ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸುಮೋಟೋ ದೂರು

Advertisement
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸುಮೋಟೋ ದೂರಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸುಮೋಟೋ ದೂರು

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ ಆರೋಪ; ವೈರಲ್ ವಿಡಿಯೋ ಹಿನ್ನೆಲೆ ತನಿಖೆಗೆ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಆಯೋಗವು ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದು, ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.



ಆಯೋಗದ ಕ್ರಮ ಏನು?

ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಆಯೋಗ, ಶಹಾಪುರ ತಾಲ್ಲೂಕಿನ ಮಹಲ್ ರೋಜಾ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.

ಪೊಲೀಸ್ ಇಲಾಖೆ ನೀಡುವ ವರದಿ ಆಧಾರವಾಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಅಧ್ಯಕ್ಷ ಶಶಿಧರ್ ಕೋಸುಂಬೆ ತಿಳಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಏನಿದೆ?

ವೈರಲ್ ಆಗಿರುವ ಮೊದಲ ವಿಡಿಯೋದಲ್ಲಿ, ಮಲ್ಲಿಕಾರ್ಜುನ ಮುತ್ಯಾ ಬೆಡ್ ಮೇಲೆ ಕುಳಿತು ಅಪ್ರಾಪ್ತ ಬಾಲಕಿಯ ಕುತ್ತಿಗೆಯನ್ನು ಹಿಡಿದು ಕೆಳಗಿನಿಂದ ಮೇಲಕ್ಕೆ ಎತ್ತಿ ನಿಲ್ಲಿಸಿರುವ ದೃಶ್ಯ ಕಂಡುಬರುತ್ತದೆ. ಈ ವೇಳೆ ಬಾಲಕಿಗೆ ಮುತ್ತು ಕೊಡುತ್ತಾ, ಅನುಚಿತವಾಗಿ ವರ್ತಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇನ್ನೊಂದು ವಿಡಿಯೋದಲ್ಲಿ ಅದೇ ಬಾಲಕಿಯೊಂದಿಗೆ ಬಲವಂತವಾಗಿ ನೃತ್ಯ ಮಾಡುತ್ತಿರುವುದು, ಬಾಲಕಿಯ ಜಡೆ ಎಳೆಯುವುದು, ಮುದ್ದಾಡುವುದು ಸೇರಿದಂತೆ ಅಸಭ್ಯ ವರ್ತನೆಯ ದೃಶ್ಯಗಳು ದಾಖಲಾಗಿವೆ ಎಂದು ಹೇಳಲಾಗಿದೆ. ಈ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.



ಮಲ್ಲಿಕಾರ್ಜುನ ಮುತ್ಯಾ ಯಾರು?

ಮಲ್ಲಿಕಾರ್ಜುನ ಮುತ್ಯಾ ಉತ್ತರ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ರೋಜಾ ಮಹೆಲ್ ಗ್ರಾಮದ ನಿವಾಸಿ. 26 ವರ್ಷದ ಈ ವ್ಯಕ್ತಿ ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹೆಚ್ಚಿನ ಪ್ರಸಿದ್ಧಿ ಪಡೆದಿದ್ದಾರೆ.

ಆಂಧ್ರಪ್ರದೇಶ, ತೆಲಂಗಾಣ, ಪುಣೆ, ಗೋವಾ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳ ಭಕ್ತರು ಇವರನ್ನು “ಅಪ್ಪಾಜಿ” ಅಥವಾ “ನಡೆದಾಡುವ ದೇವರು” ಎಂದು ನಂಬಿ ಗೌರವಿಸುತ್ತಿದ್ದರು ಎನ್ನಲಾಗಿದೆ. ಇನ್‌ಸ್ಟಾಗ್ರಾಮ್ ಹಾಗೂ ಯೂಟ್ಯೂಬ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಮುತ್ಯಾ ಇದೀಗ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ