ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮೆದಿಕಿನಾಳ ಗ್ರಾಮದ ಬಾಲಕರ ವಸತಿ ನಿಲಯದಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ

Advertisement


ಬಡವರ ಬಾರುಕೋಲು ಸುದ್ದಿ
ಮಸ್ಕಿ :
ತಾಲೂಕಿನ ಮೆದಿಕಿನಾಳ ಗ್ರಾಮದ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಏರ್ಪಡಿಸಿದ್ದ ಆರೋಗ್ಯ ಮತ್ತು ಸ್ವಚ್ಛತೆ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್ ರೋಗದ ಮಾಹಿತಿ ಕುರಿತು ಬಳ್ಳಾರಿ ಧರ್ಮ ಪ್ರಾಂತ ಅಭಿವೃದ್ಧಿ ಸಂಸ್ಥೆಯ ಸ್ಪರ್ಶ ಯೋಜನಾ ಸಂಯೋಜಕರಾದ MD ಅರಳಪ್ಪ ನವರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿಕೊಳ್ಳಬೇಕು ಎಂದು ಕರೆ ನೀಡಿದರು ಹಾಗೂ ಪ್ರತಿಯೊಬ್ಬರು ಜೀವನ ಶೈಲಿಯನ್ನು ಬದಲಾಯಿಸಿಕೊಂಡು ಕ್ಯಾನ್ಸರ್ ರೋಗದಿಂದ ದೂರವಿರಿ ಎಂದು ನುಡಿದರು.

ಇನ್ನೂ ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಸಾವಯವ ಕೃಷಿಯ ಉಜ್ಜೀವನ ಯೋಜನೆಯ ಸಂಯೋಜಕರಾದ ಶಾಂತಪ್ಪ ಸೋಮನಮರಡಿ ಯವರು ಮಾತನಾಡಿ ಕ್ಯಾನ್ಸರ್ ರೋಗದ ಉಗಮ,ಲಕ್ಷಣಗಳು,ಇದರಿಂದ ನಮ್ಮ ಕುಟುಂಬದ ಮೇಲಾಗುವ ಆರ್ಥಿಕ ಸಮಸ್ಯೆಯ ಬಗ್ಗೆ,ಹಾಗೂ ಇದನ್ನು ತಡೆಗಟ್ಟುವ ಕಾರ್ಯತಂತ್ರಗಳು ಹೇಗೆ ಎನ್ನುವುದರ ಕುರಿತು ಮಾಹಿತಿ ನೀಡಿ ನಾವು ಪ್ರತಿದಿನ ಬೇಳೆ ಕಾಳುಗಳು,ತರಕಾರಿ ಸೇವನೆಯ ಆಹಾರ ಮಾಡಿದರೆ ಒಳ್ಳೆಯದು ಎಂದು ಮಾಹಿತಿ ನೀಡಿದರು.

ಹಾಗೂ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಸತಿ ನಿಲಯದ ಮೇಲ್ವಿಚಾರಕರಾದ ಉದಯಕುಮಾರ ರವರು ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಮಾತನಾಡಿ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡು ಉತ್ತಮವಾದ ಆಹಾರವನ್ನು ಸೇವಿಸಿದಾಗ ಮಾತ್ರ ನಮ್ಮ ಆರೋಗ್ಯ ಚೆನ್ನಾಗಿರಲು ಸಾಧ್ಯ ಹಾಗೂ ಇದರಿಂದ ನಮ್ಮ ಕುಟುಂಬ ಎಲ್ಲ ರಂಗಗಳಲ್ಲಿ ಮುಂದೆ ಬರಲು ಸಾಧ್ಯ ಎಂದು ಸಲಹೆ ನೀಡಿದರು.

ಇದೇ ಸಂದರ್ಭದ ಈ ಕಾರ್ಯಕ್ರಮದಲ್ಲಿ ವಸತಿ ನಿಲಯದ ಸಿಬ್ಬಂದಿಗಳಾದ ಚನ್ನಪ್ಪ,ಮಹಾಂತೇಶ,ಶಿವಶರಣ,ರೇಣುಕಮ್ಮ,ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ