ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಳಗನೂರು ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾಗಿ ಹುಸೇನ್ ಬಾಷಾ ಅವಿರೋಧ ಆಯ್ಕೆ

Advertisement
BB NEWS KANNADA

ಮಸ್ಕಿ ಮಾರ್ಚ್ 07. ಮಸ್ಕಿ ತಾಲೂಕಿನ ಬಳಗನೂರ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾಗಿ ಹುಸೇನ್ ಬಾಷಾ ಅವಿರೋಧ ಆಯ್ಕೆ – ಸೋಮನಗೌಡ ಬಾದರ್ಲಿ ಸನ್ಮಾನಬಳಗನೂರು:ಇಂದು ಬಳಗನೂರು ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾಗಿ ಹುಸೇನ್ ಬಾಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ RDCC ನಿರ್ದೇಶಕರಾದ ಸೋಮನಗೌಡ ಬಾದರ್ಲಿ ಅವರು ಹುಸೇನ್ ಬಾಷಾ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್ ಬಸನಗೌಡ ತುರುವಿಹಾಳ ಅವರು ಉಪಸ್ಥಿತರಿದ್ದರು.



ಹುಸೇನ್ ಬಾಷಾ ಅವರು ಸಕಲಕಲಾವಲ್ಲಭ ವ್ಯಕ್ತಿತ್ವ ಹೊಂದಿದ್ದು, ವಿಶೇಷವಾಗಿ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಭಾವವನ್ನು ಮೂಡಿಸಿಕೊಂಡಿರುವ ಅವರು, ಸ್ಥಳೀಯ ರಾಜಕೀಯದಲ್ಲಿ ಗಮನಾರ್ಹ ಸ್ಥಾನ ಪಡೆದಿದ್ದಾರೆ.

ಪಟ್ಟಣ ಪಂಚಾಯತ್ ಸದಸ್ಯರಿಂದ ಹಿಡಿದು ರಾಜ್ಯ ಮಟ್ಟದ ಪ್ರಮುಖ ಪ್ರಭಾವಿ ನಾಯಕರುಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಹುಸೇನ್ ಬಾಷಾ ಅವರು, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್ ಬಸನಗೌಡ ತುರುವಿಹಾಳ, ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಆರ್ ಸಿದ್ದನಗೌಡ ತುರುವಿಹಾಳ, ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಅವರೊಂದಿಗೆ ಸಹ ಆತ್ಮೀಯ ಸಂಪರ್ಕವನ್ನು ಹೊಂದಿದ್ದಾರೆ.

ಸಾಕಷ್ಟು ಯುವಕರ ಬೆಂಬಲವನ್ನು ಹೊಂದಿರುವ ಹುಸೇನ್ ಬಾಷಾ ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸ್ಥಾನಮಾನಗಳು ದೊರೆಯಲಿ ಎಂದು ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ