ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಯಚೂರ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ನಿತೀಶ್ ಕೆ ಎಚ್ಚರಿಕೆ

Advertisement
ರಾಯಚೂರು ಜುಲೈ 14 .ಕರ್ನಾಟಕ ವೈದ್ಯಕೀಯ ಮಂಡಳಿ ಅಥವಾ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ಬೋರ್ಡ್ಗಳಿಂದ ಪ್ರಮಾಣ ಪತ್ರ ಪಡೆಯದೇ ವೈದ್ಯ ವೃತ್ತಿ ಮಾಡುತ್ತಿರುವವರನ್ನು ನಕಲಿ ವೈದ್ಯರೆಂದು ಪರಿಗಣಿಸಬೇಕಾಗುತ್ತದೆ. ಆಯಾ ತಾಲೂಕುಮಟ್ಟದ ಸಮಿತಿಗಳಿಂದ ಪರಿಶೀಲನೆ ವೇಳೆಯಲ್ಲಿ ನಕಲಿ ವೈದ್ಯರು ಎಂದು ಗೊತ್ತಾಗಿ ಅಂತಹ ಯಾರಾದರು ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್ ಮತ್ತು ಆಸ್ಪತ್ರೆ ನಡೆಸಿದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆಗಳ ನಿವಾರಣೆ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಕ್ಲಿನಿಕ್‌ಗಳಿಗೆ ನೋಟೀಸ್ ಜಾರಿ: ಕೆಪಿಎಂಇ ಕಾಯ್ದೆಯಡಿ ಚಿಕಿತ್ಸಾಲಯವನ್ನು ನೋಂದಾಯಿಸದೇ ಇರುವ, ಕೆಪಿಎಂಇ ಕಾಯ್ದೆಯಡಿ ಆಯುರ್ವೇದ ಆಸ್ಪತ್ರೆ ಎಂದು ನೋಂದಾಯಿಸಿ ಅಲೋಪತಿ ನಡೆಸುವ, ಯಾವುದೇ ಅಗ್ನಿಶಾಮಕ ನಿರ್ವಹಣೆ ಇಲ್ಲದ, ಕೆಪಿಎಂಇ ವ್ಯವಸ್ಥೆಯಡಿ ಹೋಮಿಯೋಪತಿ ಎಂದು ನೋಂದಾಯಿಸಿ ಅಲೋಪತಿ ನಡೆಸುವ, ಕೆಪಿಎಂಇ ಕಾಯ್ದೆಯಡಿ ಅಲೋಪತಿ ಎಂದು ನೊಂದಾಯಿಸಿ ಆಯುಷ್ ವೈದ್ಯಕೀಯ ನಡೆಸುವ, ಅನುಮತಿ ಇಲ್ಲದೇ ಎಕ್ಸರೆ ಮಾಡುವ ಬಗ್ಗೆ ಪರಿಶೀಲನೆ ವೇಳೆಯಲ್ಲಿ ಗೊತ್ತಾಗಿದ್ದರಿಂದ ದೇವದುರ್ಗ ತಾಲೂಕಿನ 10 ಖಾಸಗಿ ಕ್ಲಿನಿಕ್‌ಗಳು, ಸಿರವಾರ ತಾಲೂಕಿನ ಎರಡು ಖಾಸಗಿ ಕ್ಲಿನಿಕ್‌ಗಳು ಮತ್ತು ಮಾನ್ವಿ ತಾಲೂಕಿನ ಎರಡು ಖಾಸಗಿ ಕ್ಲಿನಿಕ್‌ಗಳಿಗೆ ಈಗಾಗಲೇ ನೋಟೀಸ್ ಜಾರಿ ಮಾಡಿ ಎಚ್ಚರಿಕೆ ನೀಡಿದ ಬಗ್ಗೆ ಜುಲೈ 10ರಂದು ನಡೆದ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ವಿಷಯವು ಸಭೆಯಲ್ಲಿ ಗಂಭೀರವಾಗಿ ಚರ್ಚೆಯಾಗಿದೆ. ಈ ಖಾಸಗಿ ಕ್ಲಿನಿಕ್‌ಗಳ ಮೇಲೆ ನಿಯಮಾನುಸಾರ ದಂಢವಿದಿಸಿ ಕ್ರಮವಹಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯಿದೆಯು ಈಗಾಗಲೇ ಜಾರಿ ಬಂದಿದೆ. ಈ ಕಾಯಿದೆಯನುಸಾರ ಕಾರ್ಯನಿರ್ವಹಿಸುವುದು ಆದ್ಯ ಕರ್ತವ್ಯವಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ಕಡ್ಡಾಯ ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಬೇಕು. ಅಗತ್ಯ ವಿದ್ಯಾರ್ಹತೆ ಇಲ್ಲದೇ ವೈದ್ಯಕೀಯ ವೃತ್ತಿ ಮತ್ತು ನರ್ಸಿಂಗ್ ಹೋಮ್ ನಡೆಸುವುದು ಕೆಪಿಎಂಇ ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಆರೋಗ್ಯಾಧಿಕಾರಿಗಳು ಈ ಕಾಯ್ದೆಯನ್ನು ಸರಿಯಾಗಿ ಅರಿಯಬೇಕು. ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಎಲ್ಲ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿ ಎಚ್ಚರಿಕೆ: ವೈದ್ಯಕೀಯ ಪದವಿ ಇಲ್ಲದೇ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ಧ ಹಾಗೂ ವೈದ್ಯಕೀಯ ಪದವಿ ಹೊಂದಿರುವ ವೈದ್ಯರು ಕೆಪಿಎಂಇ ಕಾಯ್ದೆಯಡಿಯಲ್ಲಿ ನೋಂದಣಿ ಆಗದೇ ಕ್ಲಿನಿಕ್, ಪಾಲಿ ಕ್ಲಿನಿಕ್, ನರ್ಸಿಂಗ್ ಹೋಮ್, ಆಸ್ಪತ್ರೆ, ಲ್ಯಾಬ್, ದಂತ ವೈದ್ಯರುಗಳು ವೃತ್ತಿ ಅಭ್ಯಾಸ ನಡೆಸುತ್ತಿದ್ದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಜೊತೆಗೆ ಕೆಪಿಎಂಇ ಕಾಯ್ದೆಯಡಿ ನೋಂದಾಯಿಸಿದ ಪದ್ಧತಿಯಲ್ಲೇ ವೈದ್ಯಕೀಯ ವೃತ್ತಿ ನಡೆಸುವುದನ್ನು ಬಿಟ್ಟು ಇತರೆ ಯಾವುದೇ ಪದ್ಧತಿಯಲ್ಲಿ ವೈದ್ಯ ವೃತ್ತಿ ನಡೆಸುತ್ತಿದ್ದಲ್ಲಿ ಅಂತವರ ವಿರುದ್ಧ ಕೆಪಿಎಂಇ ಕಾಯ್ದೆಯಡಿ 50 ಸಾವಿರ ರೂ ದಂಢ ಮತ್ತು 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂಬುದರ ಬಗ್ಗೆ ಈಗಾಗಲೇ ಪತ್ರಿಕಾ ಪ್ರಕಟಣೆ ಹೊರಡಿಸಿ ಎಚ್ಚರಿಕೆ ನೀಡಲಾಗಿದೆ.
ತಾಲೂಕುಮಟ್ಟದ ಸಮಿತಿ ರಚಿಸಿ ಆದೇಶ: ರಾಯಚೂರ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಕೆಪಿಎಂಇ ಕಾಯ್ದೆ ಅಡಿಯಲ್ಲಿ ತಾಲೂಕುಮಟ್ಟದ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್ ಹಾಗೂ ಲ್ಯಾಬಗಳು ಮತ್ತು ಆಸ್ಪತ್ರೆಗಳನ್ನು ಕೆಪಿಎಂಇ ಕಾಯ್ದೆಯಡಿ ವಿಧಿಸಲಾದ ಷರತ್ತುಗಳನ್ವಯ ಕಾಲಕಾಲಕ್ಕೆ ತಪಾಸಣೆ ಮಾಡಲು ತಹಸೀಲ್ದಾರ ಅಧ್ಯಕ್ಷತೆಯಲ್ಲಿ ತಾಲೂಕುಮಟ್ಟದ ತಾಲೂಕುಮಟ್ಟದ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್ ಹಾಗೂ ಲ್ಯಾಬಗಳು ಮತ್ತು ಆಸ್ಪತ್ರೆಗಳನ್ನು ತಪಾಸಣೆ ಮಾಡಲು ತಾಲೂಕುಮಟ್ಟದ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಮತ್ತು ತಾಲೂಕು ಐಎಂಎ ಅಧ್ಯಕ್ಷರು, ತಾಲೂಕು ಎಎಫ್‌ಐ ಅಧ್ಯಕ್ಷರು ಹಾಗೂ ತಾಲೂಕು ಪೊಲೀಸ್ ವೃತ್ತ ನಿರೀಕ್ಷಕರು ಸಮಿತಿಯ ಸದಸ್ಯರಾಗಿರುತ್ತಾರೆ. ಈ ತಂಡವು ಪ್ರತಿ ತಿಂಗಳು ಸುಮಾರು 10 ಸಂಸ್ಥೆಗಳಿಗೆ ಭೇಟಿ ನೀಡಿ ಕೆಪಿಎಂಇ ಕಾಯ್ದೆಯನ್ವಯ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ನೀಡುತ್ತಿರುವುದರ ಬಗ್ಗೆ ಪರಿಶೀಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್