ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪ್ರಜಾಪ್ರಭುತ್ವದಲ್ಲಿ ಮತದಾನವೆಂಬುವುದು ಪವಿತ್ರ ಕಾರ್ಯ: ಸಿಇಒ ಶಶಿಧರ ಕುರೇರ

Advertisement
ರಾಯಚೂರು,ಏ.17(ಕವಾ):- ಜಿಲ್ಲೆಯ ಮಸ್ಕಿ ತಾಲೂಕಿನ ವಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮದ ನಾಲೆ ಹೂಳು ಎತ್ತುವ ಕಾಮಗಾರಿ ಸ್ಥಳದಲ್ಲಿ ಏ.17ರ(ಸೋಮವಾರ) ನರೇಗಾ ಕೂಲಿಕಾರರಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ನಂತರ ನರೇಗಾ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರಕಾರ್ಯವಾಗಿದೆ. ರಾಷ್ಟ್ಟ್ರಪತಿ ಮತ್ತು ಸಾಮಾನ್ಯ ಪ್ರಜೆಯ ಮತದಾನದ ಮೌಲ್ಯ ಒಂದೇ ಆಗಿದೆ. ಆದ್ದರಿಂದ ಪ್ರತಿಯೊಬ್ಬರು ಮತದಾನ ಮಾಡಬೇಕು. ಭಾರತದ ಸಂವಿಧಾನವು 18 ವರ್ಷಮೇಲ್ಪಟ್ಟ ಪ್ರತಿಯೊಬ್ಬರಿಗೂ ಮತದಾನ ಹಕ್ಕು ನೀಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟ್ಟು ಗಟ್ಟಿಗೊಳ್ಳಲು ಎಲ್ಲರ ಸಹಕಾರ ಅತ್ಯಗತ್ಯ. ವಯೋವೃದ್ಧರು, ಅಂಗವಿಕಲರಿಗೆ ಅನುಕೂಲ ಕಲ್ಪಿಸುವನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಚುನಾವಣೆ ಆಯೋಗ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಬೇಕು ಎಂದರು.

ಬೂತ್ ಗಳಿಗೆ ಭೇಟಿ : ಬಸಾಪುರ ಸರ್ಕಾರಿ ಪ್ರಾಥಮಿಕ, ಅಂಕುಶದೊಡ್ಡಿ ಪ್ರಾಥಮಿಕ ಶಾಲೆಯ ಮತದಾನ ಬೂತ್ ಗಳಿಗೆ ಜಿಲ್ಲಾ ಪಂಚಾಯತಿ ಸಿಇಒ ಶಶಿಧರ ಕುರೇರ ಅವರು ಭೇಟಿ ನೀಡಿದರು. ಮತದಾನದ ಕುರಿತು ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೂತ್‍ಗಳಿಗೆ ವರ್ಲಿ ಚಿತ್ರಗಳನ್ನು ಬಿಡಿಸಲಾಗುತ್ತಿದೆ. ಮತದಾರರ ಅನುಕೂಲಕ್ಕೆ ಎಲ್ಲ ಬೂತ್‍ಗಳಲ್ಲಿ ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು. ಅಂಕುಶದೊಡ್ಡಿ ಶಾಲೆಯ ಮೈದಾನದಲ್ಲಿ ನರೇಗಾದಡಿ ನಿರ್ಮಿಸುತ್ತಿರುವ ಶೌಚಗೃಹವನ್ನು ಆದಷ್ಟ್ಟು ಬೇಗ ಪೂರ್ಣಗೊಳಿಸಿ, ಮತದಾರರ ಬಳಕೆಗೆ ಅನುಕೂಲ ಕಲ್ಪಿಸಬೇಕು ಎಂದರು.

ತದ ನಂತರ ಮಸ್ಕಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಚುನಾವಣಾಧಿಕಾರಿಗಳು, ಸಿಬ್ಬಂದಿ ಜೊತೆಗೆ ಸಭೆ ನಡೆಸಿದ ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಸ್ವಿಪ್ ಸಮೀತಿಅಧ್ಯಕ್ಷರು ಶಶಿಧರ ಕುರೇರ್ ಅವರು, ಯಾವುದೇ ಬಾಹ್ಯ ಒತ್ತಡಗಳಿಗೆ ಒಳಗಾಗದೇ ಚುನಾವಣೆ ಕರ್ತವ್ಯ ನಿರ್ವಹಿಸಬೇಕು. ಒಂದು ವೇಳೆ ರಾಜಕೀಯ ಪಕ್ಷಗಳ ಮುಖಂಡರು ನೀತಿ ಸಂಹಿತೆ ಉಲ್ಲಂಘಿಸಿದರೆ, ಕೇಸ್ ದಾಖಲಿಸಬೇಕು ಎಂದರು.

ಈ ವೇಳೆ ಮಸ್ಕಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಪವನ್ ಕುಮಾರ್, ಚುನಾವಣಾ ಅಧಿಕಾರಿ ದೇವಿಕಾ, ತಹಸೀಲ್ದಾರ್ ಅರಮನೆ ಸುಧಾ, ಅಧಿಕಾರಿಗಳಾದ ಶೃತಿ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ಸಿಪಿಐ ಇತರರಿದ್ದರು.

ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಶಿವಾನಂದರೆಡ್ಡಿ, ಪಿಡಿಒಗಳಾದ ಬಸವರಾಜ್, ಸುರೇಶ್ ಪಾಟೀಲ್, ಟಿಎಇ ಮಾನಪ್ಪ ಸೇರಿದಂತೆ ಇತರರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್