ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವನಸಿರಿ ಫೌಂಡೇಶನ್ ವತಿಯಿಂದ ಶಿವಕುಮಾರ ಸ್ವಾಮಿಗಳು 116 ನೇ ಜಯಂತಿ

Advertisement
ಮಾ.29 ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ವನಸಿರಿ ಫೌಂಡೇಶನ್ ರಾಜ್ಯ ಘಟಕದ ವತಿಯಿಂದ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ ಮಾಡುವ ಮೂಲಕ ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಉದ್ಘಾಟನೆ ಕಾರ್ಯಕ್ರಮ ಹಾಗೂ ನಡೆದಾಡುವ ದೇವರು ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 116ನೇ ಜಯಂತಿ ಅಂಗವಾಗಿ ಅನ್ನದಾಸೋಹ ಕಾರ್ಯಕ್ರಮವನ್ನು ಇದೇ ಎಪ್ರಿಲ್ 1ರಂದು ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ (ಡಿ.ಇ.ಎಡ್ PWD ಕ್ಯಾಂಪ್)ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತಿಳಿಸಿದರು.



ಪರಿಸರ ಎಂಬುದು ನಮ್ಮ ಸುತ್ತಮುತ್ತಲಿನ ವಾತಾವರಣವೇ ಪರಿಸರ.ಈ ವಾತಾವರಣದಲ್ಲಿ ಅನೇಕ ರೀತಿಯಜೀವಿಗಳು ವಾಸಿಸುತ್ತಿವೆ.ಮನುಷ್ಯ,ಕಾಡು ಪ್ರಾಣಿಗಳು,ಪಕ್ಷಿಗಳು, ಚಿಟ್ಟೆಗಳು ಹೀಗೆ ಇನ್ನೂ ಹಲವಾರು ಜೀವಿಗಳು ಈ ವಾತವರಣದಲ್ಲಿ ಜೀವಿಸುತ್ತವೆ.ಈ ಎಲ್ಲಾ ಜೀವರಾಶಿಗಳು ಈ ಭೂಮಿಯ ಮೇಲೆ ವಾಸಿಸಬೇಕಾದರೆ ಪ್ರಮುಖವಾಗಿ ಗಾಳಿ,ನೀರು, ಆಹಾರ ಅತಿ ಮುಖ್ಯವಾಗಿರುತ್ತದೆ.ಇವುಗಳನ್ನು ಈ ಪರಿಸರದಲ್ಲಿ ಬೆಳೆದ ಗಿಡಮರಗಳಿಂದಲೇ ಪಡೆದುಕೊಳ್ಳಬೇಕು.ಇತ್ತೀಚಿನ ದಿನಗಳಲ್ಲಿ ಮನುಷ್ಯ ಅಧುನಿಕತೆಗೆ ಮಾರುಹೋಗಿ ಗಿಡಮರಗಳನ್ನು ಕಡಿಯುತ್ತಿದ್ದಾನೆ ಇದರಿಂದಾಗಿ ಶುದ್ಧವಾದ ಗಾಳಿ ಸಿಗುತ್ತಿಲ್ಲ ಉಸಿರಾಟದ ತೊಂದರೆಯನ್ನು ಅನುಭವಿಸುತ್ತಿದ್ದಾನೆ ಇದರಿಂದ ಮನುಷ್ಯನ ಜೀವಿತಾವಧಿಯು ಕಡಿಮೆಯಾಗುತ್ತಿದೆ.ಇದನ್ನರಿತು ನಾನು ಮತ್ತು ನನ್ನ ಸ್ನೇಹಿತರು ಸೇರಿಕೊಂಡು ಈ ಪರಿಸರಕ್ಕೆ ಏನಾದರೂ ಒಂದು ಸೇವೆ ಮಾಡೋಣ ಎಂದು ತೀರ್ಮಾನಿಸಿ ವನಸಿರಿ ಫೌಂಡೇಶನ್ ಸಂಸ್ಥೆಯನ್ನು ಸುಮಾರು 9 ವರ್ಷಗಳ ಹಿಂದೆಯೇ ಪ್ರಾರಂಭಿಸಿ ಸಸಿಗಳನ್ನು ಪಾಲನೆ ಪೋಷಣೆ ಮಾಡುತ್ತಿದ್ದೇವೆ.



ಆದಾಗ್ಯೂ ಕೂಡಾ ನಮ್ಮ ಭಾಗದಲ್ಲಿ ಬಿಸಿಲು ಜಾಸ್ತಿ ಇರುವುದರಿಂದ ಬೇಸಿಗೆಯಲ್ಲಿ ಜನರೇ ಕುಡಿಯಲು ನೀರಿಗೆ ಆಹಾಕಾರ ಪಡುತ್ತಿರುವಾಗ ಮೂಕ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವವರಾರು ಎಂಬ ಪ್ರಶ್ನೆ ಎದುರಾದಾಗ ನಮ್ಮ ಸ್ನೇಹಿತರೊಂದಿಗೆ ಚರ್ಚಿಸಿ ಮೂಕ ಪಾಣಿ ಪಕ್ಷಿಗಳಿಗೆ ಅರವಟ್ಟಿಗೆ ನಿರ್ಮಿಸಿ ಬೇಸಿಗೆಯಲ್ಲಿ ನೀರುಣಿಸುವ ಕಾರ್ಯಕ್ಕೆ ತೀರ್ಮಾನಿಸಲಾಯಿತು. ಜೊತೆಗೆ ಇತ್ತೀಚಿನ ಅಧುನಿಕತೆಗೆ ಮಾರುಹೋದ ಯುವಕ ಯುವತಿಯರನ್ನು ಪರಸರ ಸಂರಕ್ಷಣೆಯಲ್ಲಿ ತೊಡಗಿಸಲು ಕರ್ನಾಟಕ ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವನಸಿರಿ ಫೌಂಡೇಶನ್ ವತಿಯಿಂದ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಈ ವಿನೂತನ ಕಾರ್ಯಕ್ರಮವನ್ನು ಸುಮಾರು 6ವರ್ಷಗಳಿಂದ ಮಾಡಿಕೊಂಡು ಬಂದಿದ್ದು, ಇದಕ್ಕೆ, ನಿರುಪಯುಕ್ತ ವಸ್ತುಗಳನ್ನು ಬಳಸಿಕೊಂಡು ಮಣ್ಣಿನ ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಪ್ರತಿವರ್ಷ ಸುಮಾರು 20 ಸಾವಿರ ಅರವಟ್ಟಿಗೆ ತಯಾರಿಸ ಲಾಗುತ್ತಿದೆ.ಈ ಕಾರ್ಯಕ್ರಮವನ್ನು ಪೂಜ್ಯರ ಹಾಗೂ ಗಣ್ಯವ್ಯಕ್ತಿಗಳಿಂದ ಉದ್ಘಾಟನೆಗೊಳಿಸಿ ಅರವಟ್ಟಿಗೆಗಳನ್ನು ರಾಜ್ಯದ ನಾನಾ ಭಾಗಗಳಿಗೆ ಕಳಿಸಿ ಕೊಡಲಾಗುತ್ತದೆ. ಅಲ್ಲಿನ ಸ್ಥಳೀಯ ಸಂಸ್ಥೆಗಳ ಜೊತೆಗೂಡಿ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ.ಈ ಒಂದು ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಕಾರ್ಯಕ್ರಮವನ್ನು ಈ ಬಾರಿ ಇದೇ ಎಪ್ರಿಲ್ 1ರಂದು ಸಿಂಧನೂರಿನ ಶಿಕ್ಷಕರ ತರಬೇತಿ ಕೇಂದ್ರ ಪಿ.ಡಬ್ಲ್ಯೂ ಡಿ ಕ್ಯಾಂಪ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಪರಮ ಪೂಜ್ಯರು,ಗಣ್ಯವ್ಯಕ್ತಿಗಳು, ಪತ್ರಿಕಾ ಹಾಗೂ ಮಾದ್ಯಮ ಮಿತ್ರರು,ವಿವಿಧ ಜಿಲ್ಲೆಗಳ ಪರಿಸರ ಪ್ರೇಮಿಗಳು,ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಲ್ಲಾ ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ