ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಾನು ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ ಸಿದ್ದರಾಮಯ್ಯ

Advertisement
ಜನೆವರಿ 03. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅಂಬಾಮಠಕ್ಕೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿ.ಎಂ ಸಿದ್ದರಾಮಯ್ಯನವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾನು ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ ಎಂದು ಹೇಳಿದರು . ನಂತರ ಸಿಂಧನೂರು ವಿಧಾನಸಭಾ ಕ್ಷೇತ್ರದ ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಾವು ಅಧಿಕಾರಕ್ಕೆ ಬಂದ ಮೇಲೆ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ನಿಗಮಗಳಡಿ ₹176 ಕೋಟಿಗಳನ್ನು ಒದಗಿಸಲಾಗಿದೆ. ಸಾಲಗುಂದಾ ಏತ ನೀರಾವರಿಗೆ ₹71 ಕೋಟಿ, ಮಳ್ಳೂರುಏತ ನೀರಾವರಿಗೆ ₹21 ಕೋಟಿ, ಒಳಬಳ್ಳಾರಿ ಏತ ನೀರಾವರಿಗೆ ₹43 ಕೋಟಿಗೂ ಹೆಚ್ಚು ಅನುದಾನವನ್ನು ಒದಗಿಸಲಾಗಿದೆ. ಹಂಪನಗೌಡ ಬಾದರ್ಲಿ ಅವರು ಈ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರು ಒದಗಿಸುವ ಪ್ರಯತ್ನದಲ್ಲಿ 30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಉಳಿದ 12 ಲಕ್ಷ ಪ್ರದೇಶಕ್ಕೆ ನೀರು ಒದಗಿಸುವ ಕಾರ್ಯ ವಿವಿಧ ಹಂತಗಳಲ್ಲಿದೆ.

₹431 ಕೋಟಿ ವೆಚ್ಚದಲ್ಲಿ ಪಾಪಯ್ಯ ಟನಲ್ ಮತ್ತು ಕಾಲುವೆ ಅಭಿವೃದ್ಧಿಗೆ ಹಾಗೂ ತುಂಗಭದ್ರಾ 33 ಗೇಟ್ ಗಳನ್ನು ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಜೂನ್ ಒಳಗೆ ಈ ಕೆಲಸವನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಬೆಳೆಗೆ ನೀರು ಒದಗಿಸಲಾಗುವುದು. ಎಷ್ಟೇ ವೆಚ್ಚವಾದರೂ ಹೊಸ ಗೇಟ್ ಗಳನ್ನು ಅಳವಡಿಸಿ ನೀರು ಒದಗಿಸುತ್ತೇವೆ.

ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ತಡೆ ಉಂಟಾಗಿಲ್ಲ. ಗ್ಯಾರಂಟಿಗಳಿಗೆ ಒಂದು ಲಕ್ಷದ 12 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 643 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ಸುಮಾರು 16 ಸಾವಿರ ಕೋಟಿ ವೆಚ್ಚವಾಗಿದೆ. 52,000 ಕೋಟಿ ಗಳನ್ನು ಈ ವರ್ಷ ವೆಚ್ಚ ಮಾಡಲಾಗಿದೆ.

ದೇಶದಲ್ಲಿಯೇ ಕರ್ನಾಟಕ ಅತಿ ಹೆಚ್ಚು ಒಣ ಭೂಮಿಯನ್ನು ಹೊಂದಿರುವ ಎರಡನೇ ರಾಜ್ಯ. ಆದ್ದರಿಂದ ರಾಜ್ಯದಲ್ಲಿ ಹೆಚ್ಚಿನ ನೀರಾವರಿ ಯೋಜನೆ ಕೈಗೆತ್ತಿಕೊಂಡು ಹಸಿರು ವಲಯ ಮಾಡುವುದು ನಮ್ಮ ಉದ್ದೇಶ. ಸಿಂಧನೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಲಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಇನ್ನೂ ಹೊರಡಿಸಿಲ್ಲ. 2003 ರಲ್ಲಿಯೇ ಇತ್ಯರ್ಥವಾಗಿ ನಮಗೆ ನ್ಯಾಯ ದೊರಕಿದ್ದರೂ 173 ಟಿಎಂಸಿ ನೀರನ್ನು ಬಳಕೆ ಮಾಡಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯವನ್ನು ಹೇರಲಾಗಿದೆ.

ನೀರಾವರಿ ಯೋಜನೆಗಳ ಮೂಲಕ ಆದಷ್ಟು ಶೀಘ್ರವಾಗಿ ಕಟ್ಟಕಡೆಯ ಭಾಗದ ರೈತರಿಗೆ ನೀರು ಒದಗಿಸುವ ಕೆಲಸವನ್ನು ಮಾಡುತ್ತೇವೆ. ದೇವಸ್ಥಾನದ ಅಭಿವೃದ್ಧಿಗೆ ಮೊದಲನೇ ಹಂತದಲ್ಲಿ ₹6.30 ಕೋಟಿ ಅನುದಾನದ ಪೈಕಿ ₹2 ಕೋಟಿ ಈಗಾಗಲೇ ವೆಚ್ಚ ಮಾಡಲಾಗಿದೆ. ಉಳಿದ ಹಣವನ್ನೂ ಬಿಡುಗಡೆ ಮಾಡಲಾಗುವುದು. ದೇವಸ್ಥಾನ ಮತ್ತು ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.

ಮನರೇಗಾ ಯೋಜನೆಗೆ ₹6,000 ಕೋಟಿಗಳನ್ನು ಪ್ರತಿ ವರ್ಷ ಖರ್ಚು ಮಾಡಲಾಗುತ್ತಿತ್ತು. ಆದರೆ ಕೇಂದ್ರದವರು ಈಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಯೋಜನೆಯನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದ್ದಾರೆ. ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರಿಗೆ ತೀವ್ರ ತೊಡಕುಂಟು ಮಾಡುವ ಈ ಹೊಸ ಕಾಯ್ದೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ.

ವಿಬಿ ಜಿ ರಾಮ್ ಜಿ ಕಾನೂನನ್ನು ರದ್ದು ಮಾಡಿ, ಮನರೇಗಾ ಕಾನೂನು ಪುನರ್ ಸ್ಥಾಪನೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕಾನೂನಿನ ಸ್ವರೂಪವನ್ನೇ ಬದಲಾಯಿಸಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಆದರೆ ಈಗ ಕೇಂದ್ರವು ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 40 ರಷ್ಟು ಅನುದಾನ ಭರಿಸಬೇಕೆಂಬ ಹೊಸ ನಿಯಮ ತಂದಿರುವುದು ಒಕ್ಕೂಟ ನಿಯಮಕ್ಕೆ ವಿರುದ್ಧ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ, ಜನಪರವಾಗಿದ್ದ ಮನರೇಗಾ ಕಾನೂನನ್ನು 20 ವರ್ಷಗಳ ನಂತರ ಪ್ರಧಾನಿ ಮೋದಿಯವರು ಹೆಸರು ಬದಲಿಸಿ ವಿಬಿ ಜಿ ರಾಮ್ ಜಿ ಎಂದು ನಾಮಕರಣ ಮಾಡಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಹೇಳಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ