ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಜ್ಯಮಟ್ಟದ ಸಾಧಕಶ್ರೀ ಪ್ರಶಸ್ತಿ ಪುರಸ್ಕೃತ : ಡಾ.ಹುಸೇನಪ್ಪ ಅಮರಾಪುರ

Advertisement
ಜುಲೈ 18.ಹತ್ತನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಜುಲೈ 29 ಮತ್ತು 30ರಂದು ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, 'ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ದಲಿತ ಸಾಹಿತ್ಯ ಪರಿಷತ್, 'ಪ್ರಬುದ್ಧ ಭಾರತ' ಎಂಬ ಆಶಯದಲ್ಲಿ ಸಮ್ಮೇಳನ ನಡೆಸಲಿದೆ. ವಿವಿಧ ಗೋಷ್ಠಿ, ಉಪನ್ಯಾಸ, ಸಂವಾದ, ಪುಸ್ತಕ ಪ್ರದರ್ಶನ ಮತ್ತು ಮಾರಾಟ ಇರಲಿದೆ. ಇದು ಜಾತಿ ಸಮ್ಮೇಳನವಲ್ಲ' ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

'ಡಾ. ಎಚ್.ಟಿ. ಪೋತೆ ಅವರು ಕನ್ನಡ ಹಾಗೂ ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಸಾಹಿತಿ. ಗೌತಮ ಬುದ್ಧ ಹಾಗೂ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ಅಧಿಕೃತವಾಗಿ ಮಾತನಾಡುವ ಚಿಂತಕ ಮತ್ತು ಜಾನಪದ ವಿದ್ವಾಂಸರಾಗಿದ್ದಾರೆ. ಈ ಕಾರಣ ದಲಿತ ಹಾಗೂ ದಲಿತಪರ ಸಾಹಿತಿ-ಸಂಘಟಕರ ಅಭಿಪ್ರಾಯ ಪಡೆದು ಡಾ.ಪೋತೆ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ'

ಈ ಸಮ್ಮೇಳನದಲ್ಲಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದ್ದು, ಸಾಧಕಶ್ರೀ ಪ್ರಶಸ್ತಿ'ಯನ್ನು ಪರಿಷತ್‌ ವಿಭಾಗೀಯ ಸಂಯೋಜಕ ಗಣಪತಿ ಚಲವಾದಿ, ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ತಾಯರಾಜ್‌ ಮರ್ಚಟಹಾಳ, ಸಿಂಧನೂರು ತಾಲ್ಲೂಕು ಅಧ್ಯಕ್ಷ ಡಾ.ಹುಸೇನಪ್ಪ ಅಮರಾಪುರ ಅವರಿಗೆ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.
ಇವರು ಬರೆದ ಪ್ರಮುಖ ಕೃತಿಗಳು


'ಬೆಳ್ಳಿ ಸಂಭ್ರಮ ಗೌರವ ಪ್ರಶಸ್ತಿ'ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆರ್‌.ದೊಡ್ಡೇಗೌಡ ಬೆಂಗಳೂರು, ವೀರಹನುಮಾನ ರಾಯಚೂರು, ಡಾ.ಗವಿಸಿದ್ದಪ್ಪ ಪಾಟೀಲ ಬೀದರ್‌, ಶ್ರೀಶೈಲ ನಾಗರಾಳ ಕಲಬುರಗಿ, ಮುರ್ತುಜಾ ಬೇಗಂ ಇಲಕಲ್ಲ, ಹಾರೋಹಳ್ಳಿ ರವೀಂದ್ರ ಮೈಸೂರು, ಪರಶುರಾಮ ಶಿವಶರಣ ವಿಜಯಪುರ, ನರೇಂದ್ರ ನಾಗವಾಲ ಮೈಸೂರು, ಮುಳ್ಳೂರ ಶಿವಮಲ್ಲು ಚಾಮರಾಜನಗರ, ಡಾ.ಸಂಜೀವಕುಮಾರ ಮಾಲಗತ್ತಿ, ಸೌಜನ್ಯ ಕರಡೋಣಿ ಧಾರವಾಡ, ರಾಜು ವಿಜಯಪುರ ಹುಬ್ಬಳ್ಳಿ, ಸಿ.ಆರ್‌.ನಟರಾಜ ಕೋಲಾರ, ದೇವು ಕೆ.ಅಂಬಿಗ ಅವರು ಆಯ್ಕೆಯಾಗಿದ್ದಾರೆ ಎಂದರು.

'ಬೆಳ್ಳಿ ಸಂಭ್ರಮ ಪುಸ್ತಕ ಪ್ರಶಸ್ತಿ'ಗೆ ಬಿದಲೋಟಿ ರಂಗನಾಥ್‌, ಡಾ.ಸದಾಶಿವ ದೊಡಮನಿ, ಡಾ.ಶಾಂತನಾಯ್ಕ ಶಿರಗಾನಹಳ್ಳಿ, ರೇಣುಕಾ ಹೆಳವರ, ಪಿ.ಆರಡಿ ಮಲ್ಲಯ್ಯ ಕಟ್ಟೇರ, ಡಾ.ಪ್ರಸನ್ನ ನಂಚಾಪುರ, ಡಾ.ಗಿರೀಶ ಮೂಗ್ತಿಹಳ್ಳಿ, ಪ್ರಭುಲಿಂಗ ನೀಲೂರೆ, ಗೌಡಗೆರೆ ಮಾಯುಶ್ರೀ, ಡಾ.ಎಚ್‌.ಡಿ. ಉಮಾಶಂಕರ, ಸೋಮಲಿಂಗ ಗೆಣ್ಣೂರ, ಡಾ.ಎಂ.ಬಿ.ಕಟ್ಟಿ, ಡಾ.ಹೊಂಬಯ್ಯ ಹೊನ್ನಲಗೆರೆ, ಡಾ.ಅಮರೇಶ ಯತಗಲ್‌, ಡಾ.ಪೂರ್ಣಿಮಾ ಧಾಮಣ್ಣವರ, ರಾಯಸಾಬ ದರ್ಗಾದವರ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಪರಿಷತ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಹೊದ್ಲೂರ, ಉಪಾಧ್ಯಕ್ಷ ವೈ.ಎಂ.ಭಜಂತ್ರಿ, ಖಜಾಂಚಿ ಎಚ್‌.ಬಿ.ಕೋಲ್ಕಾರ್‌, ಬೆಳಗಾವಿ ವಿಭಾಗೀಯ ಸಂಯೋಜಕಿ ಡಾ. ಸುಜಾತಾ ಛಲವಾದಿ, ವಿಜಯಪುರ ಅಧ್ಯಕ್ಷ ಬಸವರಾಜ ಜಾಲವಾದಿ, ಕಲಬುರಗಿ ವಿಭಾಗೀಯ ಸಂಯೋಜಕ ಡಾ. ಗಾಂಧೀಜಿ ಮೊಳಕೇರಿ, ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಸುನೀಲ ಜಾಬಾದಿ, ಬೀದರ್‌ ಜಿಲ್ಲಾ ಘಟಕದ ಅಧ್ಯಕ್ಷ ಪೀರಪ್ಪ ಸಜ್ಜನ್‌, ಸಾಹಿತಿ ಅನೀಲ ಹೊಸಮನಿ, ಸಮ್ಮೇಳನದ ಪ್ರಧಾನ ಸಂಯೋಜಕ ಶ್ರೀನಾಥ ಪೂಜಾರ ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್