ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತೆರಿಗೆ ವಸೂಲಾತಿ ಅಭಿಯಾನಕ್ಕೆ ತಾ.ಪಂ ಇಒ ಅಮರೇಶ ಯಾದವ್ ರಿಂದ ಚಾಲನೆ

Advertisement
ಮಸ್ಕಿ : ತಾಲೂಕಿನ ಅಂಕುಶದೊಡ್ಡಿ,ಮಾರಲದಿನ್ನಿ,ಅಡವಿಬಾವಿ (ಮಸ್ಕಿ) ಗ್ರಾಮ ಪಂಚಾಯತಿಯಲ್ಲಿ ಗುರುವಾರ ಬೆಳಗ್ಗೆ 8 ಕ್ಕೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಮರೇಶ ಯಾದವ್ ಅವರು ತೆರಿಗೆ ವಸೂಲಾತಿ ಅಭಿಯಾನಕ್ಕೆ ಚಾಲನೆ ನೀಡಿದರು.
ತದ ನಂತರ ಮಾತನಾಡಿ,ಸ್ಥಳೀಯರು ತೆರಿಗೆ ಪಾವತಿಸಿದರೆ,ಮಾತ್ರ ಗ್ರಾಮ ಪಂಚಾಯತಿಗಳ ಸಿಬ್ಬಂದಿ ವೇತನ ಇನ್ನಿತರೆ ಆಡಳಿತಾತ್ಮಕ ವೆಚ್ಚಕ್ಕೆ ಅನುಕೂಲವಾಗಲಿದೆ.ಈ ಹಿನ್ನಲೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶದಂತೆ ಎರಡನೇ ಗುರುವಾರವಾದ ಇಂದು ತೆರಿಗೆ ವಸೂಲಾತಿ ಅಭಿಯಾನ ಜರುಗಿದೆ.
ಆದ್ದರಿಂದ ಸ್ಥಳೀಯರು ತಮ್ಮ ಸ್ವತ್ತುಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ ಕರ ವಸೂಲಿಗಾರರು ನಿಗದಿಪಡಿಸುವ ಮೊತ್ತವನ್ನು ಪಾವತಿಸಿ ಸಹಕರಿಸಬೇಕು ಎಂದರು.

ಇನ್ನೂ ಸಹಾಯಕ ನಿರ್ದೇಶಕರಾದ (ಪಂಚಾಯತ್‌ ರಾಜ್‌) ಸೋಮನಗೌಡ ಪಾಟೀಲ್‌ ಅವರ ನೇತೃತ್ವದಲ್ಲಿ ಹಾಲಾಪುರದಲ್ಲಿ ತೆರಿಗೆ ವಸೂಲಾತಿ ಅಭಿಯಾನ ಜರುಗಿತು.
ಒಟ್ಟಾರೆಯಾಗಿ ಮಸ್ಕಿ ತಾಲೂಕಿನ 21 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 15 ಲಕ್ಷ ರೂ.ಕ್ಕೂ ಹೆಚ್ಚು ತೆರಿಗೆ ಸಂಗ್ರಹವಾಗಿದೆ.
ಹಾಗೂ ತಲೇಖಾನ್‌,ಮಟ್ಟೂರು,ಮೆದಕಿನಾಳ,ಸಂತೆಕಲ್ಲೂರು,ಗುಡದೂರು,ಬಪ್ಪೂರು ಗ್ರಾ.ಪಂಗಳು ತೆರಿಗೆ ವಸೂಲಾತಿಯಲ್ಲಿ ಮುಂಚೂಣಿಯಲ್ಲಿದ್ದು,ರಾತ್ರಿ 8 ರವರೆಗೆ ತೆರಿಗೆ ವಸೂಲಾತಿ ಅಭಿಯಾನ ಜರುಗಿತು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು,ಕರವಸೂಲಿಗಾರರು,ಸಿಬ್ಬಂದಿ ವರ್ಗದವರು ಇದ್ದರು.
ವರದಿ : ಎಚ್.ಕೆ.ಬಡಿಗೇರ್

ಸಿಂಧನೂರಿನ ಸಾರ್ವಜನಿಕರು ಕುಡಿದಿದ್ದು ನೀರಲ್ಲ ಚರಂಡಿ ನೀರು.! || DRINAGE DRINKING WATER ||
https://youtu.be/1hmwmlsk2XA?si=Np3_gWAfwqsRAFD2
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ