ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿ.ಪಿ.ಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ ಹೆಚ್ಚುವರಿಯಾಗಿ ಒಂದು ಕೆ.ಜಿ ಅಕ್ಕಿ ಉಚಿತ

Advertisement
ರಾಯಚೂರು,ಏ.10 ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 35 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 05 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ ಹೆಚ್ಚುವರಿಯಾಗಿ 01 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಒಪ್ಪಿಗೆ/ಸಮ್ಮತಿ ಸೂಚಿಸಿರುವ ಎಪಿಎಲ್(ಎನ್‍ಪಿಹೆಚ್‍ಹೆಚ್) ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ ರೂ.15/-ರಂತೆ ಏಕ ಸದ್ಯಸರ ಪಡಿತರ ಚೀಟಿಗೆ 05 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎಪಿಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.



ಒಂದು ರಾಷ್ಟ್ರ ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.

ಸದರಿ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಈ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್