ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನವರಾತ್ರಿ ಉತ್ಸವ ನಿಮಿತ್ತ ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಪುರಾಣ ಮಂಗಲ ಹಾಗೂ ದೇವಿಯ ರಥೋತ್ಸವ ವೈಭವದಿಂದ ನಡೆಯಿತು.

Advertisement
ಮಸ್ಕಿ : ನವರಾತ್ರಿ ಉತ್ಸವ ನಿಮಿತ್ತ ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಪುರಾಣ ಮಂಗಲ ಹಾಗೂ ದೇವಿಯ ರಥೋತ್ಸವ
ವೈಭವದಿಂದ ನಡೆಯಿತು.


ನೂರಾರು ಮಹಿಳೆಯರು ರಥ ಎಳೆಯುವ ಮೂಲಕ ಭ್ರಮರಾಂಬಾ ದೇವಿಯ ಕೃಪೆಗೆ ಪಾತ್ರರಾದರು.

ಸಂಜೆ 5 ಗಂಟೆಗೆ ಗಚ್ಚಿನಮಠದ ವರ ರುದ್ರಮನಿ ಶಿವಾಚಾರ್ಯ ಸ್ವಾಮೀಜಿ ಗಳ ನೇತೃತ್ವದಲ್ಲಿ
ಭ್ರಮರಾಂಬಾ ದೇವಿಯ ಉತ್ಸವ ಮೂರ್ತಿಯನ್ನು
ರಥದ ಸುತ್ತ ಐದು ಬಾರಿ ಸುತ್ತು ಹಾಕಿದ ನಂತರ ರಥಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನೂರಾರು ಭಕ್ತರ ಜಯಘೋಷಗಳ ನಡುವೆ ಭ್ರಮರಾಂಬಾ ದೇವಿಯ ಉತ್ಸವ ಮೂರ್ತಿಯನ್ನು ರಥದ ಮೇಲೆ ಪ್ರತಿಷ್ಠಾಪಿಸಲಾಯಿತು.

ಮಸ್ಕಿ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಮಹಿಳೆಯರು ರಥದ ಮಿಣಿ ಹಿಡಿದು ಎಳೆಯತೊಡಗಿದರು.
ಹೆದ್ದಾರಿ ಪಕ್ಕದಲ್ಲಿ ಇರುವ
ಪಾದಗಟ್ಟೆವರೆಗೆ ರಥ ಎಳೆದು
ವಾಪಸು ಭ್ರಮರಾಂಬಾ ದೇವಸ್ಥಾನಕ್ಕೆ ತರಲಾಯಿತು.

ಮಹಿಳೆಯರು ರಥ ಎಳೆಯುತ್ತಿದ್ದರೆ ಪುರುಷರು ರಥಕ್ಕೆ ಉತ್ತುತ್ತಿ ಎಸೆದು ಭಕ್ತಿ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸ್ವಾಮಿ ಶಾರದೇಶಾನಂದಜಿ ಮಹಾರಾಜ ರಾಮಕೃಷ್ಣ ವಿವೇಕಾನಂದಾಶ್ರಮ ಹರಿಹರ,ಶಾಸಕ ಆರ್.ಬಸವನಗೌಡ ತುರುವಿಹಾಳ,ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ,ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ,ತಹಶೀಲ್ದಾರ್‌ ಡಾ ಮಲ್ಲಪ್ಪ ಕೆ ಯರಗೋಳ
ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ,ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ,ಉಪಾಧ್ಯಕ್ಷರಾದ ಗೀತಾ ಶಿವರಾಜ,ರವಿಗೌಡ ಪೊಲೀಸ್ ಪಾಟೀಲ, ಬಸವನಗೌಡ ಪೊಲೀಸ್ ಪಾಟೀಲ,
ಸರ್ಕಲ್ ಇನ್‌ಸ್ಪೆಕ್ಟರ್ ಬಾಲಚಂದ್ರ ಡಿ.ಲಕ್ಕಂ,ಪಿ.ಎಸ್.ಐ.ತಾರಬಾಯಿ,
ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದ ಪ್ರಧಾನ ಅರ್ಚಕರಾದ ಸಿದ್ದಯ್ಯ ಹೆಸರೂರು ಹಿರೇಮಠ,ಸೇರಿದಂತೆ
ಪುರಸಭೆ ಸದಸ್ಯರು,ಅನೇಕ ಮುಖಂಡರು ಹಾಗೂ ಭ್ರಮರಾಂಬ ದೇವಿಯ ಭಕ್ತರು
ಭಾಗವಹಿಸಿದ್ದರು.

ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ