ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಾರ್ಚ್ 12ರಂದು ಉದ್ಯೋಗ ಮೇಳ – ನಿರುದ್ಯೋಗ ಯುವಕ ಯುವತಿಯರಿಗೆ ಅವಕಾಶ

Advertisement
BB NEWS KANNADA

ಸಿಂಧನೂರು, ಮಾ.9: ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮಾರ್ಚ್ 12 ರಂದು ಸಿಂಧನೂರಿನಲ್ಲಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ನೋಬಲ್ ಡಿಗ್ರಿ ಕಾಲೇಜು ಸಿಂಧನೂರು ಸಂಯುಕ್ತ ಆಶ್ರಯದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ. ಆದರ್ಶ ಕಾಲೋನಿಯ ರೇಣುಕ ಆಸ್ಪತ್ರೆ ಎದುರುಗಡೆಯಲ್ಲಿರುವ ನೋಬಲ್ ಡಿಗ್ರಿ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಮೇಳ ನಡೆಯಲಿದೆ.



18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. SSLC, PUC, ITI, ಡಿಪ್ಲೊಮಾ, BA, B.Com, BBA, BCA, BSc, ನರ್ಸಿಂಗ್, ಫಾರ್ಮಸಿ, B.Ed ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳು ಲಭ್ಯವಾಗಲಿವೆ. ಈ ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆ ಇದೆ.

ವಿಶೇಷವಾಗಿ ವಿಶೇಷಚೇತನರಿಗೆ ಸಹ ಈ ಮೇಳದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗಿದ್ದು, ಎಲ್ಲಾ ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಹಾಗೂ ಸ್ವವಿವರಗಳೊಂದಿಗೆ ಮೇಳಕ್ಕೆ ಆಗಮಿಸಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.



ಈ ಕುರಿತು ಮಾಹಿತಿ ನೀಡಿದ ಸಮರ್ಥನಂ ಅಂಗವಿಕಲರ ಸಂಸ್ಥೆಯ ಶಾಖೆಯ ಮುಖ್ಯಸ್ಥ ಭೀಮ ರೆಡ್ಡಿ, ನಿರುದ್ಯೋಗಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ

📞 9480812138 / 7676534241 / 9916758739 ಸಂಪರ್ಕಿಸಬಹುದು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ