ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಮಾವೇಶ

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಮಸ್ಕಿ ತಾಲ್ಲೂಕು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ತಾಲ್ಲೂಕಿನ ಭ್ರಮರಂಭಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು.

ಈ ತಾಲ್ಲೂಕು ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎಮ್ ಅಮರೇಶ ರವರು ಉದ್ಘಾಟಿಸಿ ಶುಭ ಹಾರೈಸಿ ನಂತರ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳೆಯರನ್ನು ಸ್ವಾವಲಂಭಿಯನ್ನಾಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.ನಾಡಿನಾದ್ಯಂತ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿರುವುದನ್ನು ಕಂಡು ಸಹಿಸದ ಕೆಲವು ಪಟ್ಟಭದ್ರರು. ಯೂಟೂಬ್‍ನಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರಹೆಗಡೆರವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಹೋರಾಟದ ಮೂಲಕ ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಅಂಗವಿಕಲರಿಗೆ ಮಾಶಾಸನ, ವಿದ್ಯಾರ್ಥಿವೇತನ, ನಿರಾಶ್ರಿತರಿಗೆ ವಾತ್ಸಲ್ಯ ಮನೆ ಕಟ್ಟಿಸಿಕೊಡುವುದು, ವಯೋವೃದ್ದರಿಗೆ ವಾಟರ್‍ಬೆಡ್ ಇನ್ನಿತರೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ.ಸ್ವಸಹಾಯ ಸಂಘಗಳ ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದುಪಯೋಗಪಡಿಸಿಕೊಂಡು ಜೀವನ ಮಟ್ಟ ಸುಧಾರಿಸಿಕೊಂಡಿದ್ದಾರೆಂದು ಹೇಳಿದರು.


ನಂತರ ಮಾನ್ಯ ಜಿಲ್ಲಾ ನಿರ್ದೇಶಕರಾದ ಮೋಹನ್ ನಾಯಕ್ ರವರು ಮಾತನಾಡಿ ಸ್ವ ಸಹಾಯ ಸಂಘಗಳ ಬಲವರ್ಧನೆ ಶಿಸ್ತು ಬದ್ಧ ವ್ಯವಹಾರ ಬಡ್ಡಿ ದರ,PRK ‌ಬಗ್ಗೆ, ಮಾಸಿಕ ವರದಿ ಮರುಪಾವತಿ ಚೀಟಿ ಬಗ್ಗೆ,ಲಾಭಾಂಶ ಹಂಚಿಕೆ,ವಾರದ ಕಂತಿನ ಪ್ರಯೋಜನ,ಸಮುದಾಯ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.https://youtu.be/1hmwmlsk2XA?si=8pj5zT4IS_FggggT

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಅಮರೇಶ ಮತ್ತು ತಾಲೂಕ ಯೋಜನಾಧಿಕಾರಿ ಶಾಲಿನಿ ಹಾಗೂ ಐ.ಡಿ.ಬಿ.ಐ ಸಿಬ್ಬಂದಿಗಳಾದ ಬಶೀರ್,ಸುದೀಪ್ ಹಾಗೂ ತಾಲೂಕಿನ 8 ವಲಯದ 71 ಒಕ್ಕೂಟಗಳು 355 ಮಂದಿ ಪದಾಧಿಕಾರಿಗಳು ಮತ್ತು ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು,ಸೇವಾಪ್ರತಿನಿಧಿಗಳು,ಸಿ.ಎಸ್.ಸಿ ಸೇವಾದಾರರು ಉಪಸ್ಥಿತರಿದ್ದರು.







ವರದಿ : ಎಚ್.ಕೆ.ಬಡಿಗೇರ್

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ