ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಧಾನಸಭಾ ಚುನಾವಣೆಯ ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

Advertisement
ಏಪ್ರಿಲ್ 27. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೊಮ್ಮನಾಳ (ಇಜೆ) ಗ್ರಾಮದಲ್ಲಿನ ಮಾದಿಗ ಸಮುದಾಯದ ಜನರು ಮೇ ಹತ್ತರಂದು ನಡೆಯುತ್ತಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸುತ್ತೇವೆ ಎಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕಳೆದ 70-80 ವರ್ಷಗಳಿಂದಲೂ ನಮ್ಮ ಗಾಮದಲ್ಲಿ ವಾಸ ಮಾಡುತ್ತಿರುವ ದಲಿತ (ಮಾದಿಗ) ಸಮುದಾಯದ ಜನರು ಸರ್ಕಾರದ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಮತ್ತು 150 ಮತದಾರರ ಕುಟುಂಬಸ್ಥರು ಇವತ್ತಿಗೂ ಸಾಮಾಜಿಕ ಸ್ಥಾನಮಾನ ಪಡೆಯದೇ ಆನೇಕ ಮೂಲಭೂತ ಸಮಸ್ಯೆಗಳ ಮಧ್ಯ ಜೀವನ ಮಾಡುತ್ತಿದ್ದು ಜನರಿಗೆ ನಿವೇಶನ ಮತ್ತು ವಸತಿ ಹಾಗೂ ರಸ್ತೆ ಚರಂಡಿ ನಿರ್ಮಾಣಗಳು ಬಹು ಅತ್ಯವಶ್ಯವಾಗಿವೆ ಎಂಬುದು ತಮ್ಮಗಳಿಗೆ ಮನದಟ್ಟು ಮಾಡುತ್ತಿದ್ದೇವೆ. ನಮ್ಮ ಮಾದಿಗ ಸಮುದಾಯದ ಜನರು ಇವತ್ತಿಗೂ ಪ್ರತಿಯೊಂದು ಪಕ್ಷಗಳ ಅಭ್ಯರ್ಥಿಗಳಿಗೆ ಮತಗಳನ್ನು ಹಾಕುತ್ತಾ ಬಂದಿದ್ದರು ಕೂಡ ಚುನಾವಣೆಗಳಲ್ಲಿ ಗೆದ್ದ ಅಭ್ಯರ್ಥಿಗಳು ಬಗ್ಗೆ ಸುಳ್ಳು ಭರವಸೆಗಳನ್ನು ನೀಡುತ್ತಲೇ ಬಂದಿದ್ದಾರೆ ವಿನಹ ಇವತ್ತಿಗೂ ನಮ್ಮ ಮಾದಿಗ ಸಮುದಾಯಲ್ಲಿ ಯಾವುದೇ ಸರ್ಕಾರದ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲು ಮುಂದೆ ಬರೆದಿರುವದು ಈ ಪ್ರಜಾ ಪ್ರಭುತ್ವದಲ್ಲಿ ದೊಡ್ಡ ದುರಂತವೇ ಸರಿ



ಕಳೆದ 3-4 ತಿಂಗಳಗಳ ಹಿಂದೆ ನಮ್ಮ ಬೊಮ್ಮನಾಳ (ಇಜೆ) ಗ್ರಾಮದಲ್ಲಿ ಡಿ.ಸಿ. ನಡೆ ಹಳ್ಳಿ ಕಡೆ ಕಾರ್ಯಕ್ರರು‌ ಗೌರವ ನಿತವಾಗಿ ತಾವುಗಳು ಭಾಗವಹಿಸಿ ಪ್ರತಿ ಕಾಲೋನಿಗಳಲ್ಲಿ ಪಾದಯಾತ್ರೆ ಮಾಡಿದಂತೆ ನಮ್ಮ ಮಾದಿಗ ಸಮುದಾಯದ ಕಾಲೋನಿಯಲ್ಲಿ ಪಾದಯಾತ್ರೆ ಮಾಡಿ ಅನೇಕ ಮೂಲಭೂತ ಸೌಲಭ್ಯಗಳ ಕೊರತೆಯನ್ನು ತಾವುಗಳು ಸೇರಿದಂತೆ ತಹಶೀಲ್ದಾರರು ಸಿಂಧನೂರು ಹಾಗೂ ಶಾಸಕರು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಪರಿಹಾರ ನೀಡುವ ಭರವಸೆಯನ್ನು ಸಹ ಕೊಟ್ಟಿರುತ್ತಾರೆ, ಆದರೆ ಇದುವರಿಗೆ ಸರ್ಕಾರದಲ್ಲಿ ಮಾದಿಗ ಸಮುದಾಯದ ಜನರಿಗೆ ಸರ್ಕಾರದ ಯಾವುದೇ ಸಮಸ್ಯೆಗಳಿಗೆ ಪರಿಹಾರ ಮಾತ್ರ ಶೂನ್ಯವಾಗಿ ಪರಿಣಮಿಸಿದೆ.

ಆ ನಿಟ್ಟಿನಲ್ಲಿ ಮಾದಿಗ ಸಮುದಾಯದ 150 ಮತದಾರರು ನಮ್ಮ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ಯಾವುದೇ ಪಕ್ಷಗಳ ಅಭ್ಯರ್ಥಿಗಳಿಗೆ ಮತದಾನ ಮಾಡಬಾರದು ಎಂದು ಒಮ್ಮತದಿಂದ ನಿರ್ಧಾರವನ್ನು ಕೈಗೊಂಡಿರುವುದಾಗಿ ತಮ್ಮಲ್ಲಿ ಈ ಮೂಲಕ ತಿಳಿಸಲು ಬಯಸುತ್ತೇವೆ ಮತ್ತು ನಮ್ಮ ಸಮುದಾಯದ ಜನರಿಗೆ ಇರುವ ನಮ್ಮ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದಲ್ಲಿ ಮಾತ್ರ ಮತದಾನ ಮಾಡಲು ಇಚ್ಚಿಸುತ್ತೇವೆಂದು ಎಂದು ತಸಿಲ್ದಾರರ ಮೂಲಕ ಮನವಿಪತ್ರ ಸಲ್ಲಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್