ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಗರದ ಮುಖ್ಯ ಬೀದಿಗಳಲ್ಲಿ ಶಾಸಕರಿಂದ ಬಹಿರಂಗ ಪ್ರಚಾರ

Advertisement
ಸಿರುಗುಪ್ಪ ,ಮೇ. 08 ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ನಗರದ ಬಳ್ಳಾರಿ ರಸ್ತೆ, ಸಿಂಧನೂರು ರಸ್ತೆ, ದೇಶನೂರು ರಸ್ತೆ ಹಾಗೂ ಆದೋನಿ ರಸ್ತೆಯಲ್ಲಿನ ವಿವಿಧ ವಾರ್ಡ್ಗಳಲ್ಲಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ಹಿಂದೂ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ತ್, ಭಜರಂಗದಳ ಹಾಗೂ ಬಿಜೆಪಿ ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸುವ ಮೂಲಕ ಬಹಿರಂಗ ಪ್ರಚಾರ ನಡೆಸಿದರು.

ನಗರದುದ್ದಕ್ಕೂ ನಡೆದ ರೋಡ್ ಶೋ ವೇಳೆ ಶ್ರೀಕನಕದಾಸ, ಶ್ರೀ ವಾಲ್ಮೀಕಿ, ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಸೇರಿದಂತೆ ಇನ್ನಿತರ ಮಹಾತ್ಮರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಲಾಯಿತು.

ಕೇಸರಿ ಶಾಲು ಮತ್ತು ಧ್ವಜ ಹಾಗೂ ಬಿಜೆಪಿ ಪಕ್ಷದ ಭಾವುಟವನ್ನು ಹಿಡಿದ ಕೇಸರಿ ಪಡೆಯು ಶ್ರೀ ಹನುಮಾನ್ ಶಿವಾಜಿಗೆ ಜಯ ಘೋಷಣೆಯೊಂದಿಗೆ ಪ್ರದಾನಿ ಮೋದಿಜಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೂ ಜೈಕಾರ ಹಾಕುತ್ತಾ ಸಾಗಿತ್ತು.

ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ತಾಲೂಕಿನ ಅಭಿವೃದ್ದಿಗಾಗಿ ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ಅನೇಕ ಅನುದಾನಗಳ ಹೊಳೆಯೇ ಹರಿದಿದೆ.

ತಾಲೂಕಿನ ರೈತರ ಜಮೀನುಗಳಿಗೆ ನೀರಾವರಿ ಕಲ್ಪಿಸುವುದರೊಂದಿಗೆ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ವಸತಿಯುತ ಶಾಲೆಗಳು, ಕಾಲೇಜುಗಳ ನಿರ್ಮಾಣದ ನನ್ನ ಗುರಿಯೊಂದಿಗೆ ಸಾರ್ವಜನಿಕರಿಗೆ ಆರೋಗ್ಯ, ರಸ್ತೆ, ಸೇತುವೆ, ಕುಡಿಯುವ ನೀರಿನ ಕೆರೆಗಳನ್ನು ನಿರ್ಮಿಸಿ ಅಗತ್ಯ ಸೌಲಭ್ಯಗಳನ್ನು ಒದಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಬಿಜೆಪಿ ಪಕ್ಷವನ್ನು ಬೆಂಬಲಿಸುವAತೆ ಮತದರಾರಲ್ಲಿ ಮನವಿ ಮಾಡಿದರು.

ಇದೇ ವೇಳೆ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಆರ್.ಸಿ.ಪಂಪನಗೌಡ, ಹಿರಿಯ ಮುಖಂಡ ಬಿ.ಇ.ದೊಡ್ಡಯ್ಯ, ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಚಾಗಿ ಸುಬ್ಬಯ್ಯಶೆಟ್ಟಿ, ಉಪಾಧ್ಯಕ್ಷ ಆನಂದ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚನ್ನಬಸವ, ಭಜರಂಗದಳದ ತಾಲೂಕು ಸಂಯೋಜಕ ಆರ್.ಹೇಮನಗೌಡ ಹಾಗೂ ವಿವಿಧ ಸಂಘಟನೆಗಳ ಬಿಜೆಪಿ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್