ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿ

ಮಕ್ಕಳ ಪಾಲನಾ ಸಂಸ್ಥೆ, ವಸತಿ ನಿಲಯ, ಪೊಲೀಸ್ ಠಾಣೆ, ಅಂಗನವಾಡಿ ಹಾಗೂ ಜಿಲ್ಲಾಸ್ಪತ್ರೆಗಳ ಪರಿಶೀಲನೆ – ಆರ್‌ಟಿಇ, ಪೋಕ್ಸೋ ಕಾಯ್ದೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

Advertisement

ಯಾದಗಿರಿ:

Advertisement

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ನವೆಂಬರ್ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಕಲ್ಯಾಣ ಹಾಗೂ ಅವರಿಗೆ ದೊರೆಯಬೇಕಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಆಯೋಗದ ಅಧ್ಯಕ್ಷರಾದ ಶ್ರೀ ಸಂತೋಷ ಕುಮಾರ ಪಾಟೀಲ ಹಾಗೂ ಸದಸ್ಯರಾದ ಶ್ರೀ ಸತ್ಯನಾರಾಯಣ ಶೆಟ್ಟಿ ಅವರು ಈ ಜಿಲ್ಲಾ ಪ್ರವಾಸದಲ್ಲಿ ಭಾಗವಹಿಸಲಿದ್ದಾರೆ.

news_1793621083_2_569.webp

ನವೆಂಬರ್ 5ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯಾದಗಿರಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿರುವ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಮಕ್ಕಳ ಪಾಲನಾ ಸಂಸ್ಥೆಗಳು, ವಸತಿ ಶಾಲೆಗಳು ಮತ್ತು ನಿಲಯಗಳು, ಪೊಲೀಸ್ ಠಾಣೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು, ಅವರ ಸುರಕ್ಷತೆ, ಶಿಕ್ಷಣ, ಆರೋಗ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.

news_1793621081_0_925.webp

ಇನ್ನು ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲೆಯ ವಿವಿಧ ಮಕ್ಕಳ ಕಲ್ಯಾಣ ಸಂಸ್ಥೆಗಳು, ವಸತಿ ಶಾಲೆ ಮತ್ತು ನಿಲಯಗಳು, ಪೊಲೀಸ್ ಠಾಣೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ), ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ನ್ಯಾಯ ಕಾಯ್ದೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಮಾಹಿತಿ ಪಡೆಯಲಿದ್ದಾರೆ. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಅನುಷ್ಠಾನ, ಮಕ್ಕಳ ಸುರಕ್ಷತೆ, ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಲಭ್ಯತೆ ಹಾಗೂ ವಿವಿಧ ಇಲಾಖೆಗಳ ಕಾರ್ಯವೈಖರಿಯ ಬಗ್ಗೆ ಪರಿಶೀಲನೆ ನಡೆಸುವ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ.

news_1793621082_1_837.webp

ಹಾಸನಾಂಬೆ ದೇವಿ ದರ್ಶನಕ್ಕೆ ಭೇಟಿ:

ಇನ್ನೊಂದೆಡೆ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶ್ರೀ ಸತ್ಯನಾರಾಯಣ ಶೆಟ್ಟಿ ಅವರು ನವೆಂಬರ್ 4ರಂದು ತಮ್ಮ ಕುಟುಂಬದ ಸದಸ್ಯರೊಂದಿಗೆ ಹಾಸನ ಜಿಲ್ಲೆಗೆ ಭೇಟಿ ನೀಡಿ ಪ್ರಸಿದ್ಧ ಶ್ರೀ ಹಾಸನಾಂಬೆ ದೇವಿಯ ದರ್ಶನ ಪಡೆಯಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!ಸಿಂಧನೂರಿನಲ್ಲಿ ಬಾಲ ಭಿಕ್ಷಾಟನೆ ವಿರುದ್ಧ ಕಾರ್ಯಾಚರಣೆ: ಇಬ್ಬರು ಬಾಲಕಿಯರ ರಕ್ಷಣೆಷೇರು ಮಾರುಕಟ್ಟೆ ಸಂಶೋಧನೆಗೆ ಕಲೀಲ್‌ಗೆ ಡಾಕ್ಟರೇಟ್ಹೊಟ್ಟೆಗೆ ಅನ್ನ ನೀಡುವ ರೈತನಿಗಾಗಿ ನಾವು ಧ್ವನಿ ಎತ್ತದಿದ್ದರೆ ಇನ್ನಾರಿಗಾಗಿ?ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್‌ಗೆ ಜಯಸಿಂಧನೂರು ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ ಸಿಂಧನೂರಿನಲ್ಲಿ ಅಪರೂಪದ ವೈದ್ಯಕೀಯ ಪ್ರಕರಣ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣದಂತಿರುವ ರಚನೆ ಪತ್ತೆ!ಅಚ್ಚರಿಯ ಘಟನೆ: ಕಪ್ಪು ಎಮ್ಮೆಗೆ ಬಿಳಿ ಬಣ್ಣದ ಹೋರಿ ಕರು ಜನನ!ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಮಾರ್ಫಿಂಗ್ ಆರೋಪ: ಸಿಂಧನೂರಿನಲ್ಲಿ ವ್ಯಕ್ತಿ ಬಂಧನಕೊಪ್ಪಳದಿಂದ ಸಿಂಧನೂರಿಗೆ ಜೀವ ಉಳಿಸಿದ 60 ನಿಮಿಷಗಳು!ಚಿಕ್ಕಮಗಳೂರು ಜಿಲ್ಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯನಾರಾಯಣ ಶೆಟ್ಟಿ ಭೇಟಿ