ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪೋಕ್ಸೋ ಕಾಯ್ದೆಯಡಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ೧೫,೦೦೦/- ದಂಡ

Advertisement
ರಾಯಚೂರು ಜಿಲ್ಲೆ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ ೨೦೨೧ ರಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯ, ಪೀಠಾಸೀನ ಲಿಂಗಸೂಗೂರಿನ ನ್ಯಾಯಾಲಯವು ೨೦ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿರುತ್ತಾರೆ.

ಲಿಂಗಸೂಗೂರು ತಾಲೂಕಿನ ನೀರಲಕೇರಿ ಗ್ರಾಮದ ಹುಲ್ಲಪ್ಪ ತಂದೆ ರಾಮಣ್ಣ ವಯಸ್ಸು-೨೫ ಶಿಕ್ಷೆಗೆ ಗುರಿಯಾದ ಆರೋಪಿ.

https://youtu.be/Ya-ypFqVNkM?si=LlBoUUmIVTHBpjxK

ನೊಂದ ಅಪ್ರಾಪ್ತ ಬಾಧಿತಳು ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾದ ಶ್ರೀ ಮಹಾಂತೇಶ ಸಜ್ಜನ ಇವರು ಆರೋಪಿತನ ವಿರುದ್ಧ ಮಾನ್ಯ ನ್ಯಾಯಾಲಯದಲ್ಲಿ ದೋಷಾರೋಪಣೆ ಪತ್ರವನ್ನು ಸಲ್ಲಿಸಿದ್ದು ಇರುತ್ತದೆ.

ಮಾನ್ಯ ನ್ಯಾಯಾಲಯವು ಒಟ್ಟು ೨೦ ಸಾಕ್ಷಿಗಳ ಪೈಕಿ ೧೭ ಸಾಕ್ಷಿದಾರರ ವಿಚಾರಣೆ ನಡೆಸಿದ್ದು, ಸಾಕ್ಷಿ ಪುರಾವೆಗಳನ್ನು ಪರೀಶಿಲಿಸಿ ಆರೋಪಿಯ ಮೇಲಿನ ಅಪಾದನೆ ಸಾಬೀತಾಗಿದೆ ಎಂದು ೩ ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಿ.ಬಿ. ಜಕಾತಿ ಯವರು ಆರೋಪಿತನ ವಿರುದ್ಧ ಅಪಾದನೆ ಸಾಬೀತಾಗಿದೆ ಎಂದು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ.

https://youtu.be/A83Dm5v1p1g?si=vbBPAbpBaV5BmF6x

ಅದರಂತೆ ಆರೋಪಿಗೆ ೨೦ ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ. ೧೫,೦೦೦/- ದಂಡವನ್ನು ವಿಧಿಸಲಾಗಿದೆ ಮತ್ತು ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ರೂ.೯.೦೦.೦೦೦/- (ರೂ. ಒಂಬತ್ತು ಲಕ್ಷಗಳ) ಪರಿಹಾರವನ್ನು ನೀಡಬೇಕೆಂದು ಮಾನ್ಯ ನ್ಯಾಯಾಲಯವು ಆದೇಶಿಸಿದೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ. ಮಂಜುನಾಥ ರವರು ವಾದವನ್ನು ಸಮರ್ಥವಾಗಿ ಮಂಡಿಸಿರುತ್ತಾರೆ ಸಾಕ್ಷಿದಾರರನ್ನು ಮಾನ್ಯ ನ್ಯಾಯಾಲಯಕ್ಕೆ ಸಮಯಕ್ಕೆ ಸರಿಯಾಗಿ ಆಗಿನ ಪೇದೆಗಳಾದ ಶ್ರೀ ಬಸವರಾಜ, ಮಲ್ಲಪ್ಪ ಪೂಜಾರಿ ಮತ್ತು ವಿರೇಶ ರವರು ಕರೆತಂದು ಸಹಕರಿಸಿರುತ್ತಾರೆ .
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ