ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿದ್ಯುತ್ ತಂತಿ ತಗಲಿ ಕರಜಗಿ ಆಸ್ಪತ್ರೆಯ ಸಿಬ್ಬಂದಿ ಶಿವಪುತ್ರ ಸಾವು

Advertisement
ಅಫಜಲಪುರ:ತಾಲೂಕಿನ ಕರಜಗಿ ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿರುವ ಶಿವಪುತ್ರ(30) ಆಸ್ಪತ್ರೆಯ ಮೇಲೆ ಸಿಂಟೆಕ್ಸ್ ನೀರು ತುಂಬಲು ಹೋದಾಗ ವಿದ್ಯುತ್ ತಂತಿ ತಗುಲಿ ಸಾವನಪ್ಪಿರುವ ಘಟನೆ ಕರಜಗಿ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳಿಗ್ಗೆ ಯಥಾವತ್ತಾಗಿ ತಮ್ಮ ಕೆಲಸಕ್ಕೆ ಆಸ್ಪತ್ರೆಗೆ ಆಗಮಿಸಿದ ಶಿವಪುತ್ರ ಆಸ್ಪತ್ರೆಯ ನಿರ್ವಹಣೆಗೆ ನೀರು ಖಾಲಿಯಾಗಿರುವುದನ್ನು ಕಂಡು ಆಸ್ಪತ್ರೆಯ ಮೇಲಿರುವ ಸಿಂಟೆಕ್ಸಗೆ ನೀರು ತುಂಬಲು ಹೋಗಿದ್ದಾನೆ.ಆಸ್ಪತ್ರೆಯ ಮೇಲ್ಚಾವಣಿಗೆ ಅಂಟಿಕೊಂಡಿರುವ ಮೇನ್ ಲೈನ್ ವಿದ್ಯುತ್ ತಂತಿ ಸ್ಪರ್ಶಕ್ಕೆ ಸ್ಥಳ‌ದಲ್ಲಿಯೇ ಸಾವನಪ್ಪಿರುವ ಘಟನೆ ಜರುಗಿದೆ.ಈ ಹಿಂದೆ ಅದೇ ವಿದ್ಯುತ್ ತಂತಿಯ ಸ್ಪರ್ಶಕ್ಕೆ ಒಂದು ಮೇಕೆ ಸಾವನಪ್ಪಿರುವ ಘಟನೆ ಜರುಗಿದೆಯಾದರೂ ಅಲ್ಲಿನ ವೈದ್ಯಾಧಿಕಾರಿಗಳಾದ ಡಾ.ಮಹಮ್ಮದ್ ಇಶಾದ್ ಅಲಿ ಇಲ್ಲಿಯವರೆಗೆ ಅದರ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದಕ್ಕೆ ಸ್ಥಳೀಯರು ಆರೋಪಿಸಿದರು. ಆಸ್ಪತ್ರೆಯ ಮೇಲ್ಚಾವಣಿಗೆ ಅಟ್ಟಿಕೊಂಡಿರುವ ವಿದ್ಯುತ್ ತಂತಿಯನ್ನು ಗಮನಿಸಿದರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯಧೋರಣೆ ತೋರುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.ಘಟನೆ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://youtu.be/judz_plvGHE?si=kYUDng8hx_IKBfug

ಮೃತ ಶಿವಪುತ್ರ ಮದುವೆಯಾಗಿ ಒಂದು ವರ್ಷವಾಗಿದ್ದು ವಿದ್ಯುತ್ ತಂತಿಯ ಸ್ಪರ್ಶದ ಅಚಾತುರ್ಯಕ್ಕೆ ಸರಕಾರಿ ನೌಕರ ಸಾವನಪ್ಪಿದು,ಕುಟುಂಬದ ಸದಸ್ಯರಿಗೆ ಸಹಿಸಿಕೊಳ್ಳಲಾಗದ ದುಃಖವಾಗಿದೆ.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ