ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಭಾರತಕ್ಕೆ ಮತ್ತೆರಡು ಚಿನ್ನ: ಪದಕಗಳ ಸಂಖ್ಯೆ 24 ಕ್ಕೆ ಏರಿಕೆ

Advertisement
Paralympics 2024: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ ಮೂಲಕ ಭಾರತೀಯ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅದು ಸಹ 20 ಪದಕಗಳನ್ನು ಗೆಲ್ಲುವ ಮೂಲಕ ಎಂಬುದು ವಿಶೇಷ. ಅಂದರೆ ಪ್ಯಾರಾಂಪಿಕ್ಸ್​ನಲ್ಲಿ ಇದೇ ಮೊದಲ ಬಾರಿಗೆ ಭಾರತೀಯರು 24 ಪದಕಗಳನ್ನು ಗೆದ್ದಿದ್ದಾರೆ. 2020 ರಲ್ಲಿ ನಡೆದ ಟೋಕಿಯೋ ಪ್ಯಾರಾಲಿಂಪಿಕ್ಸ್​ನಲ್ಲಿ 5 ಚಿನ್ನದ ಪದಕ, 8 ಬೆಳ್ಳಿ ಪದಕ ಮತ್ತು 6 ಕಂಚಿನ ಪದಕಗಳೊಂದಿಗೆ ಭಾರತೀಯರು ಒಟ್ಟು 19 ಪದಕಗಳನ್ನು ಗೆದ್ದಿದ್ದರು.


ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದೆ. ಸೆಪ್ಟೆಂಬರ್ 4 ರಂದು ಭಾರತೀಯ ಕ್ರೀಡಾಪಟುಗಳು 2 ಚಿನ್ನ ಹಾಗೂ 2 ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ಪದಕಗಳ ಸಂಖ್ಯೆಯನ್ನು 24 ಕ್ಕೇರಿಸಿದ್ದಾರೆ. ಪುರುಷರ ಆರ್ಚರಿ ಸ್ಪರ್ಧೆಯ ವೈಯಕ್ತಿಕ ರಿಕರ್ವ್ ಓಪನ್ ಫೈನಲ್‌ನಲ್ಲಿ ಹರ್ವಿಂದರ್ ಸಿಂಗ್ ಚಿನ್ನದ ಪದಕ ಗೆದ್ದರೆ, ಕ್ಲಬ್ ಥ್ರೋನಲ್ಲಿ ಧರಂಬೀರ್ ನೈನ್ ಬಂಗಾರದ ಪದಕಕ್ಕೆ ಕೊರೊಳೊಡ್ಡಿದ್ದಾರೆ.

ಇನ್ನು ಶಾಟ್‌ಪುಟ್‌ನಲ್ಲಿ ಸಚಿನ್ ಖಿಲಾರಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಹಾಗೆಯೇ ಕ್ಲಬ್ ಥ್ರೋನಲ್ಲಿ ಪ್ರಣವ್ ಸೂರ್ಮಾ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭಾರತವು ಒಟ್ಟು 5 ಚಿನ್ನದ ಪದಕ, 9 ಬೆಳ್ಳಿ ಪದಕ ಹಾಗೂ 10 ಕಂಚಿನ ಪದಕಗಳೊಂದಿಗೆ ಒಟ್ಟು 24 ಮೆಡಲ್​ಗಳನ್ನು ಗೆದ್ದಿದೆ. ಇನ್ನು ಭಾನುವಾರದವರೆಗೆ ಕ್ರೀಡಾಕೂಟ ಮುಂದುವರೆಯಲಿದ್ದು, ಹೀಗಾಗಿ ಭಾರತದ ಒಟ್ಟು ಪದಕಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ