಮಸ್ಯೆಗಳು ಉಂಟಾಗಿದ್ದರಿಂದ,ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹಾಗೂ ಸಹಾಯಕಿಯ ಹುದ್ದೆಗಳಿಗೆ ಅಪೂರ್ಣ ಅರ್ಜಿಗಳನ್ನು ಸ್ವೀಕರಿಸಲಾಗಿದೆ.

2024ರ ಡಿಸೆಂಬರ್ 20 ರಂದು ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದಲ್ಲಿ,ಅರ್ಜಿಯನ್ನು ಪೂರ್ತಿಗೊಳಿಸದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು,ಅವರು 2024ರ ಡಿಸೆಂಬರ್ 26 ರಿಂದ 2025ರ ಜನವರಿ 5 ರವರೆಗೆ ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ.

ಅರ್ಜಿದಾರರು ವೆಬ್‍ಸೈಟ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಿಂಧನೂರು ತಾಲೂಕಿನ ತುರುವಿಹಾಳ ಘಟಕದ
ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸುವಂತೆ ತುರುವಿಹಾಳ ಘಟಕ ಯೋಜನೆಯ
ಶಿಶು ಅಭಿವೃದ್ಧಿ ಅಧಿಕಾರಿ ಅಶೋಕ ಎಮ್.ರವರು ಪತ್ರಿಕೆಗೆ ತಿಳಿಸಿದ್ದಾರೆ.
ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ