ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರೆಡಿಯೋಲಾಜಿಸ್ಟ್, ಸೋನಾಲಾಜಿಸ್ಟನಂತಹ ಪರೀಕ್ಷೆ ಕೈಗೊಳ್ಳಲು ನೊಂದಣಿ ಕಡ್ಡಾಯ: ಡಾ.ಸುರೇಂದ್ರಬಾಬು

Advertisement
ರಾಯಚೂರು,ಮಾ.30,(ಕ.ವಾ):- ವೈದ್ಯಕೀಯ ತಳಿಶಾಸ್ತ್ರಜ್ಞ, ಸ್ತ್ರೀರೋಗ ತಜ್ಞ, ನೋಂದಾಯಿತ ವೈದ್ಯಕೀಯ ವೃತ್ತಿ ನಿರತರು ರೆಡಿಯೋಲಾಜಿಸ್ಟ್, ಸೋನಾಲಾಜಿಸ್ಟ್‍ನಂತಹ ಪರೀಕ್ಷೆ ಕೈಗೊಳ್ಳಲು ನೊಂದಣಿ ಕಡ್ಡಾಯವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು ಅವರು ಹೇಳಿದರು.

ಅವರು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ನೋಂದಾಯಿತ ವೈದ್ಯಕೀಯ ವೃತ್ತಿ ನಿರತರು ರೆಡಿಯೋಲಾಜಿಸ್ಟ್, ಸೋನಾಲಾಜಿಸ್ಟ್‍ನಂತಹ ಪರೀಕ್ಷೆ ಕೈಗೊಳ್ಳಲು ನೊಂದಣಿ ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ಒಟ್ಟು 9 ಅರ್ಜಿಗಳು ಬಂದಿದ್ದು, ಅದರಲ್ಲಿ 6 ಅರ್ಜಿಗಳು ನವೀಕರಣಕ್ಕೆ ಅರ್ಜಿಯನ್ನು ಸಲ್ಲಿಸಿವೆ. ಮೂರು ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದರು.

ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯನ್ವಯ ಜೆನಿಟಿಕ್ ಸಮಾಲೋಚನಾ ಕೇಂದ್ರಗಳು ಪ್ರಯೋಗಾಲಯಗಳು ಮತ್ತು ಚಿಕಿತ್ಸಾ ಕೇಂದ್ರಗಳನ್ನು ಸಂಬಂಧಿಸಿದ ಸುಕ್ಷಮ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಲಾಬೇಕು ಜೊತೆಗೆ ಯಾವುದೇ ವ್ಯಕ್ತಿ ಯಾವುದೇ ಚಿಕಿತ್ಸಾಲಯಗಳನ್ನು ಅತ್ಯಾಧುನಿಕ ಯಂತ್ರೋಪಕರಣಗಳಾದ ಅಲ್ಟ್ರಾಸೋನೋಗ್ರಾಫಿ, ಇಮೇಜ್ ಮಿಷನ್, ಸ್ಕ್ಯಾನರ್ ಸೇರಿದಂತೆ ಇನ್ನಿತರ ಯಂತ್ರೋಪಕರಣಗಳನ್ನು ಸ್ಥಾಪಿಸಬೇಕಾದರೆ ಕಡ್ಡಾಯವಾಗಿ ನೊಂದಣಿಯಾಗಲೇಬೇಕು ಎಂದು ಹೇಳಿದರು.



ಈ ನಿಯಮಗಳನ್ನು ಮೀರಿ ಯಾವುದೇ ವ್ಯಕ್ತಿಯು ಕಾಯ್ದೆಯ ಆಶಯಗಳ ವಿರುದ್ಧ ನಡೆದುಕೊಂಡಲ್ಲಿ ದಂಡ ವಿಧಿಸಿ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಲಹಾ ಸಮಿತಿಯ ಅಧ್ಯಕ್ಷ ಡಾ.ಶಿವಪ್ಪ ಮಾಲಿಪಾಟೀಲ್, ಜಿಲ್ಲಾ ಕಾರ್ಯದರ್ಶಿ ಶಿವಗಿರೇಶ, ಸದಸ್ಯರಾದ ಲಲಿತಾ ನಾಲ್ವಾಡೆ, ರಂಗಲಿಂಗನಗೌಡ, ಲಿಂಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ