ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಯಚೂರ ಜಿಲ್ಲೆಯಲ್ಲಿ ಡಿ.೩೦ರಂದು ಮುಖ್ಯಮಂತ್ರಿಗಳ ಪ್ರವಾಸ

Advertisement
ರಾಯಚೂರು ಡಿಸೆಂಬರ್ ೨೮ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿಸೆಂಬರ್ ೩೦ ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

Please subscribe and support my channel

https://youtu.be/p1qJCBPOoV0?si=HT-dQmFddWKEqB64

ಅಂದು ಬೆಳಿಗ್ಗೆ ೯.೩೦ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ ೧೦.೨೦ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್‌ಗೆ ಆಗಮಿಸುವರು. ಅಲ್ಲಿಂದ ೧೦.೩೦ಕ್ಕೆ ನಿರ್ಗಮಿಸಿ ೧೧.೦೫ಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿನ ಹೆಲಿಪ್ಯಾಡ್‌ಗೆ ಆಗಮಿಸಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾಲೇಜು ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿರುವ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ, ಜಲಜೀವನ್ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ಸರ್ಕಾರಿ ಪದವಿ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ಸಂಭ್ರಮ-೫೦ರ ಪ್ರಯುಕ್ತ ಕನ್ನಡ ರಥ ಮೆರವಣಿಗೆಗೆ ಚಾಲನೆ ಮತ್ತು ಸಿಂಧನೂರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವರು.



ಬಳಿಕ ಮಧ್ಯಾಹ್ನ ೩ ಗಂಟೆಗೆ ಸಿಂಧನೂರ ಹೆಲಿಪ್ಯಾಡ್‌ನಿಂದ ನಿರ್ಗಮಿಸಿ ೩.೩೫ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್‌ಗೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಆಗಿರುವ ಸರ್ಕಾರದ ಪದನಿಮಿತ್ತ ಅಪರ ಕಾರ್ಯದರ್ಶಿ ಕೆ ಚಿರಂಜೀವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ