ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮತಗಟ್ಟೆಗೆ ತೆರಳಿದ ಚುನಾವಣಾ ಸಿಬ್ಬಂದಿ ಮತದಾನಕ್ಕೆ ಕ್ಷಣಗಣನೆ

Advertisement
ಮೇ 09.ಸಿರುಗುಪ್ಪ ನಗರದ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀ ವಿವೇಕಾನಂದ ಪಬ್ಲಿಕ್ ಶಾಲೆಯಲ್ಲಿ ೨೦೨೩ನೇ ಸಾಲಿನ ವಿಧಾನಸಭೆ ಚುನಾವಣೆಯ ನಿಮಿತ್ತ ಎಲ್ಲಾ ಮತಗಟ್ಟೆಗಳಿಗೆ ಚುನಾವಣಾ ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್, ವಿವಿಪ್ಯಾಡ್, ಶಾಹಿ, ಇನ್ನಿತರ ಸಾಮಗ್ರಿಗಳನ್ನು ಸಿಬ್ಬಂದಿಗಳಿಗೆ ನೀಡಿ ಆಯಾ ಮತಗಟ್ಟೆಗಳಿಗೆ ಕಳುಹಿಸಿಕೊಡಲಾಯಿತು.

ಚುನಾವಣಾಧಿಕಾರಿ ಸತೀಶ್.ಹೆಚ್.ಕೆ. ಮಾತನಾಡಿ ತಾಲೂಕಿನಲ್ಲಿ ಒಟ್ಟು ೨೧೭೧೮೧ ಮತದಾರರಿದ್ದು, ಹೆಚ್ಚುವರಿ ಮತಗಟ್ಟೆ ಸೇರಿ ೨೨೭ ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೆ ಪಿಆರ್‌ಓ, ಎಪಿಆರ್‌ಓ, ಪಿ.ಓ, ಆಯಾ ಮತ್ತು ಭದ್ರತೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಚುನಾವಣೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಸೆಕ್ಟçಲ್ ಅಧಿಕಾರಿ, ಸೂಕ್ಷಂ ವೀಕ್ಷಕರ ತಂಡಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಸಿರುಗುಪ್ಪ ವಿಧಾನಸಭೆ ೯೨ ಕ್ಷೇತ್ರಕ್ಕೆ ಸಂಬಂದಿಸಿದಂತೆ ೪೯ ಕಂಟ್ರೋಲ್ ಯುನಿಟ್, ೪೯ ಬ್ಯಾಲೆಟ್ ಯುನಿಟ್ ಮತ್ತು ೭೧ ವಿವಿ ಪ್ಯಾಡ್‌ಗಳನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಎಲ್ಲಾ ಸಿಬ್ಬಂದಿಗಳಿಗೆ ೬೩ ರೂಟ್ ಮೂಲಕ ಸಾರಿಗೆ ಬಸ್ಸು ಮತ್ತು ಟ್ರಾಕ್ಷಿಗಳ ಮೂಲಕ ಮತಗಟ್ಟೆಗಳಿಗೆ ತಲುಪಿಸಲಾಗುತ್ತದೆ.

ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಆಯೋಗದ ಮಾರ್ಗದರ್ಶನದಂತೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದೆ. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಿ ಪ್ರಜಾಪ್ರಭುತ್ವದ ಮೌಲ್ಯ ಕಾಪಾಡಬೇಕೆಂದು ತಿಳಿಸಿದರು.

ಇದೇ ವೇಳೆ ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ಡಿವೈಎಸ್‌ಪಿ ವೆಂಕಟೇಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಚುನಾವಣೆ ಪ್ರಕ್ರಿಯೆಗೆ ಸಾಥ್ ನೀಡಿದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್