ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಡಾಡಿ ದನಗಳ "ಹಾವಳಿ" ನಿಲ್ಲೋದ್ಯಾವಾಗ...... ? ಕ್ಯಾರಿ ಅನ್ನದ ನಗರಸಭೆ

Advertisement
ಏಪ್ರಿಲ್ 08 ಸಿಂಧನೂರು ನಗರದಲ್ಲಿ ಅದರಲ್ಲೂ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ. ಇದರಿಂದಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.



ದನಗಳು ಮುಖ್ಯ ರಸ್ತೆಗಳಲ್ಲೇ ರಾಜಾರೋಷವಾಗಿ ಓಡಾಡುತ್ತಿರುತ್ತವೆ ವಾಹನಗಳಲ್ಲಿ ಸಂಚರಿಸುವ ಹಾಗೂ ಪ್ರಯಾಣಿಸುವವರ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿವೆ. ರಸ್ತೆ ಅಪಘಾತಗಳಿಗೂ ಕಾರಣವಾಗುತ್ತಿದೆ. ಇಷ್ಟಾದರೂ ಸಂಬಂಧಿಸಿದ ನಗರ ಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ. ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.



ನಗರದಲ್ಲಿ ಹಲವು ವರ್ಷಗಳಿಂದಲೂ ಈ ಸಮಸ್ಯೆ ಇದೆ. ಬಿಡಾಡಿ ದನಗಳಿಂದ ನಮಗೆ ಮುಕ್ತಿ ಸಿಗುವುದು ಯಾವಾಗ ಎನ್ನುವುದು ಜನರ ಪ್ರಶ್ನೆಯಾಗಿದೆ. ಅದರಲ್ಲಿ ವಿಶೇಷವಾಗಿ ಸೋಮವಾರ ಮತ್ತು ಮಂಗಳವಾರ ದನ ಮತ್ತು ಕುರಿ ಸಂತೆ ಇರುತ್ತದೆ. ಇದರಿಂದ ನಗರದ್ಯಾಂತ ಅತಿ ಹೆಚ್ಚು ವಾಹನದಟ್ಟಣೆಯಾಗಿರುತ್ತದೆ ಅದರಲ್ಲೂ ಬೀಡಾಡಿ ದನಗಳ ಅಡ್ಡ ಬರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಹಗಿದೆ

ಆಗಾಗ ‘ಶಾಸ್ತ್ರಕ್ಕೆಂಬಂತೆ’ ಕೆಲವು ಬಿಡಾಡಿ ದನಗಳನ್ನು ಹಿಡಿದು ಸಾಗಿಸುವ ಕಾರ್ಯಾಚರಣೆಯನ್ನು ನಗರ ಸಭೆ ಅಧಿಕಾರಿಗಳು ನಡೆಸಿದ ಉದಾಹರಣೆಗಳಿವೆ. ಬಳಿಕ ಅವರು ಸುಮ್ಮನಾಗುತ್ತಾರೆ. ಪರಿಣಾಮ, ರಸ್ತೆಗಳ ಅಲ್ಲಲ್ಲಿ ಬಿಡಾಡಿ ದನ, ಕರುಗಳ ಬಿಡಾರ ಕಂಡುಬರುತ್ತಿದೆ.



ಇಲ್ಲಿನ ಹೃದಯಭಾಗವಾದ ಗಾಂಧಿ ಚೌಕ ಕಿತ್ತೂರು ರಾಣಿ ಚನ್ನಮ್ಮ ವೃತ್ತ ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಕುಷ್ಟಗಿ ರಸ್ತೆ ಮೊದಲಾದ ಕಡೆಗಳಲ್ಲಿ ರಸ್ತೆಯಲ್ಲೇ ಮಲಗಿಯೋ, ನಿಂತೋ, ಓಡಾಡುತ್ತಲೋ ‘ದರ್ಶನ’ ನೀಡುತ್ತಿರುತ್ತವೆ; ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯನ್ನೂ ಉಂಟು ಮಾಡುತ್ತಿರುತ್ತವೆ.

ಪ್ರಾಣಕ್ಕೂ ಸಂಚಕಾರ:

ಎಲ್ಲೆಂದರಲ್ಲಿ ಓಡಾಡುವ ಈ ದನ–ಕರುಗಳು ಸಿಕ್ಕಿದ್ದನ್ನು ತಿನ್ನುತ್ತವೆ. ಕಸದೊಂದಿಗೆ ಪ್ಖಾಸ್ಟಿಕ್‌ ಕೂಡ ಅವುಗಳ ಹೊಟ್ಟೆ ಸೇರುತ್ತಿದೆ. ಇದು ಅವುಗಳ ಪ್ರಾಣಕ್ಕೂ ಕುತ್ತು ತರುತ್ತಿದೆ. ವಾಹನಗಳು ಡಿಕ್ಕಿಯಾಗುವುದರಿಂದಲೂ ಜೀವಕ್ಕೆ ಕಂಟಕವಿದೆ. ಸವಾರರು ಕೂಡ ಗಾಯಗೊಂಡ ಉದಾಹರಣೆಗಳಿವೆ. ರಸ್ತೆಗಳ ಮಧ್ಯೆ ‘ಕೃತಕ ಸ್ಪೀಡ್‌ ಬ್ರೇಕರ್‌’ಗಳ ರೀತಿಯಲ್ಲಿರುವ ಬೀಡಾಡಿ ದನಗಳನ್ನು ಹಿಡಿದು ಬೇರೆಗೆ ಸಾಗಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ವರದಿ.ಶ್ರೀ ಜಯಪ್ಪ ಗೊರೇಬಾಳ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್