ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಜೆಪಿ ಅಭ್ಯರ್ಥಿ ಎಂ.ಎಸ್.ಸೋಮಲಿಂಗಪ್ಪ ಪರ ಜೆ.ಪಿ.ನಡ್ಡಾ ಮತಯಾಚನೆ

Advertisement
ಸಿರುಗುಪ್ಪ : ಹಲವಾರು ಹಗರಣಗಳೊಂದಿಗೆ ಭ್ರಷ್ಟಾಚಾರವನ್ನೆಸಗುವ ಮೂಲಕ ಸೋನಿಯಾ ಗಾಂಧಿ ಬೇಲ್ ಮೇಲೆ, ರಾಹುಲ್ ಗಾಂಧಿ ಬೇಲ್ ಮೇಲೆ, ಡಿ.ಕೆ.ಶಿವಕುಮಾರ್ ಬೇಲ್ ಮೇಲೆ ಹಾಗೂ ಅರ್ಕಾವತಿ ಡಿನೋಟಿಪಿಕೇಶನ್, ರೈತರ ವಿದ್ಯುತ್ ಪಂಪ್‌ಸೆಟ್‌ಗಳನ್ನು ಮಾರಿಕೊಂಡ ಸಿದ್ದರಾಮಯ್ಯ ಬೇಲ್ ಮೇಲೆ ಇರುವ ಭ್ರಷ್ಟರೆಂದು ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಆರೋಪಿಸಿದರು.

ನಗರದ ತಾಲೂಕು ಕ್ರೀಡಾಂಗಣದಿಂದ ಮಹಾತ್ಮ ಗಾಂಧೀಜಿ ವೃತ್ತದವರೆಗೂ ಬಿಜೆಪಿ ಪಕ್ಷದ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿ ಎಂ.ಎಸ್.ಸೋಮಲಿಂಗಪ್ಪ ಪರ ಮತಯಾಚಿಸಿದ ಅವರು ನೆರೆದಿದ್ದ ಅಪಾರ ಕಾರ್ಯಕರ್ತರನ್ನುದ್ದೇಶಿ ಮಾತನಾಡಿ ವಸತಿ ಶಾಲೆಗಳು, ಕಾಲೇಜುಗಳು, ನೀರಾವರಿ ಯೋಜನೆ, ಸೇತುವೆಗಳ ನಿರ್ಮಾಣದಂತಹ ಬೃಹತ್ ಯೋಜನೆಗಳ ಮೂಲಕ ತಾಲೂಕಿನ ವಿಕಾಸಕ್ಕೆ ಶ್ರಮಿಸುತ್ತಿರುವ ಅಭಿವೃದ್ದಿ ಹರಿಕಾರರಾಗಿರುವ ಸೋಮಲಿಂಗಪ್ಪನವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಭ್ರಷ್ಟಾಚಾರ ಹಗರಣಗಳ ಸರಮಾಲೆಯ ಕಾಂಗ್ರೇಸ್ ದೇಶದಿಂದ ಮುಕ್ತವಾಗಬೇಕಿದೆ. ಅವರ ಪ್ರಣಾಳಿಕೆಗಳನ್ನೊಮ್ಮೆ ಗಮನಿಸಿ ಬಂದುಗಳೇ ಡಬಲ್ ಇಂಜಿನ್ ಸರ್ಕಾರದ ಸೌಲಭ್ಯಗಳಾದ ಎಸ್.ಸಿ, ಎಸ್.ಟಿ ಮೀಸಲಾತಿ, ಲಿಂಗಾಯತ, ಒಕ್ಕಲಿಗ ಮೀಸಲಾತಿಯನ್ನು ವಾಪಸ್ಸು ಪಡೆಯುವ ಪ್ರಣಾಳಿಕೆಯಾಗಿದೆ.

ದೇಶದ್ರೋಹಿ ಸಂಘಟನೆ ಪಿ.ಎಫ್.ಐಯನ್ನು ನಮ್ಮ ಸರ್ಕಾರ ಬ್ಯಾನ್ ಮಾಡಿದ್ದನ್ನು ನೆಪವಾಗಿಸಿಕೊಂಡು ಬಜರಂಗದಳ ಬ್ಯಾನ್ ಮಾಡಲು ಮುಂದಾಗಿದೆ. ಆದ್ದರಿಂದ ದೇಶದಲ್ಲಿ ಕಾಂಗ್ರೇಸನ್ನು ಬ್ಯಾನ್ ಮಾಡಬೇಕೆಂದು ಕರೆ ನೀಡಿದರು.

ಸೋಮಲಿಂಗಪ್ಪರನ್ನು ಗೆಲ್ಲಿಸಿ ಡಬಲ್ ಇಂಜಿನ್ ಸರ್ಕಾರಕ್ಕೆ ಬೆಂಬಲ ನೀಡಿದರೆ ಬಿ.ಪಿ.ಎಲ್ ಕುಟುಂಬಕ್ಕೆ ೫ಕೆ.ಜಿ. ಅಕ್ಕಿ, ೫ಕೆ.ಜಿ ಸಿರಿದಾನ್ಯದ ಜೊತೆಗೆ ೧ಕೆ.ಜಿ ಉಪ್ಪು ನೀಡಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕಿಗೆ ಇಂಜಿನೀಯರ್ ಕಾಲೇಜ್ ಬರಲಿದೆಂದು ತಿಳಿಸಿದರು.

ಇದೇ ವೇಳೆ ಅಭ್ಯರ್ಥಿ ಎಂ.ಎಸ್.ಸೋಮಲಿಂಗಪ್ಪ, ಜಿಲ್ಲಾಧ್ಯಕ್ಷ ಮುರಾರಿಗೌಡ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ