ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮು- ಮೆಹಬೂಬ್ ನಗರ ರೈಲುಮಾರ್ಗ: ಸಿಂಧನೂರಿನಿಂದ- ಮಾನ್ವಿವರೆಗೆ ಭೂಸ್ವಾಧೀನ, ೦೩ ತಿಂಗಳಲ್ಲಿ ಪೂರ್ಣ- ರಾಜಾ ಅಮರೇಶ್ವರ ನಾಯಕ

Advertisement
ರಾಯಚೂರು,ಜೂ.೨೨ ಮುನಿರಾಬಾದ್- ಮಹೆಬೂಬನಗರ ರೈಲು ಮಾರ್ಗ ಯೋಜನೆಯು ಅತ್ಯಂತ ಹಳೆಯದಾಗಿದ್ದುದರಿಂದ ಹಲವು ಬಾರಿ ಕೊಪ್ಪಳ ಸಂಸದರೊಂದಿಗೆ ಖುದ್ದಾಗಿ ಕೇಂದ್ರ ರೈಲ್ವೆ ಸಚಿವರಿಗೆ ಭೇಟಿ ನೀಡಿ ಸದರಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ವಿನಂತಿಸಿದ್ದು ಮತ್ತು ಇದಕ್ಕೆ ಬೇಕಾಗುವ ಅನುದಾನವನ್ನು ಬಿಡುಗಡೆ ಮಾಡಲು ಒತ್ತಾಯಿಸಿದ್ದರಿಂದ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡಿದೆ, ಇದರ ಪರಿಣಾಮವಾಗಿ ಸಿಂಧನೂರುವರೆಗೆ ಭೂಸ್ವಾಧೀನ, ರೈಲ್ವೆ ಕಾಮಗಾರಿ ಪೂರ್ಣಗೊಂಡು, ರೈಲ್ವೆ ನಿಲ್ದಾಣವು ಉದ್ಘಾಟನೆಗೆ ಸಿದ್ದಗೊಂಡಿದೆ ಎಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿಂಧನೂರು ತಾಲ್ಲೂಕಿನ ಸುಲ್ತಾನಪುರದಿಂದ ಮಾನ್ವಿ ತಾಲ್ಲೂಕಿನ ಕಲ್ಲೂರುವರೆಗೆ ಭೂಸ್ವಾಧೀನ ಪ್ರ‍್ರಕ್ರಿಯೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾನ್ವಿ ತಾಲ್ಲೂಕಿನಲ್ಲಿ ಈಗಾಗಲೇ ೪೭೩.೧೫ ಗುಂಟೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅದರಲ್ಲಿ ಮಾನ್ವಿ ತಾಲ್ಲೂಕಿನಲ್ಲಿ ೮೮.೧೪ ಎಕರೆ ಐತೀರ್ಪು ಅನುಮೋದನೆಯಾಗಿದ್ದು, ೩೨.೨೪ ಎಕರೆ ಸರ್ಕಾರಕ್ಕೆ ಅನುಮೋದನೆಗೆ ಸಲ್ಲಿಸಿದೆ.

ಉಳಿದ ೩೫೨.೧೭ ಎಕರೆ ಅಂತಿಮ ಐತೀರ್ಪು ರಚನೆಗೆ ಸಿದ್ದವಾಗಿದ್ದು ಹಾಗೂ ಈ ಸ್ವಾಧೀನಪಡಿಸಿಕೊಂಡ ಜಮೀನುಗಳ ಭೂಪರಿಹಾರ ಬೇಡಿಕೆಗೆ ಇಲಾಖೆಯಿಂದ ಈಗಾಗಲೇ ರೂ.೨೦೪,೫೪,೪೦,೮೮೮ /- (ಎರಡು ನೂರಾ ನಾಲ್ಕು ಕೋಟಿ ಐವತ್ತು ನಾಲ್ಕು ಲಕ್ಷ, ನಲವತ್ತು ಸಾವಿರದ ಎಂಟು ನೂರಾ ಎಂಬತ್ತೆಂಟು ರೂಪಾಯಿಗಳು) ಬಿಡುಗಡೆಯಾಗಿ ಹಣ ಸಿದ್ದವಿರುತ್ತದೆ. ಈ ಎಲ್ಲಾ ಪ್ರಕ್ರಿಯೆಯು ಸುಮಾರು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಈ ಭಾಗದ ರೈಲ್ವೆ ಕಾಮಗಾರಿಗಾಗಿ ರೈಲ್ವೆ ಇಲಾಖೆಯಿಂದ ಈಗಾಗಲೇ ಹಿರೇಕೊಟ್ನೆಕಲ್ ವರೆಗೆ ಟೆಂಡರ್ ಪ್ರಕ್ರಿಯೆ ನಡೆದಿದ್ದು ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದೆಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ