ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ರಜನಿಕಾಂತ ಚೌಹಾಣ್

Advertisement
ರಾಯಚೂರು,ಏ.20(ಕವಾ):- ಮತದಾನ ಎಂಬುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯ, ಹಾಗೂ ಮೂಲಭೂತ ಹಕ್ಕಾಗಿದ್ದು, ಯಾವುದೇ ಆಸೆ ಆಮೀಶಗಳಿಗೆ ಒಳಗಾಗದೇ ಪ್ರತಿಯೊಬ್ಬರು ಮತದಾನ ಮಾಡಲು ಮುಂದಾಗಬೇಕೆಂದು ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ್ ಅವರು ಹೇಳಿದರು.

ಅವರು ಏ.19ರ(ಬುಧವಾರ) ನಗರಸಭೆ ಕಾರ್ಯಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಜಿಲ್ಲಾ ಸ್ವೀಪ ಸಮಿತಿ ಹಾಗೂ ನಗರ ಸಭೆ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮಮದ ಅಂಗವಾಗಿ ಮೇಣದಬತ್ತಿಯೊಂದಿಗೆ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.



18 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯ ಮತದಾನ ಮಾಡುವುದು ಕಡ್ಡಾಯವಾಗಿದ್ದು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಮತದಾನ ಮಾಡಲು ಮುಂದಾಗಬೇಕು ಮತದಾನ ಪ್ರತಿಯೊಬ್ಬರ ಹಕ್ಕು ಅದನ್ನು ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ ಮಾತನಾಡಿ, ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನವರಿಗೆ ಮತದಾನದ ಮಹತ್ವವನ್ನು ತಿಳಿಸಬೇಕು ಮತ್ತು ಪ್ರತಿಯೊಬ್ಬರು ಮತದಾನ ಮಾಡುವಂತೆ ಅವರಲ್ಲಿ ಮತದಾನ ಕುರಿತು ಅರಿವು ಮೂಡಿಸಬೇಕು ಎಂದರು.



ಮತದಾರರ ಸಾಕ್ಷಾರತ ಕ್ಲಬ್‍ನ ಸಂಪನ್ಮೂಲ ವ್ಯಕ್ತಿ ದಂಡಪ್ಪ ಬಿರಾದಾರ ಮಾತನಾಡಿ, ಮತದಾನದ ಹಕ್ಕನ್ನು ಚಲಾಯಿಸಲು ಮತದಾನದ ದಿನದಂದು ಮತದಾನ ಮಾಡಬೇಕು. ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣ ಮಾಡಬೇಕೆಂದು ತಿಳಿಸಿದರು.

ನಂತರ ಮೇಣಬತ್ತಿ ಹಿಡಿದು ನಗರಸಭೆ ಕಾರ್ಯಾಲಯದಿಂದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ವರೆಗೆ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಯಿತು. ಡಾ.ಬಿ.ಆರ್ ಅಂಬೇಡ್ಕರ ವೃತ್ತದಲ್ಲಿ ಮಾನವ ಸರಪಳಿ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ ಚನ್ನಮಲ್ಲಪ್ಪ ಗಂಟಿ, ಕೃಷ್ಣಾ ಕಟ್ಟಿಮನಿ, ಶಕೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ