ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿವೇಕಪೂರ್ಣಿ ಅಂಗವಾಗಿ ಫಕೀರ್ ಸಾಬ್ ಗೆ ‌ಶ್ರಮಜೀವಿ ಪ್ರಶಸ್ತಿ ನೀಡಿ, ವಿಶೇಷ ಸನ್ಮಾನ

Advertisement
ಜುಲೈ 05.ಸಿಂಧನೂರು ನಗರದ ಬಪ್ಪೂರ ರಸ್ತೆಯಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೋಮವಾರ ನಡೆದ ಎರಡನೇ ವಿವೇಕ ಪೂರ್ಣಿಮೆ ಕಾರ್ಯಕ್ರಮದಲ್ಲಿ ನಗರದಲ್ಲಿ ಸುಮಾರು 45ವರ್ಷಗಳಿಂದ ಕಟ್ಟಡ ಸಾಮಾಗ್ರಿಗಳನ್ನು ಕೊಂಡೊಯ್ಯುವ ಬಂಡಿ ಎಳೆದು ತಮ್ಮ ಬದುಕಿನ ಬಂಡಿ ಸಾಗಿಸುತ್ತಿರುವ ಶ್ರಮಜೀವಿಯಾದ 65ವರ್ಷದ ಫಕೀರ್ ಸಾಬ್ ತಂದೆ ಮಾಲೀಕ್ ಸಾಬ್ ಬಡಿಬೇಸ್ ನಿವಾಸಿಯನ್ನು ಸನ್ಮಾನ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.



ನಂತರ ಆಶ್ರಮದಲ್ಲಿ ಸಂಜೆ ಗುರುಪೂರ್ಣಿಮೆಯ ನಿಮಿತ್ತ ನಡೆದ ವಿವೇಕ ಪೂರ್ಣಿಮೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಡಾ. ವಿಶ್ವನಾಥ ರೆಡ್ಡಿ ವರದಾ ಆಸ್ಪತ್ರೆ ಇವರು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರರಥಕೆ ವಿವೇಕಾನಂದರ ವಿಚಾರಗಳೆ ಸಾರಥಿ ವಿಷಯದ ಕುರಿತು ಪ್ರವಚನಕಾರರಾದ ಕಿರಣಕುಮಾರ ವಿವೇಕವಂಶಿ ಇವರು ಪ್ರವಚನ ನೀಡಿದರು.

ವೈ. ನರೇಂದ್ರನಾಥ, ಅಧ್ಯಕ್ಷರು ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಒಕ್ಕೂಟ, ಮುಖ್ಯ ಅಥಿತಿಗಳಾಗಿ ಮಾತನಾಡಿದರು, ಸಿಂಧನೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಸದಾನಂದ ಮಹಾರಾಜ್ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ನೇತ್ರ ತಜ್ಞ ಡಾ ಚನ್ನನಗೌಡ ಪೋಲಿಸ್ ಪಾಟೀಲ್, ಬಸವ ಮಕ್ಕಳ ಆಸ್ಪತ್ರೆ ವೈದ್ಯರಾದ ಡಾ.ಚನ್ನಬಸವ ಪಾಟೀಲ್, ಮಹಾಂತೇಶ್ ದೇಶನೂರು, ವಿರೇಶ ನಾಡಗೌಡ, ಕಳಕಪ್ಪ ಗಡದ್‌,ಬಸಿರ್ ಯತ್ಮಾರಿ, ಚನ್ನವೀರನಗೌಡ ಸಹ ಕಾರ್ಯದರ್ಶಿ ಜೀವ ಸ್ಪಂದನ ಚಾರಿಟೇಬಲ್ ಟ್ರಸ್ಟ್, ಬಸವರಾಜ ಬಂಗಾರಶೆಟ್ಟರು ಸೇರಿದಂತೆ ಹಲವಾರು ಭಕ್ತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ