ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಸ್ಕಿ ಪಟ್ಟಣದ ಡಿವೈಡರ್ ಹಾಗೂ ಸರ್ವಿಸ್ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸೂಚನೆ

Advertisement
ಮಸ್ಕಿ: ಪಟ್ಟಣದಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಕೈಗೊಂಡಿರುವ ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ಡಿವೈಡರ್,ಸರ್ವಿಸ್ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಲು ಮೂರು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರುವಿಹಾಳ ಸೂಚಿಸಿದರು.

ಸಿಂಧನೂರಿನ ಸರ್ಕೀಟ್ ಹೌಸ್‌ನಲ್ಲಿ ಹೆದ್ದಾರಿ ಪ್ರಾಧಿಕಾರ,ಪುರಸಭೆ ಹಾಗೂ ಜೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದ ಅವರು ಕಾಮಗಾರಿ ವಿಳಂಬಕ್ಕೆ ಬೇಸರ ವ್ಯಕ್ತಪಡಿಸಿ ಕಾಮಗಾರಿಗೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ಆದಷ್ಟು ಬೇಗನೆ ಪರಿಹರಿಸಿ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಹೆದ್ದಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ತಿಳಿಸಿದರು.

https://youtu.be/judz_plvGHE?si=KLhCT1flv0YkWPKt

ಒತ್ತುವರಿ ತೆರವು ವಿಳಂಬದಿಂದ ಕಾಮಗಾರಿಗೆ ಹಾಗೂ ವಿದ್ಯುತ್ ಕಂಬ ಅಳವಡಿಸಲು ಅಡ್ಡಿಯಾಗಿದೆ.ಆದ್ದರಿಂದ ಎಷ್ಟು ಬೇಗ ತೆರವು ಮಾಡಿಕೊಡುತ್ತಾರೋ ಅಷ್ಟು ಬೇಗ ಕಾಮಗಾರಿ ಮುಗಿಯುತ್ತದೆ ಎಂದು ಹೆದ್ದಾರಿ ಪ್ರಾಧಿಕಾರಿದ ಎಇಇ ಭೀಮನಗೌಡ ಬಿರಾದಾರ ಶಾಸಕರಿಗೆ ತಿಳಿಸಿದರು.

ನ್ಯಾಯಾಲಯದಲ್ಲಿರುವ ತಡೆಯಾಜ್ಞೆಯನ್ನು ಹೆದ್ದಾರಿ ಹಾಗೂ ಪುರಸಭೆ ಅಧಿಕಾರಿಗಳು ಬಗೆಹರಿಸಿ ಕಾಮಗಾರಿ ಆರಂಭಿಸಲು ಅನುಕೂಲ ಮಾಡಬೇಕು.ಎರಡು ಕಡೆಯ ಸರ್ವಿಸ್ ರಸ್ತೆಯ ಒತ್ತುವರಿ ತೆರವುಗೊಳಿಸಿ ವಿದ್ಯುತ್ ಕಂಬ ಹಾಗೂ ಟಿಸಿಗಳನ್ನು ಅಳವಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಸರ್ವಿಸ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿಗೆ ಸೂಚಿಸಿದರು.

https://youtu.be/P7-Hlsr7s3w?si=b0oHEzkiPuMUUKxS

ಇದೇ ಸಂದರ್ಭದಲ್ಲಿ ಜೆಸ್ಕಾಂ ವೆಂಕಟೇಶ,ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಡಿ.ಎಂ.ಮೇಲಿನಮನಿ,ಗೋಪಾಲ,ಅಮ್ಮಾಪೂರ ಕಂಪನಿ ಎಂಜಿನಿಯರ್ ಜಂಗಮೇಶ ಹಿರೇಮಠ,ಮಸ್ಕಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು,ಮೈಬೂಸಾಬ ಗ್ಯಾರಂಟಿ ಸಮಿತಿ ಅಧ್ಯಕ್ಷ ಮುದ್ದಾಪೂರು,ಹುಲಗಪ್ಪ ಉಪ್ಪಲದೊಡ್ಡಿ ಇದ್ದರು.

ವರದಿ : ಎಚ್.ಕೆ.ಬಡಿಗೇರ್


Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ